ಬ್ರೇಕಿಂಗ್ ನ್ಯೂಸ್
30-10-20 01:55 pm Headline Karnataka News Network ದೇಶ - ವಿದೇಶ
ಹುಬ್ಬಳ್ಳಿ, ಅಕ್ಟೋಬರ್ 30: ಮೈತ್ರಿ ಸರಕಾರದ ಪತನಕ್ಕೆ ನಾಂದಿ ಹಾಡಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ವಿಚಾರ ಈಗ ಮುಖ್ಯಮಂತ್ರಿ ಯಡಿಯೂರಪ್ಪನವರ ಕುರ್ಚಿಗೂ ಕಂಟಕ ತರುವಂತೆ ಕಾಣುತ್ತಿದೆ. ಬೆಳಗಾವಿ ರಾಜಕಾರಣ ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸುವ ಮುನ್ಸೂಚನೆ ಸಿಕ್ಕಿದ್ದು ಎರಡು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ಕಮಲ ನಾಯಕರ ರಹಸ್ಯ ಸಭೆಯೇ ಕದನ ಕುತೂಹಲಕ್ಕೆ ಕಾರಣವಾಗಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾಯಿಸಲು ಬಿಜೆಪಿಯಲ್ಲಿ ತೆರೆಮರೆಯ ಕಸರತ್ತು ಜೋರಾಗಿಯೇ ನಡೆದಿದೆ. ಮುಂದಿನ ಸಿಎಂ ಉತ್ತರ ಕರ್ನಾಟಕದವರಾಗಬೇಕು ಎಂಬ ಕೂಗು ಕೂಡ ಅಷ್ಟೇ ಜೋರಾಗಿದೆ. ಇಂಥ ಕೂಗು, ರೇಗಿನ ಮಧ್ಯೆಯೇ ಹುಬ್ಬಳ್ಳಿಯಲ್ಲಿ ಉತ್ತರ ಕರ್ನಾಟಕದ ಪ್ರಭಾವಿಗಳನ್ನು ಸೇರಿಸಿ ಸಭೆ ನಡೆಸಲಾಗಿದೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ಮುಖಂಡರ ಸಭೆ ನಡೆದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೇತೃತ್ವ ವಹಿಸಿದ್ದರು.
ಸಭೆಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಾಲಚಂದ್ರ ಜಾರಕಿಹೋಳಿ, ಉಮೇಶ ಕತ್ತಿ ಸಹೋದರರು, ಸಂಸದ ಅಣ್ಣಾ ಸಾಬ್ ಜೊಲ್ಲೆ, ಮಹಾಂತೇಶ ಕಮಟಗಿಮಟ, ವೀರಣ್ಣ ಕದಾಡಿ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ರು. ಬೆಳಗಾವಿ ಡಿಸಿಸಿ ಬ್ಯಾಂಕ್ ವಿಚಾರದಲ್ಲಿ ಬಿಜೆಪಿ ನಾಯಕರ ಒಳಗೇ ಕಿತ್ತಾಟ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಅದನ್ನು ಶಮನಗೊಳಿಸಲು ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸೂಚನೆ ನೀಡಿದ್ದರಿಂದ ಸಭೆ ಕರೆಯಲಾಗಿತ್ತು ಎನ್ನಲಾಗುತ್ತಿದೆ. ಆದರೆ, ಸಭೆಯಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ವಿಚಾರ ಗದ್ದಲಕ್ಕೆ ಕಾರಣವಾಗಿದೆ.
ಉಮೇಶ ಕತ್ತಿ ಸಹೋದರರು ಹಾಗೂ ಬಾಲಚಂದ್ರ ಜಾರಕಿಹೊಳಿ ಒಂದಾಗಿದ್ದು ಡಿಸಿಎಂ ಲಕ್ಷ್ಮಣ ಸವದಿ ಬಣದ ವಿರುದ್ದ ತಿರುಗಿ ಬಿದ್ದಿದ್ದಾರೆ. ಸಭೆಯಲ್ಲಿ ಎರಡೂ ಬಣಗಳ ನಡುವೆ ಮಾತಿಗೆ ಮಾತು ಬೆಳೆದಿದ್ದು ಮತ್ತೊಂದು ರೀತಿಯ ಭುಗಿಲೇಳಲು ಕಾರಣವಾಗಿದೆ. ಶತಾಯ ಗತಾಯ ಉಭಯ ಬಣಗಳ ಮುಖಂಡರು ಅಧಿಕಾರದ ಚುಕ್ಕಾಣಿ ಹಿಡಿಯಲು ಪಟ್ಟುಹಿಡಿದಿದ್ದಾರೆ. ಇದೇ ವಿಚಾರದಲ್ಲಿ ಮುನಿಸಿಕೊಂಡಿರುವ ಉಮೇಶ್ ಕತ್ತಿ, ಬೆಳಗಾವಿಯ ಕಿಂಗ್ ಪಿನ್ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಗೆ ಬೆಂಬಲ ನೀಡಲು ಮುಂದಾಗಿದ್ದಾರೆ. ಇದು ಲಕ್ಷ್ಮಣ ಸವದಿ ಗುಂಪಿನ ಕೆಂಗಣ್ಣಿಗೆ ಗುರಿಯಾಗಿದೆ. ಹೊಂದಾಣಿಕೆ ಮಾಡಿಕೊಳ್ಳಲು ವರಿಷ್ಠರು ಸೂಚನೆ ನೀಡಿದ್ದರೂ ಬಗ್ಗದ ಉಮೇಶ ಕತ್ತಿ, ಸವದಿ ಬೆಂಬಲಿಗರು ಚುನಾವಣೆಯಲ್ಲಿ ನಿಲ್ಲದಂತೆ ಬಿಗಿಪಟ್ಟು ಹಿಡಿದಿದ್ದಾರೆ. ಉಮೇಶ್ ಕತ್ತಿ ವಾದಕ್ಕೆ ಡಿಸಿಎಂ ಸವದಿ ಒಪ್ಪದೇ ಇದ್ದಾಗ ಸಿಟ್ಟಾದ ಕತ್ತಿ ಸಹೋದರರು ಸಭೆಯಿಂದ ಹೊರ ನಡೆದಿದ್ದಾರೆ. ಇಬ್ಬರ ಜಗಳ ಬಿಡಿಸುವಲ್ಲಿ ಪ್ರಯತ್ನ ಪಟ್ಟ ಜಗದೀಶ ಶೆಟ್ಟರ್, ಪ್ರಹ್ಲಾದ್ ಜೋಷಿ, ನಳಿನ್ ಕುಮಾರ್ ಕೊನೆಗೆ ಮೂಕ ಪ್ರೇಕ್ಷಕರಾಗಬೇಕಾಯಿತು.
ಭಿನ್ನಮತ ಶಮನಕ್ಕೆ ಹೋದವರಿಗೇ ಬಿಸಿತುಪ್ಪ !
ಈಗಾಗ್ಲೇ ರಾಜ್ಯ ಸರಕಾರದಲ್ಲಿ ಸಚಿವ ಸ್ಥಾನ ಸಿಗದೆ ಹೈಕಮಾಂಡ್ ವಿರುದ್ಧ ಮುನಿಸಿಕೊಂಡಿರುವ ಉಮೇಶ ಕತ್ತಿ ಅಂಡ್ ಟೀಂ ಬೆಳಗಾವಿ ಡಿಸಿಸಿ ಬ್ಯಾಂಕ್ ವಿಚಾರ ಮುಂದಿಟ್ಟುಕೊಂಡು ವರಿಷ್ಠರ ಮೇಲೆ ಕತ್ತಿ ಮಸೆಯಲು ಮುಂದಾಗಿದ್ದಾರೆ. ವರ್ಷದ ಹಿಂದೆ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರಕಾರದ ಪತನಕ್ಕೆ ನಾಂದಿ ಹಾಡಿದ್ದು ಇದೇ ಡಿಸಿಸಿ ಬ್ಯಾಂಕ್ ವಿವಾದ. ಈಗ ಮತ್ತೆ ಅದೇ ವಿವಾದ ರಾಜ್ಯ ಬಿಜೆಪಿ ಪಾಳಯದಲ್ಲಿ ಬಿರುಗಾಳಿ ಎಬ್ಬಿಸುತ್ತಿದೆ. ಇದೆ ಕಾರಣಕ್ಕೆ ಬೆಳಗಾವಿ ರಾಜಕಾರಣದ ಒಳಮರ್ಮ ಅರಿತ ಬಿಜೆಪಿ ವರಿಷ್ಠರು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ನೇತೃತ್ವದಲ್ಲಿ ಭಿನ್ನಮತ ಶಮನಕ್ಕೆ ಪ್ರಯತ್ನ ನಡೆಸಿದ್ದಾರೆ. ಆದರೆ ಭಿನ್ನಮತ ಶಮನ ಬದಲು ಬಿಸಿ ತುಪ್ಪಕ್ಕೆ ಬೆಂಕಿ ಸುರಿದಂತಾಗಿದೆ ಈ ಸಭೆ.
ಡಿಸಿಸಿ ಬ್ಯಾಂಕ್ ವಿವಾದ, ಸದ್ಯದಲ್ಲೇ ಎದುರಾಗುವ ಬೆಳಗಾವಿ ಲೋಕಸಭಾ ಚುನಾವಣೆ ಮೇಲೂ ಪರಿಣಾಮ ಬೀರಲಿದೆ. ಇದೇ ಸಭೆಯಲ್ಲಿ ಸಂಸದ ಸ್ಥಾನಕ್ಕೆ ಅಭ್ಯರ್ಥಿ ಯಾರಾಗಬೇಕು ಎನ್ನುವ ವಿಚಾರವೂ ಚರ್ಚೆಗೆ ಬಂದಿತ್ತು. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರನ್ನೇ ಕಣಕ್ಕಿಳಿಸುವ ವಿಚಾರ ಸಭೆಯಲ್ಲಿ ಬರುತ್ತಿದ್ದಂತೆ, ಮತ್ತೆ ಸಿಎಂ ಬದಲಾವಣೆ ಪ್ರಸ್ತಾವನೆ ಆಗಿದೆ. ಉತ್ತರ ಕರ್ನಾಟಕದವರನ್ನ ಸಿಎಂ ಮಾಡಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರುವಂತೆ ಕತ್ತಿ ಸಹೋದರರು ವರಸೆ ಸುರು ಮಾಡಿದ್ದಾರೆ.
ರಾಜ್ಯ ಬಿಜೆಪಿಯಲ್ಲಿ ಒಂದು ಕಡೆ ನಾಯಕತ್ವ ಬದಲಾವಣೆ ಕೂಗು ಹೆಚ್ಚುತ್ತಿದ್ದಂತೆ, ಇತ್ತ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ವಿಚಾರ ಮತ್ತೆ ಸದ್ದು ಮಾಡತೊಡಗಿದೆ. ಇದೇ ವಿಚಾರ ಯಡಿಯೂರಪ್ಪ ಅವರ ಸಿಎಂ ಕುರ್ಚಿಯನ್ನ ಅಲುಗಾಡಿಸುತ್ತಾ ಎನ್ನುವ ಅನುಮಾನಕ್ಕೆ ಕಮಲ ನಾಯಕರ ಸಭೆ ಎಡಮಾಡಿಕೊಟ್ಟಿದೆ. ಸಭೆಯಲ್ಲಿ ಚರ್ಚೆ ಆಗಿರುವ ಬಗ್ಗೆ ಜಗದೀಶ್ ಶೆಟ್ಟರ್ ಮತ್ತು ಪ್ರಹ್ಲಾದ್ ಜೋಷಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರು ಬೆಂಗಳೂರಿನಲ್ಲಿ ಚುನಾವಣಾ ಪ್ರಚಾರ ಇದ್ದುದರಿಂದ ರಾತ್ರಿಯೇ ನಿರ್ಗಮಿಸಿದ್ದರು. ಒಟ್ಟು ಬೆಳವಣಿಗೆ ನೋಡಿದರೆ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಮತ್ತು ಸಂಸದ ಸ್ಥಾನದ ಉಪ ಚುನಾವಣೆ ಬಿಜೆಪಿ ಪಾಲಿಗೆ ಬಿಸಿ ತುಪ್ಪ ಆಗೋದಂತೂ ಪಕ್ಕಾ..
Deputy Chief Minister Laxman Savadi and KMF Chairman Balachandra Jarkiholi and several other top leaders in the cooperative sector announced on Thursday that they would ensure that all the 16 directors were elected unopposed.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm