ಬ್ರೇಕಿಂಗ್ ನ್ಯೂಸ್
04-11-20 10:50 am Headline Karnataka News Network ದೇಶ - ವಿದೇಶ
ಮುಂಬೈ, ನ.04: ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಮುಂಬೈ ಪೊಲೀಸರು ಬುಧವಾರ ಬೆಳಗ್ಗೆ ಬಂಧಿಸಿದ್ದಾರೆ. ಗೋಸ್ವಾಮಿ ಅವರ ಬಂಧನವನ್ನು ಹಿರಿಯ ಪೊಲೀಸರೊಬ್ಬರು ದೃಢಪಡಿಸಿದ್ದಾರೆ.
2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಹಾಗೂ ಅವರ ತಾಯಿ ಕುಮುದಾ ನಾಯಕ್ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣವೊಂದಕ್ಕೆ ಸಂಬಂಧಿಸಿ ಗೋಸ್ವಾಮಿ ಅವರನ್ನು ಅಲಿಬಾಗ್ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಗೋಸ್ವಾಮಿ ವಿರುದ್ದ ಟಿಆರ್ ಪಿ ತಿರುಚಿದ ಹಗರಣದ ತನಿಖೆ ಪ್ರಗತಿಯಲ್ಲಿರುವಾಗಲೇ ಈ ಬೆಳವಣಿಗೆ ನಡೆದಿದೆ.
2018ರ ಮೇ ನಲ್ಲಿ ಅಲಿಬಾಗ್ ನಲ್ಲಿ 53ರ ವಯಸ್ಸಿನ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಹಾಗೂ ಅವರ ತಾಯಿ ಕುಮುದ್ ನಾಯಕ್ ಆತ್ಮಹತ್ಯೆಗೆ ಶರಣಾಗಿದ್ದರು. ಅರ್ನಬ್ ಗೋಸ್ವಾಮಿ, ಫಿರೋಝ್ ಶೇಖ್ ಹಾಗೂ ನಿತೀಶ್ ಸರ್ದಾ ಅವರು 5.40 ಕೋ.ರೂ. ಪಾವತಿಸಿರಲಿಲ್ಲ. ಹಣಕಾಸಿನ ತೊಂದರೆಯಿಂದ ಸಾವಿಗೆ ಶರಣಾಗಿದ್ದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದರು.
2018ರಲ್ಲಿ ಅಲಿಬಾಗ್ ಪೊಲೀಸರು ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. 2019ರಲ್ಲಿ ರಾಯಗಢ ಪೊಲೀಸರು ಪ್ರಕರಣವನ್ನು ಮುಚ್ಚಿದ್ದರು.
2020ರ ಮೇ ತಿಂಗಳಲ್ಲಿ ಅನ್ವಯ್ ನಾಯಕ್ ಅವರ ಪುತ್ರಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರನ್ನು ಭೇಟಿಯಾಗಿ ರಿಪಬ್ಲಿಕ್ ಟಿವಿಯ ಅರ್ನಬ್ ಗೋಸ್ವಾಮಿ ಬಾಕಿ ಮೊತ್ತ ಪಾವತಿಸದೇ ಇರುವ ಕುರಿತು ಅಲಿಬಾಗ್ ಪೊಲೀಸರು ತನಿಖೆ ನಡೆಸಿಲ್ಲ ಎಂದು ದೂರಿದ ನಂತರ ಈ ಪ್ರಕರಣದ ಹೊಸ ಸಿಐಡಿ ತನಿಖೆಯನ್ನು ಗೃಹ ಸಚಿವರು ಘೋಷಿಸಿದ್ದರು.
In connection with the deaths of interior designer Anvay Naik and mother Kumud Naik, in 2018, Republic TV Editor, Arnab Goswami was arrested by the Mumbai Police this morning.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm