ಬ್ರೇಕಿಂಗ್ ನ್ಯೂಸ್
28-05-23 06:41 pm HK News Desk ದೇಶ - ವಿದೇಶ
ನವದೆಹಲಿ, ಮೇ 28 : ಕಳೆದ 35 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿ ಪಟುಗಳು ಹೊಸ ಸಂಸತ್ ಕಟ್ಟಡದ ಉದ್ಘಾಟನೆ ದಿನವೇ ಮುತ್ತಿಗೆ ಹಾಕಲು ಮುಂದಾಗಿದ್ದು ಪ್ರತಿಭಟನೆ ನಡೆಸಲು ಯತ್ನಿಸಿದ ಕುಸ್ತಿಪಟುಗಳ ಮೇಲೆ ಪೊಲೀಸರು ಬಲಪ್ರಯೋಗ ಮಾಡಿದ್ದು ಹಲವರನ್ನು ಬಂಧಿಸಿದ್ದಾರೆ. ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಸೇರಿದಂತೆ ಹಲವು ಕುಸ್ತಿಪಟುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಲೈಂಗಿಕ ಕಿರುಕುಳ ನೀಡಿದ್ದು ಆತನನ್ನು ಬಂಧಿಸಬೇಕೆಂದು ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಕುಸ್ತಿಪಟುಗಳ ಪ್ರತಿಭಟನೆ ರಾಷ್ಟ್ರವ್ಯಾಪಿ ವಿವಾದ ಎಬ್ಬಿಸಿದ್ದು, ಮೋದಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದೆ.
ಪೊಲೀಸರು ಬಲವಂತದಿಂದ ಕುಸ್ತಿಪಟುಗಳನ್ನು ವಶಕ್ಕೆ ಪಡೆದಿದ್ದು ಒಂದು ಹಂತದಲ್ಲಿ ಪೊಲೀಸರ ಜೊತೆಗೆ ಜಟಾಪಟಿಯೂ ನಡೆದಿದೆ. ಜಂತರ್ ಮಂತರ್‌ನಲ್ಲಿ ಹಾಕಿದ್ದ ಟೆಂಟ್‌ಗಳನ್ನು ಪೊಲೀಸರು ತೆಗೆದುಹಾಕಿದ್ದಾರೆ. ನೂತನ ಸಂಸತ್ ಕಟ್ಟಡದ ಎದುರು ಮಹಿಳಾ ಕುಸ್ತಿಪಟುಗಳು ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದರು. ಆದರೆ ಇದಕ್ಕೆ ಒಪ್ಪದ ದೆಹಲಿ ಪೊಲೀಸರು ಮಾರ್ಗದುದ್ದಕ್ಕೂ ಬ್ಯಾರಿಕೇಡ್‌ಗಳನ್ನು ಹಾಕಿ ಅಡ್ಡಗಟ್ಟಿದ್ದಾರೆ.
ಕಳೆದ 35 ದಿನಗಳಿಂದ ನ್ಯಾಯಕ್ಕಾಗಿ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳು ಕೇಂದ್ರದ ಮಧ್ಯಸ್ತಿಕೆ ಪ್ರಸ್ತಾಪಗಳಿಗೆ ಒಪ್ಪದೇ ಪ್ರತಿಭಟನೆ ಮುಂದುವರೆಸಲು ನಿರ್ಧರಿಸಿದ್ದಾರೆ. ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಮತ್ತು ಕುಸ್ತಿ ಫಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್‌ರನ್ನು ಬಂಧಿಸಬೇಕೆಂದು ಕುಸ್ತಿಪಟುಗಳು ಪಟ್ಟು ಹಿಡಿದಿದ್ದಾರೆ.
ಇಂದಿನ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಗೆ ರೈತರು ಮತ್ತು ವಿದ್ಯಾರ್ಥಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. ಖಾಪ್ ಪಂಚಾಯತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಲು ಬರುತ್ತಿದ್ದಂತೆ ದೆಹಲಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.
ನಿನ್ನೆ ತಡರಾತ್ರಿ ಕೇಂದ್ರ ಸರ್ಕಾರದ ಪ್ರತಿನಿಧಿಗಳ ಜೊತೆಗಿನ ಸಭೆ ಬಳಿಕ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಎರಡು ಬಾರಿಯ ವಿಶ್ವ ಚಾಂಪಿಯನ್ ವಿನೇಶ್ ಫೋಗಟ್, ಆರೋಪಿಯನ್ನು ಬಂಧಿಸಬೇಕು ಎಂಬ ಪ್ರಮುಖ ಬೇಡಿಕೆಗೆ ಸರ್ಕಾರ ಒಪ್ಪಿಕೊಳ್ಳದ ಕಾರಣ ಮಾತುಕತೆ ವಿಫಲವಾಗಿದೆ. ಧರಣಿ ನಿಲ್ಲಿಸುವಂತೆ ನಮ್ಮ ಮೇಲೆ ಭಾರೀ ಒತ್ತಡ ಇದೆ. ಆದರೆ ತಾತ್ವಿಕ ಅಂತ್ಯ ಕಾಣಿಸುವ ವರೆಗೂ ಹೋರಾಟ ಮುಂದುವರಿಸುತ್ತೇವೆ ಎಂದಿದ್ದಾರೆ. ಅವರೊಟ್ಟಿಗೆ ರಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಸಹ ಇದ್ದರು.
Less than two kilometres away from the grand inauguration of the country's new parliament, chaos unfolded in the heart of the capital on Sunday as top wrestlers, including Vinesh Phogat, Sakshi Malik, and Bajrang Punia, were detained by Delhi Police while attempting to march towards the new parliament building.
21-08-25 12:58 pm
Bangalore Correspondent
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
21-08-25 12:54 pm
HK News Desk
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
21-08-25 11:57 am
Mangalore Correspondent
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm