ಬ್ರೇಕಿಂಗ್ ನ್ಯೂಸ್
03-04-23 02:16 pm HK News Desk ದೇಶ - ವಿದೇಶ
ಇಂದೋರ್, ಎ.3: ಕೆಲ ದಿನಗಳ ಹಿಂದೆಯಷ್ಟೇ ಮೆಟ್ಟಿಲುಬಾವಿ ಕುಸಿದು 36 ಜನರ ಸಾವಿಗೆ ಕಾರಣವಾಗಿದ್ದ ಬಲೇಶ್ವರ್ ಮಹಾದೇವ್ ದೇವಸ್ಥಾನದ ಅಕ್ರಮ ನಿರ್ಮಾಣವನ್ನು ಇಂದೋರ್ ನಗರ ಪಾಲಿಕೆಯು ಸೋಮವಾರ ತೆರವು ಮಾಡಿದೆ.
ಇಂದು ಬೆಳಗ್ಗೆಯಿಂದಲೇ ಅಕ್ರಮ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳು ಭಾರೀ ಸಂಖ್ಯೆಯಲ್ಲಿ ನೆರೆದಿರುವುದರಿಂದ ಯಾವುದೇ ಪ್ರತಿರೋಧ ವ್ಯಕ್ತವಾಗಿಲ್ಲ.
ಸಂಭಾವ್ಯ ಪ್ರತಿರೋಧವನ್ನು ತಡೆಯಲು ನಾಲ್ಕು ಪೊಲೀಸ್ ಠಾಣೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸ್ಥಳದಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತರು, ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳು ಇದ್ದಾರೆ.

ಏತನ್ಮಧ್ಯೆ, ಸ್ಥಳದಲ್ಲಿದ್ದ ದೇವಾಲಯದ ಅರ್ಚಕರೊಬ್ಬರು ಮಾತನಾಡಿ, ದೇವಾಲಯದಲ್ಲಿದ್ದ ಮೂರ್ತಿಗಳಿಗೆ ವಿಧಿ ವಿಧಾನಗಳ ಪ್ರಕಾರ ಪ್ರಾರ್ಥನೆ ಸಲ್ಲಿಸಲಾಗಿದ್ದು, ಅವುಗಳನ್ನು ಕಂಟಫೋಡ್ ದೇವಾಲಯಕ್ಕೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದಾರೆ.
ಕೆಲ ದಿನಗಳ ಹಿಂದೆ ಈ ದೇವಸ್ಥಾನದ ಒಳಗಡೆ ಕುಸಿತವಾಗಿ 36 ಜನರು ಅಸುನೀಗಿದ್ದರು. ಕುಸಿದ ದೇವಾಲಯದ ಪ್ರದೇಶವು ಅಕ್ರಮ ರಚನೆಯಾಗಿದೆ ಎಂದು ಅದನ್ನು ಮೆಟ್ಟಿಲುಬಾವಿಯ ಹೊದಿಕೆಯನ್ನು ನೆಲಸಮ ಮಾಡಲು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್ ಕಳೆದ ವರ್ಷ ಸೂಚಿಸಿತ್ತು. ಆದರೆ, ದೇವಾಲಯದ ಟ್ರಸ್ಟ್ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ಎಚ್ಚರಿಸಿದ ನಂತರ ಮುನಿಸಿಪಾಲಿಟಿ ಅದರಿಂದ ಹಿಂದೆ ಸರಿದಿತ್ತು.

ರಾಮ ನವಮಿಯಂದು ಜನಸಂದಣಿಯ ಭಾರದಿಂದ ಮೆಟ್ಟಿಲುಬಾವಿಯ ಮೇಲ್ಛಾವಣಿ ಒಡೆದು ಹೋಗಿತ್ತು. ಘಟನೆ ನಡೆದಾಗ ದೇವಸ್ಥಾನದಲ್ಲಿ ಹೋಮ ಹವನ ನಡೆಯುತ್ತಿತ್ತು.
ದುರಂತದ ನಂತರ, ಭಾರತೀಯ ದಂಡ ಸಂಹಿತೆ ಸೆಕ್ಷನ್ 304 ಅಡಿಯಲ್ಲಿ ಬಲೇಶ್ವರ್ ಮಹಾದೇವ್ ಜುಲೇಲಾಲ್ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಸೇವಾರಾಮ್ ಗಲಾನಿ ಮತ್ತು ಕಾರ್ಯದರ್ಶಿ ಮುರಳಿ ಕುಮಾರ್ ಸಬ್ನಾನಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.

ಇಬ್ಬರು ಆರೋಪಿಗಳು ಮೆಟ್ಟಿಲುಬಾವಿಯ ಮೇಲೆ ಮೇಲ್ಛಾವಣಿಯನ್ನು ಹಾಕುವ ಮೂಲಕ ಅಸುರಕ್ಷಿತ ನಿರ್ಮಾಣ ಕಾರ್ಯವನ್ನು ಮಾಡಿದ ಆರೋಪವನ್ನು ಎದುರಿಸುತ್ತಿದ್ದಾರೆ, ಅಸುರಕ್ಷಿತ ನಿರ್ಮಾಣದಿಂದಾಗಿ 36 ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್ ದೇವಾಲಯದ ಸಂಕೀರ್ಣದಲ್ಲಿನ ಅಕ್ರಮ ನಿರ್ಮಾಣವನ್ನು ತೆಗೆದುಹಾಕಲು ಟ್ರಸ್ಟ್ಗೆ ಆದೇಶ ನೀಡಲಾಗಿತ್ತು, ಆದರೆ ಟ್ರಸ್ಟ್ ಆದೇಶವನ್ನು ಪಾಲಿಸಿರಲಿಲ್ಲ.
Bulldozers deployed by the Indore Municipal Corporation on Monday demolished illegal construction at the Beleshwar Jhulelal Mahadev Temple, where last Thursday, 36 people were killed after its floor caved into a stepwell.District administration officials and police personnel were present in strength as bulldozers rolled in.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm