ಬ್ರೇಕಿಂಗ್ ನ್ಯೂಸ್
23-04-23 09:46 pm HK News Desk ದೇಶ - ವಿದೇಶ
ತಿರುವನಂತಪುರಂ, ಎ.23 : ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸೋಮವಾರ ಕೇರಳಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದ ವ್ಯಕ್ತಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಕೇರಳ ಪ್ರವಾಸದ ವೇಳೆ ಆತ್ಮಹತ್ಯಾ ದಾಳಿ ನಡೆಸುವುದಾಗಿ ಅಪರಿಚಿತ ವ್ಯಕ್ತಿ ಹೆಸರಿನಲ್ಲಿ ಬಿಜೆಪಿ ಕಚೇರಿಗೆ ಬೆದರಿಕೆ ಪತ್ರ ರವಾನಿಸಲಾಗಿತ್ತು. ಜೊತೆಗೆ ಪ್ರಧಾನಿ ಭದ್ರತೆಗೆ ನಿಯೋಜಿಸಲಾಗಿದ್ದ ಭದ್ರತಾ ವಿವರವೂ ಸೋರಿಕೆಯಾಗಿದ್ದು, ಇದು ರಾಜ್ಯ ಪೊಲೀಸರಿಂದ ಆದ ಗಂಭೀರ ಭದ್ರತಾ ಲೋಪ ಎಂಬ ಟೀಕೆ ವ್ಯಕ್ತವಾಗಿತ್ತು. ಇದೀಗ ಪತ್ರ ಬರೆದಿದ್ದ ಆರೋಪಿಯನ್ನು ಪತ್ತೆ ಹಚ್ಚಲಾಗಿದೆ. ಕೊಚ್ಚಿ ನಗರದಲ್ಲಿ ವ್ಯಾಪಾರಿಯಾಗಿರುವ ಕ್ಸೇವಿಯರ್ ಎಂಬಾತ ಬೇರೊಬ್ಬನ ಹೆಸರಿನಲ್ಲಿ ಪ್ರಧಾನಿ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಪತ್ರ ಕಳುಹಿಸಿದ್ದ ಎಂದು ತಿಳಿದುಬಂದಿದೆ. ಆತನನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಲಯಾಳಂನಲ್ಲಿ ಬರೆದ ಪತ್ರದಲ್ಲಿ ತಾನು ಕೊಚ್ಚಿ ನಿವಾಸಿ ಎಂದು ಬರೆದಿದ್ದ. ಮೋದಿಗೆ ಆತ್ಮಾಹುತಿ ದಾಳಿ ಮಾಡುವುದಾಗಿ ಬರೆದ ಪತ್ರವನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಸುರೇಂದ್ರನ್ ಅವರ ಕಚೇರಿಗೆ ಕಳುಹಿಸಲಾಗಿತ್ತು. ಅವರು ಅದನ್ನು ಕಳೆದ ವಾರ ಪೊಲೀಸರ ಕೈಗೆ ನೀಡಿದ್ದರು.
ಪತ್ರದ ಬೆನ್ನು ಹತ್ತಿ ತನಿಖೆ ನಡೆಸಿದ ಪೊಲೀಸರು ಆರೋಪಿ ಕ್ಸೇವಿಯರ್‌ನನ್ನು ಬಂಧಿಸಿದ್ದಾರೆ. ವೈಯಕ್ತಿಕ ದ್ವೇಷದಿಂದ ಕೊಚ್ಚಿ ನಿವಾಸಿ ಎನ್.ಜೆ. ಜಾನಿ ಅವರ ಹೆಸರಿನಲ್ಲಿ ಆರೋಪಿ ಪತ್ರ ಬರೆದಿದ್ದ. ಪೊಲೀಸರು ಜಾನಿಯನ್ನು ಬಂಧಿಸಬೇಕೆಂದು ಆತ ಬಯಸಿದ್ದ ಎಂದು ನಗರ ಪೊಲೀಸ್ ಕಮಿಷನರ್ ಕೆ. ಸೇತುರಾಮನ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಏಪ್ರಿಲ್ 24 ಮತ್ತು 25ರಂದು ಪ್ರಧಾನಿ ಕೇರಳಕ್ಕೆ ಬರುತ್ತಿದ್ದು ಭದ್ರತಾ ವ್ಯವಸ್ಥೆಯ ಭಾಗವಾಗಿ ಕೊಚ್ಚಿ ನಗರದಲ್ಲಿ 2,060 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರಧಾನಿ ಅವರ ರೋಡ್ ಶೋ ವೇಳೆ ಸುಮಾರು 20 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ನಗರ ಪೊಲೀಸ್ ಕಮಿಷನರ್ ಕೆ. ಸೇತುರಾಮನ್ ತಿಳಿಸಿದ್ದಾರೆ. ,
ಮೋದಿ ಅವರು ಮಂಗಳವಾರ ಬೆಳಗ್ಗೆ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಲಿದ್ದಾರೆ. ಬಳಿಕ ಸೆಂಟ್ರಲ್ ಸ್ಟೇಡಿಯಂನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದೇ ವೇಳೆ 4 ರೈಲ್ವೆ ಯೋಜನೆಗಳನ್ನು ಉದ್ಘಾಟಿಸಲಿರುವ ಮೋದಿ, ಟೆಕ್ನೋ ಸಿಟಿಗೆ ಶಂಕುಸ್ಥಾಪನೆ ಮತ್ತು ಕೊಚ್ಚಿ ವಾಟರ್ ಮೆಟ್ರೋಗೂ ಚಾಲನೆ ನೀಡಲಿದ್ದಾರೆ.
The Kerala Police on Sunday arrested a man who allegedly sent a letter threatening a suicide bomb attack on Prime Minister Narendra Modi who will be visiting the state on April 24 and 25 to take part in various programmes. Kochi resident Xavier, who runs a business in the city, was arrested by police for allegedly writing the threatening letter in the name of another person.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm