ಬ್ರೇಕಿಂಗ್ ನ್ಯೂಸ್
08-05-23 06:33 pm HK News Desk ದೇಶ - ವಿದೇಶ
ತಮಿಳು ನಾಡು, ಮೇ 8 : ಹಾಗೂ ಕೇರಳದಲ್ಲಿ ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಅಷ್ಟೇನೂ ಸ್ಪಂದನೆ ಸಿಗದೇ ಇದ್ದರೂ, ಇತರ ರಾಜ್ಯಗಳಲ್ಲಿ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಿದ್ದರೂ ಈ ಸಿನಿಮಾ ಮೂರೇ ದಿನದಲ್ಲಿ 35.25 ಕೋಟಿ ಗಳಿಸುವ ಮೂಲಕ ಅಚ್ಚರಿ ಮೂಡಿಸಿದೆ. ರಿಲೀಸ್ ದಿನ ಚಿತ್ರಕ್ಕೆ ಅಷ್ಟೇನೂ ರೆಸ್ಪಾನ್ಸ್ ಸಿಕ್ಕಿರಲಿಲ್ಲ. ಆದರೆ, ಶನಿವಾರದಿಂದ ಬಹುತೇಕ ಕಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ
ದಿ ಕೇರಳ ಸ್ಟೋರಿ ಸಿನಿಮಾದ ಮೊದಲ ದಿನ (ಶುಕ್ರವಾರ) ಗಳಿಕೆ 8.03 ಕೋಟಿ ರೂ., ಎರಡನೇ ದಿನ (ಶನಿವಾರ) ಗಳಿಕೆ 11.22 ಕೋಟಿ ರೂಪಾಯಿ ಮೂರನೇ ದಿನ (ರವಿವಾರ) ಗಳಿಕೆ 16 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಮೂರು ದಿನದ ಒಟ್ಟು ಆದಾಯ 35.25 ಕೋಟಿ ಎಂದು ಬಾಲಿವುಡ್ ಸಿನಿಮಾ ಲೆಕ್ಕಿಗ ತರುಣ್ ಆದರ್ಶ ಟ್ವೀಟ್ ಮಾಡಿದ್ದಾರೆ. ಕೆಲವು ಸಿನಿಮಾಗಳ ಕಂಪೇರ್ ಕೂಡ ಅವರು ಮಾಡಿದ್ದಾರೆ.
ದೇಶದಾದ್ಯಂತ ‘ದಿ ಕೇರಳ ಸ್ಟೋರಿ’ ಸಿನಿಮಾ ರಿಲೀಸ್ ಆಗಿದೆ. ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗು ಭಾಷೆಯಲ್ಲಿ ಸಿನಿಮಾ ಮೂಡಿ ಬಂದಿದ್ದು, ಕೇರಳದಲ್ಲೂ ಚಿತ್ರ ಪ್ರದರ್ಶನಕ್ಕೆ ಥಿಯೇಟರ್ ಮಾಲೀಕರು ಹಿಂದೇಟು ಹಾಕಿದ್ದರು. ಕೇರಳ ಸರಕಾರದ ಸಪೋರ್ಟ್ ಇಲ್ಲದ ಕಾರಣದಿಂದಾಗಿ ಮತ್ತು ಪ್ರತಿಭಟನೆಯ ಕಾವು ಜೋರಾಗಿದ್ದರಿಂದ ಚಿತ್ರಮಂದಿರಗಳ ಮಾಲೀಕರು ಭಯದಲ್ಲಿದ್ದಾರಂತೆ. ಈ ಕಾರಣದಿಂದಾಗಿ ಸಾಕಷ್ಟು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗಿಲ್ಲ.
ಈಗಾಗಲೇ ವಿವಾದಕ್ಕೆ ಕಾರಣವಾಗುವಂತಹ ಮತ್ತು ಆಕ್ಷೇಪಕ್ಕೆ ಗುರಿಯಾಗಿರುವ ಹಲವು ದೃಶ್ಯಗಳಿಗೆ ಸೆನ್ಸಾರ್ ಮಂಡಳಿಯು ಕತ್ತರಿ ಹಾಕಿದೆ. ಬರೋಬ್ಬರಿ 10 ದೃಶ್ಯಗಳಿಗೆ ಕತ್ತರಿ ಹಾಕುವ ಮೂಲಕ ಚಿತ್ರತಂಡಕ್ಕೆ ಶಾಕ್ ನೀಡಿದೆ. ಅಲ್ಲದೇ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರವನ್ನು ನೀಡಿದೆ. ಮಾಜಿ ಸಿಎಂ ಒಬ್ಬರ ಸಂದರ್ಶನ, ಕೆಲ ಸಂಭಾಷಣೆಗಳು ಹಾಗೂ ಕಮ್ಯುನಿಸ್ಟ್ ಪಕ್ಷದವರ ಬಗ್ಗೆ ಆಡಿದ ಮಾತುಗಳಿಗೆ ಸೆನ್ಸಾರ್ ಮಂಡಳಿಯು ಕತ್ತರಿ ಹಾಕಿದೆ.
ಐನಾಕ್ಸ್ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಿಸಿದ ಜೆ.ಪಿ.ನಡ್ಡಾ ;
ಬಾಂಬ್, ಬಂದೂಕು, ಪಿಸ್ತೂಲ್ ಆತಂಕವಾದದ ಜೊತೆಗೂಡಿವೆ. ಇನ್ನೊಂದು ಪ್ರಮುಖ ರೀತಿಯ ನೂತನ ಭಯಾನಕ ಭಯೋತ್ಪಾದನೆಯ ವ್ಯವಸ್ಥೆಯನ್ನು ‘ದಿ ಕೇರಳ ಸ್ಟೋರಿ’ ಅನಾವರಣಗೊಳಿಸಿದೆ‘ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು.
ಎಂ.ಜಿ. ರಸ್ತೆಯಲ್ಲಿರುವ ಐನಾಕ್ಸ್ ಚಿತ್ರಮಂದಿರದಲ್ಲಿ ‘ದಿ ಕೇರಳ ಸ್ಟೋರಿ‘ ಸಿನಿಮಾವನ್ನು ವೀಕ್ಷಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ‘ಕೇರಳದ ಭಯಾನಕ ವ್ಯವಸ್ಥೆಯು ‘ದಿ ಕೇರಳ ಸ್ಟೋರಿ‘ ಸಿನಿಮಾದಲ್ಲಿದೆ‘ ಎಂದರು.
‘ಹೊಸ ಥರದ ಆತಂಕವಾದದ ಬಗ್ಗೆ ಈ ಸಿನಿಮಾ ಮಾಹಿತಿ ಕೊಡುತ್ತಿದೆ. ಯುವ ಜನರನ್ನು ಪ್ರಾಯೋಜಿತ ರೀತಿಯಲ್ಲಿ ಆತಂಕವಾದದತ್ತ ಸೆಳೆಯುವುದನ್ನು ಈ ಸಿನಿಮಾ ತೋರಿಸುತ್ತದೆ. ಭಯೋತ್ಪಾದನೆಯ ದಾರಿಯಲ್ಲಿ ನಡೆದ ಯುವಜನರು ಮತ್ತೆ ಹಿಂತಿರುಗಲಾಗದ ಹಂತ ತಲುಪುತ್ತಾರೆ‘ ಎಂದು ವಿಶ್ಲೇಷಿಸಿದರು.
‘ಈ ಸಿನಿಮಾ ವೀಕ್ಷಿಸಿ ಸಮಾಜದ ಹೆಚ್ಚು ಹೆಚ್ಚು ಜನರು ಈ ಷಡ್ಯಂತ್ರದ ಕುರಿತು ಜಾಗೃತಗೊಳ್ಳಲಿ. ಇದಕ್ಕೆ ಧರ್ಮ, ಒಂದು ರಾಜ್ಯ ಎಂಬ ಸೀಮಿತತೆ ಇಲ್ಲ. ಕೇರಳದ ಈ ಗಂಭೀರ ಸಮಸ್ಯೆ ಕುರಿತು ಅಲ್ಲಿನ ಮಾಜಿ ಮುಖ್ಯಮಂತ್ರಿಯೂ ಆತಂಕ ಸೂಚಿಸಿದ್ದಾರೆ‘ ಎಂದರು.
‘ನಮ್ಮ ಸಮಾಜವನ್ನು ದುರ್ಬಲಗೊಳಿಸಲು ನಡೆಯುವ ಷಡ್ಯಂತ್ರದ ವಿಷಯವನ್ನು ಇದು ತಿಳಿಸಿದೆ. ನಾನು ಈಗಾಗಲೇ ಸಿನಿಮಾ ವೀಕ್ಷಿಸಿದ್ದೇನೆ‘ ಎಂದು ತಿಳಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಸಂಸದ ತೇಜಸ್ವಿಸೂರ್ಯ, ರಾಷ್ಟ್ರೀಯ ವಕ್ತಾರ ಜಾಫರ್ ಇಸ್ಲಾಂ, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ ಅವರೂ ನಡ್ಡಾ ಅವರ ಜೊತೆ ಈ ಸಿನಿಮಾ ವೀಕ್ಷಿಸಿದರು.
The Kerala Story exposes a new, poisonous form of terrorism in which bombs and ammunition are not used, BJP's national president JP Nadda said after watching the movie at a screening in Bengaluru yesterday. The movie sparked a huge row as soon as its trailer released last month. While the makers said the film puts the spotlight on forced conversion and radicalisation of women in Kerala, several Opposition parties, including the ruling CPM, alleged that it was a "BJP-sponsored" attempt to divide people.
21-08-25 02:03 pm
HK News Desk
Mangalore Electric Auto, High Court: ಮಂಗಳೂರಿನ...
21-08-25 12:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
21-08-25 12:54 pm
HK News Desk
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
21-08-25 03:44 pm
Mangalore Correspondent
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm