ಬ್ರೇಕಿಂಗ್ ನ್ಯೂಸ್
28-05-23 09:11 pm HK News Desk ದೇಶ - ವಿದೇಶ
ನವದೆಹಲಿ, ಮೇ 28 : ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಭಾಗವಹಿಸಿದ್ದಾರೆ. ಸಂಸತ್ ಭವನ ಉದ್ಘಾಟನೆಯನ್ನು ವಿಪಕ್ಷಗಳು ಬಹಿಷ್ಕರಿಸಿದ್ದವು. ಈ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರು ಮಾತನಾಡುತ್ತಾ, ನಾನು ಖಂಡಿತವಾಗಿಯೂ ಸಂಸತ್ ಭವನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದ್ದರು. ಅದರಂತೆ ಇಂದು ಮಾಜಿ ಪ್ರಧಾನಿ ನೂತನ ಸಂಸತ್ನಲ್ಲಿ ಉಪಸ್ಥಿತರಿದ್ದರು.
ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದರು. ಬಳಿಕ ಪವಿತ್ರ ರಾಜದಂಡದೊಂದಿಗೆ ಮೋದಿ ಅವರು ನಾದಸ್ವರ ಮತ್ತು ವೇದ ಮಂತ್ರಗಳ ಪಠಣಗಳ ನಡುವೆ ಮೆರವಣಿಗೆಯಲ್ಲಿ ಹೊಸ ಸಂಸತ್ ಭವನಕ್ಕೆ ಸೆಂಗೋಲ್ ಅನ್ನು ಕೊಂಡೊಯ್ದರು.
ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ನೂತನ ಸಂಸತ್ ಭವನದಲ್ಲಿ ಮಾಜಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿದ್ದಾರೆ. ಈ ಬಗ್ಗೆ ಫೋಟೋ ಹಂಚಿಕೊಂಡು ಸಂತಸ ವ್ಯಕ್ತಪಡಿಸಿರುವ ಪ್ರತಾಪ್ ಸಿಂಹ, ಹೊಸ ಸಂಸತ್ ಭವನದ ಉದ್ಘಾಟನೆ ಸಂದರ್ಭದಲ್ಲಿ ಹಿರಿಯ ಚೇತನ, ಮಾಜಿ ಪ್ರಧಾನಿ ದೇವೇಗೌಡರಿಂದ ಆಶೀರ್ವಾದ ಪಡೆದುಕೊಂಡೆ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
ಸಂಸತ್ ಭವನದ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ಹಾಜರಾಗುತ್ತಿದ್ದೇನೆ. ಅದು ದೇಶದ ಆಸ್ತಿ. ಯಾರೊಬ್ಬರ ವೈಯಕ್ತಿಕ ವಿಷಯಕ್ಕೆ ಸಂಬಂಧಿಸಿದ್ದು ಅದಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಹೇಳಿದ್ದರು.
ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ. ಅದು ಅವರ ವೈಯಕ್ತಿಕ ಕಾರ್ಯಕ್ರಮ ಅಲ್ಲ, ದೇಶದ ಕಾರ್ಯಕ್ರಮ. ಆ ಭವ್ಯ ಕಟ್ಟಡ ದೇಶದ ಜನರ ತೆರಿಗೆ ಹಣದಿಂದ ನಿರ್ಮಾಣವಾಗಿದೆ. ಅದು ದೇಶಕ್ಕೆ ಸೇರಿದ್ದು. ಅದು ಬಿಜೆಪಿ ಅಥವಾ ಆರೆಸ್ಸೆಸ್ ಕಚೇರಿ ಅಲ್ಲ. ಸಂಸತ್ ಭವನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಓರ್ವ ಮಾಜಿ ಪ್ರಧಾನಿಯಾಗಿ, ದೇಶದ ಪ್ರಜೆಯಾಗಿ ಭಾಗಿಯಾಗುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದರು.
After the inauguration of new Parliament building in New Delhi, former Prime Minister and Janata Dal (Secular) supremo HD Devegowda who participated in the event shared his views. The 91-year-old reminisced about his first term as a Member of Parliament (MP) in the house and mentioned his elevation as Prime Minister of India in 1996.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 05:33 pm
HK News Desk
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm