ಬ್ರೇಕಿಂಗ್ ನ್ಯೂಸ್
06-06-23 08:18 pm HK News Desk ದೇಶ - ವಿದೇಶ
ಭುವನೇಶ್ವರ್, ಜೂನ್ 6: ಒಡಿಶಾದಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತ ಸಂದರ್ಭದಲ್ಲಿ ಬೋಗಿಗಳಲ್ಲಿ ವಿದ್ಯುತ್ ಪ್ರವಹಿಸಿ 40 ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಅಪಘಾತದಲ್ಲಿ ಒಟ್ಟು 278 ಪ್ರಯಾಣಿಕರು ಮೃತಪಟ್ಟಿದ್ದಾರೆ. ಇವರಲ್ಲಿ 40 ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಈ ಕಾರಣದಿಂದ ವಿದ್ಯುತ್ ಪ್ರವಹಿಸಿ ಸಾವು ಸಂಭವಿಸಿರಬೇಕೆಂದು ಶಂಕಿಸಲಾಗಿದೆ.
ಬಾಲೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಈ ಕುರಿತು ಮಾಹಿತಿಗಳಿವೆ. ರೈಲು ಮಾರ್ಗದಲ್ಲಿನ ವಿದ್ಯುತ್ ತಂತಿಗಳು ಅಪಘಾತದ ನಂತರ ತುಂಡಾಗಿ ಬಿದ್ದವು. ಅವು ಕೆಲ ಬೋಗಿಗಳಿಗೆ ತಗುಲಿದ್ದರಿಂದ ಒಳಗೆ ಸಿಲುಕಿದ ಪ್ರಯಾಣಿಕರಿಗೆ ವಿದ್ಯುತ್ ಪ್ರವಹಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಕುಮಾರ ನಾಯಕ್ ಪ್ರತಿಕ್ರಿಯಿಸಿ, 'ರೈಲುಗಳ ಡಿಕ್ಕಿಯಿಂದ ಹಲವು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಇನ್ನೂ ಕೆಲವರು ರೈಲು ಹಳಿಗಳ ಮೇಲ್ಭಾಗದಲ್ಲಿ ಹಾದುಹೋಗಿರುವ ವಿದ್ಯುತ್ ತಂತಿ ತುಂಡಾಗಿ ಬೋಗಿಯ ಮೇಲೆ ಬಿದ್ದಿದ್ದರಿಂದ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಹೌರಾ-ಚೆನ್ನೈ ಕೋರಮಂಡಲ ಎಕ್ಸ್‌ಪ್ರೆಸ್, ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲುಗಳ ನಡುವೆ ಜೂನ್ 2ರಂದು ಸಂಜೆ 7.20ರ ಸುಮಾರಿಗೆ ಅಪಘಾತ ಸಂಭವಿಸಿತ್ತು. ಇದರಲ್ಲಿ 278 ಪ್ರಯಾಣಿಕರು ಮೃತಪಟ್ಟು, ಸುಮಾರು 1200 ಜನರು ಗಾಯಗೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ವಂಸಕ ಕೃತ್ಯ ನಡೆದಿದೆ ಎಂಬ ರೈಲ್ವೆ ಮಂಡಳಿಯ ಶಿಫಾರಸಿನ ಮೇಲೆ ಸಿಬಿಐ ತನಿಖೆ ಆರಂಭಿಸಿದೆ.
At least 40 passengers of the ill-fated Coromandel Express are said to be electrocuted by snapped overhead cables as they did not have any external injury. The cables reportedly snapped after the Yesvantpur-Howrah Express crashed into the derailed bogies of the Coromandel train in Odisha’s Balasore. The claim made by a police officer, who oversaw the rescue operation, matches with the FIR that states electrocution as the cause of several deaths after live overhead cable
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 05:33 pm
HK News Desk
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
09-10-25 01:59 pm
Udupi Correspondent
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm