ಬ್ರೇಕಿಂಗ್ ನ್ಯೂಸ್
06-08-20 04:18 am Headline Karnataka News Network ದೇಶ - ವಿದೇಶ
ಅಹ್ಮದಾಬಾದ್(ಆ. 06): ಅಹ್ಮದಾಬಾದ್ನ ಕೋವಿಡ್-19 ಖಾಸಗಿ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ಐಸಿಯು ವಾರ್ಡ್ನಲ್ಲಿದ್ದ ಎಂಟು ಮಂದಿ ರೋಗಿಗಳು ಬಲಿಯಾಗಿದ್ದಾರೆ. ಅಹ್ಮದಾಬಾದ್ನ ನವರಂಗ್ಪುರ ಪ್ರದೇಶದಲ್ಲಿರುವ ಶ್ರೇಯ್ ಆಸ್ಪತ್ರೆಯಲ್ಲಿ ರಾತ್ರಿ 2:30ರ ಸುಮಾರಿಗೆ ಸಂಭವಿಸಿದ ಈ ದುರ್ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣವೆನ್ನಲಾಗಿದೆ.
ಸಾವನ್ನಪ್ಪಿದ ಎಂಟು ಮಂದಿ ಪೈಕಿ ಮೂವರು ಮಹಿಳೆಯರು ಸೇರಿದ್ದಾರೆ. ಈ ದುರಂತ ಸಂಭವಿಸಿದಾಗ ಈ ಆಸ್ಪತ್ರೆಯಲ್ಲಿ 35 ರೋಗಿಗಳಿದ್ದರೆನ್ನಲಾಗಿದೆ. ಉಳಿದ ರೋಗಿಗಳು, ವೈದ್ಯರು ಮತ್ತು ಸಿಬ್ಬಂದಿಗೆ ಹಾನಿಯಾಗಿಲ್ಲ. ಉಳಿದ ರೋಗಿಗಳನ್ನು ನಗರದ ಬೇರೊಂದು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಇದೇ ವೇಳೆ, ಆಸ್ಪತ್ರೆಯಲ್ಲಿ ವ್ಯಾಪಿಸಿದ್ದ ಬೆಂಕಿಯನ್ನು ಅಗ್ನಿಶಾಮಕ ದಳ ಸಿಬ್ಬಂದಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರು ಈ ದುರಂತಕ್ಕೆ ವಿಷಾದ ವ್ಯಕ್ತಪಡಿಸಿದ್ದು, ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಆದಷ್ಟೂ ಬೇಗ ಚೇತರಿಕೆ ಕಾಣಲಿ ಎಂದು ಹಾರೈಸಿರುವ ಅವರು ಅಹ್ಮದಾಬಾದ್ ಜಿಲ್ಲಾಡಳಿತವು ಎಲ್ಲಾ ನೆರವು ಒದಗಿಸುತ್ತಿದೆ ಎಂದಿದ್ದಾರೆ.
Saddened by the tragic hospital fire in Ahmedabad. Condolences to the bereaved families. May the injured recover soon. Spoke to CM @vijayrupanibjp Ji and Mayor @ibijalpatel Ji regarding the situation. Administration is providing all possible assistance to the affected.
— Narendra Modi (@narendramodi) August 6, 2020
ಹಾಗೆಯೇ, ಪ್ರತಿಯೊಬ್ಬ ಮೃತರ ಕುಟುಂಬಕ್ಕೂ 2 ಲಕ್ಷ ರೂ ಪರಿಹಾರವನ್ನೂ ಪ್ರಧಾನಿಗಳು ಘೋಷಿಸಿದ್ಧಾರೆ. ಪ್ರಧಾನಮಂತ್ರಿ ವಿಪತ್ತು ನಿಧಿಯಿಂದ ಈ ಹಣವನ್ನು ನೀಡಲಾಗುತ್ತಿದೆ. ಹಾಗೆಯೇ, ಗಾಯಾಳುಗಳಿಗೆ ತಲಾ 50 ಸಾವಿರ ರೂ ಪರಿಹಾರ ಪ್ರಕಟಿಸಿದ್ದಾರೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am