ಬ್ರೇಕಿಂಗ್ ನ್ಯೂಸ್
18-05-23 11:38 am HK News Desk ದೇಶ - ವಿದೇಶ
ನವದೆಹಲಿ, ಮೇ 18 : ಕಡೆಗೂ ನಾಲ್ಕು ದಿನಗಳ ಮುಖ್ಯಮಂತ್ರಿ ಆಯ್ಕೆ ಕಸರತ್ತಿಗೆ ತೆರೆಬಿದ್ದಿದೆ. ಸಿದ್ದರಾಮಯ್ಯ ರಾಜ್ಯದ ನೂತನ ಮುಖ್ಯಮಂತ್ರಿ ಮತ್ತು ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದಾರೆ. ಮೇ 20ರ ಶನಿವಾರ 12.30ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದೆ.
ಬುಧವಾರ ರಾತ್ರಿ ನಡೆದ ಅಂತಿಮ ಹಂತದ ಕಸರತ್ತಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಸರ್ವಾನುಮತದ ನಿರ್ಣಯವನ್ನು ದೆಹಲಿಯಲ್ಲಿ ಪ್ರಕಟಿಸಿದ್ದಾರೆ. ಇಂದು ಸಂಜೆ 7 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಇಂದಿರಾ ಭವನದಲ್ಲಿ ಸಭೆ ಕರೆದಿದ್ದು ಇದೇ ಸಭೆಯಲ್ಲೇ ನಾಯಕರ ಹೆಸರು ಕೂಡ ಅಧಿಕೃತವಾಗಿ ಘೋಷಣೆಯಾಗಲಿದೆ.
ಕಳೆದ ನಾಲ್ಕು ದಿನಗಳಿಂದ ತಮಗೇ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಗಿಪಟ್ಟು ಹಿಡಿದಿದ್ದರು. ಸಂಕಷ್ಟದ ಸಮಯದಲ್ಲಿ ಪಕ್ಷದ ಸಾರಥ್ಯ ವಹಿಸಿಕೊಂಡು ಪಕ್ಷವನ್ನು ಅಧಿಕಾರಕ್ಕೆ ತಂದ ತಮಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಿದ್ದರು. ಸಿದ್ದರಾಮಯ್ಯ ತಾವೇ ಮುಖ್ಯಮಂತ್ರಿ ಆಗೋದು ಎಂದು ತನ್ನ ಬೆಂಬಲಿಗರ ಮೂಲಕ ಪಟ್ಟು ಹಾಕಿದ್ದರು.
ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ನಿರಂತರವಾಗಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದು ಅಧಿಕಾರ ಹಂಚಿಕೆಯ ಸೂತ್ರದೊಂದಿಗೆ ಡಿಕೆಶಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
Ending the days of long suspense over the next Karnataka Chief Minister, Congress President Mallikarjun Kharge on Thursday chose Siddaramaiah to lead the southern state, the news agency ANI reported.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 10:31 pm
HK News Desk
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm