ಬ್ರೇಕಿಂಗ್ ನ್ಯೂಸ್
15-04-23 08:44 pm HK News Desk ದೇಶ - ವಿದೇಶ
ಹೈದರಾಬಾದ್, ಎ.15 : ಬಿ ಟೆಕ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ಕೊಠಡಿಯಲ್ಲಿ ಗರ್ಭಪಾತ ಮಾಡಿಸಿಕೊಂಡು ತೀವ್ರ ರಕ್ತಸ್ರಾವದಿಂದ ಸಾವಿಗೀಡಾದ ಘಟನೆ ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನಡೆದಿದೆ.
ನೆಲ್ಲೂರು ಜಿಲ್ಲೆಯ ಮರ್ರಿಪಾಡು ಮಂಡಲದ 19 ವರ್ಷದ ಯುವತಿಯೊಬ್ಬಳು ನೆಲ್ಲೂರು ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಟೆಕ್ ಓದುತ್ತಿದ್ದಳು. ಎ.11 ರಂದು ಇತರ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ತರಗತಿಯಿಂದ ಹೊರಗಿದ್ದರು. ಈ ವೇಳೆ ವಿದ್ಯಾರ್ಥಿನಿ ತರಗತಿಯ ಒಳಗೆ ಹೋಗಿದ್ದು ಬಾಗಿಲು ಲಾಕ್ ಮಾಡಿಕೊಂಡಿದ್ದಳು. ತುಂಬ ಹೊತ್ತಾದರೂ ಹೊರಗೆ ಬಾರದಿರುವುದನ್ನು ಕಂಡು ವಿದ್ಯಾರ್ಥಿನಿಯರು ಹುಡುಕಾಡಿದ್ದು ಕ್ಲಾಸ್ ರೂಂನಲ್ಲಿ ಬಾಗಿಲು ಹಾಕ್ಕೊಂಡಿರುವುದು ಪತ್ತೆಯಾಗಿದೆ. ನಂತರ ವಿದ್ಯಾರ್ಥಿಗಳು ಬಾಗಿಲು ಮುರಿದು ನೋಡಿದಾಗ ಕ್ಲಾಸ್ ರೂಮಿನಲ್ಲಿ ಯುವತಿ ಭಾರೀ ರಕ್ತಸ್ರಾವದ ನಡುವಲ್ಲಿ ಬಿದ್ದಿದ್ದಳು.
ಪಕ್ಕದಲ್ಲೇ ಭ್ರೂಣವನ್ನು ಕಂಡು ಆಶ್ಚರ್ಯದಿಂದ ಆಕೆಯ ತಾಯಿಗೆ ಕರೆ ಮಾಡಿದ್ದರು. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅಷ್ಟರಲ್ಲಿ ವೈದ್ಯರು ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ನೆಲ್ಲೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಬಂದು ತನಿಖೆ ನಡೆಸಿದ್ದಾರೆ. ಬಾಲಕಿ ತಂದೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಆಕೆಗೆ ನಿಜಕ್ಕೂ ಗರ್ಭಪಾತವಾಗಿತ್ತಾ, ಯೂಟ್ಯೂಬ್ ನೋಡಿ ಗರ್ಭಪಾತಕ್ಕೆ ಯತ್ನಿಸಿದ್ದಳಾ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Pregnant Btech student does abortion inside classroom and dies after severe bleeding in Nellore in Hyderabad.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm