ಬ್ರೇಕಿಂಗ್ ನ್ಯೂಸ್
27-03-23 01:10 pm HK News Desk ದೇಶ - ವಿದೇಶ
ಅಹ್ಮದಾಬಾದ್, ಮಾ.27 : ಗುಜರಾತ್ ಗಲಭೆ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬ ಸದಸ್ಯರ ಹತ್ಯೆಗೈದ ಪ್ರಕರಣದಲ್ಲಿ ಕೋರ್ಟ್ ಅಪರಾಧಿಯೆಂದು ಗುರುತಿಸಿದ್ದ ವ್ಯಕ್ತಿ ಗುಜರಾತ್ನಲ್ಲಿ ನಡೆದ ಸರಕಾರಿ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ, ಶಾಸಕರ ಜತೆ ವೇದಿಕೆ ಹಂಚಿಕೊಂಡಿದ್ದು ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಬಿಲ್ಕಿಸ್ ಬಾನು ಪ್ರಕರಣದಲ್ಲಿ ಗುಜರಾತ್ ಸರ್ಕಾರ 11 ಮಂದಿ ಅಪರಾಧಿಗಳನ್ನು ಸನ್ನಡತೆ ನೆಪದಲ್ಲಿ ಬಿಡುಗಡೆ ಮಾಡಿದ್ದು ಆ ಕುರಿತ ಆದೇಶವನ್ನು ರದ್ದುಪಡಿಸುವಂತೆ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಕೆಯಾಗಿದ್ದು ವಿಚಾರಣೆ ಹಂತದಲ್ಲಿದೆ. ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಆಕೆಯ ಕುಟುಂಬ ಸದಸ್ಯರನ್ನು ಹತ್ಯೆಗೈದ ಆರೋಪದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಗುಜರಾತ್ ಸರ್ಕಾರದ ಕ್ರಮದ ವಿರುದ್ಧ ಕೋರ್ಟಿಗೆ ಅರ್ಜಿ ಸಲ್ಲಿಕೆಯಾಗಿದ್ದು ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರ ನ್ಯಾಯಪೀಠವು ವಿಚಾರಣೆ ನಡೆಸಲಿದೆ.
2001ರ ಗುಜರಾತ್ ಗಲಭೆ ಸಂದರ್ಭದಲ್ಲಿ ಸಂತ್ರಸ್ತೆ ಬಿಲ್ಕಿಸ್ ಬಾನು ಅವರಿಗೆ 21 ವರ್ಷ ಮತ್ತು ಐದು ತಿಂಗಳ ಗರ್ಭಿಣಿಯಾಗಿದ್ದರು. ಗಲಭೆ ಸಂದರ್ಭದಲ್ಲಿ ಹಿಂಸಾಚಾರದಿಂದ ತಪ್ಪಿಸಿಕೊಳ್ಳುವ ಸಂದರ್ಭದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದರು. ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಿದ್ದಲ್ಲದೆ, ಮೂರು ವರ್ಷದ ಮಗುವನ್ನೂ ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಬಂಧಿಸಲ್ಪಟ್ಟು ಜೈಲು ಪಾಲಾಗಿದ್ದ ಕೈದಿಗಳನ್ನು ಗುಜರಾತ್ ಸರ್ಕಾರ ಇತ್ತೀಚೆಗೆ ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಿದ್ದು ತೀವ್ರ ಟೀಕೆಗೆ ಗುರಿಯಾಗಿತ್ತು.
ಇದೀಗ ಗುಜರಾತಿನ ದಹೋಡ್ ಎಂಬಲ್ಲಿ ಸರ್ಕಾರದ ನೀರು ಸರಬರಾಜು ಯೋಜನೆಯ ಉದ್ಘಾಟನೆ ಸಮಾರಂಭದಲ್ಲಿ 11 ಅಪರಾಧಿಗಳಲ್ಲಿ ಒಬ್ಬ ಶೈಲೇಶ್ ಭಟ್ ಎಂಬಾತ ಭಾಗವಹಿಸಿದ್ದ. ಇದರ ಫೋಟೋವನ್ನು ಬಿಜೆಪಿ ಸಂಸದ ಜಸ್ವಂತ್ಸಿನ್ಹ್ ಭಭೋರ್ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಗುಜರಾತ್ ಬಿಜೆಪಿ ಶಾಸಕ ಶೈಲೇಶ್ಭಾಯ್ ಭಭೋರ್ ಸೇರಿದಂತೆ ಹಲವು ಪ್ರಮುಖರು ವೇದಿಕೆಯಲ್ಲಿದ್ದರು. ಇದರ ಫೋಟೊ ವೈರಲ್ ಆಗಿದ್ದು ಕಾಂಗ್ರೆಸ್, ಟಿಎಂಸಿ, ಟಿಆರ್ ಎಸ್ ಸೇರಿದಂತೆ ವಿಪಕ್ಷಗಳ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅತ್ಯಾಚಾರಿಗಳಿಗೆ ಹೆಮ್ಮೆಯ ಸ್ಥಾನ ನೀಡುವುದು ಮತ್ತು ಪುನರ್ವಸತಿ ಕಲ್ಪಿಸುವುದು ಯಾವುದೇ ರಾಜಕೀಯ ಪಕ್ಷಕ್ಕೆ ಶೋಭೆ ತರಲ್ಲ. ಅದರಲ್ಲೂ ಆಡಳಿತಾರೂಢ ಬಿಜೆಪಿ ನಡೆ ಖಂಡನೀಯ. ಇವರ ಮಹಿಳೆಯರ ಕುರಿತ ಗೌರವದ ಮಾತುಗಳು ಘೋಷಣೆಗೆ ಸೀಮಿತ ಎಂದು ಶಿರೋಮಣಿ ಅಕಾಲಿದಳದ ಸಂಸದೆ ಹಾಗೂ ಕೇಂದ್ರದ ಮಾಜಿ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಹೇಳಿದ್ದಾರೆ.
Two days before the Supreme Court hearing of challenge to the release of convicts in the Bilkis Bano case, one of the 11 convicts shared the stage with two Bharatiya Janata Party (BJP) lawmakers on Saturday.
10-10-25 07:06 pm
HK News Desk
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
09-10-25 10:31 pm
HK News Desk
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
10-10-25 06:52 pm
Mangalore Correspondent
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm