ಬ್ರೇಕಿಂಗ್ ನ್ಯೂಸ್
18-07-23 11:52 am HK News Desk ದೇಶ - ವಿದೇಶ
ತಿರುವನಂತಪುರಂ, ಜುಲೈ 18: ಕೇರಳದ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ (79) ಬೆಂಗಳೂರಿನ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ. 2019ರಲ್ಲಿ ಕ್ಯಾನ್ಸರ್ ಪತ್ತೆಯಾದ ಬಳಿಕ ಉಮ್ಮನ್ ಚಾಂಡಿ ಅವರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಮಾಜಿ ಮುಖ್ಯಮಂತ್ರಿ ನಿಧನ ಹಿನ್ನೆಲೆಯಲ್ಲಿ ಕೇರಳದಲ್ಲಿ ಎರಡು ಶೋಕಾಚರಣೆ ಘೋಷಣೆ ಮಾಡಲಾಗಿದೆ. ಅವರ ನಿಧನ ಹಿನ್ನೆಲೆಯಲ್ಲಿ ಇಂದು ಮಂಗಳವಾರ ಶಾಲೆ, ಕಾಲೇಜಿಗೆ ರಜೆ ನೀಡಲಾಗಿದೆ. ಉಮ್ಮನ್ ಚಾಂಡಿ ಅವರ ಮೃತದೇಹವನ್ನು ತಿರುವನಂತಪುರಕ್ಕೆ ತರಲಾಗಿದ್ದು ಕಾಂಗ್ರೆಸ್ ಕಚೇರಿಯಲ್ಲಿ ಅಂತಿಮ ದರ್ಶನಕ್ಕಿಡಲಾಗಿದೆ. ಆನಂತರ, ಸೆಕ್ರಟರಿಯೇಟ್ ಕಚೇರಿಯ ಬಳಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಹುಟ್ಟೂರು ಕೊಟ್ಟಾಯಂ ಜಿಲ್ಲೆಯಲ್ಲಿ ಅಂತಿಮ ದರ್ಶನದ ಬಳಿಕ ಗುರುವಾರ ಹುಟ್ಟೂರು ಪುತ್ತುಪಲ್ಲಿ ಎಂಬಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯಿಸಿ, ನಾವಿಬ್ಬರೂ ಜೊತೆ ಜೊತೆಯಾಗಿಯೇ ಸಾರ್ವಜನಿಕ ಜೀವನದಲ್ಲಿ ತೊಡಗಿಸಿಕೊಂಡವರು. ವಿದ್ಯಾರ್ಥಿ ಜೀವನದ ಬಳಿಕ ರಾಜಕೀಯಕ್ಕೆ ಬಂದಿದ್ದೆವು. ಉಮ್ಮನ್ ಚಾಂಡಿ ಒಬ್ಬ ಉತ್ತಮ ಆಡಳಿತಗಾರ ಆಗಿದ್ದರು. ಒಂದೇ ಅವಧಿಯಲ್ಲಿ ನಾವು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದೆವು. ಅವರನ್ನು ಕಳಕೊಂಡಿದ್ದು ನೋವಿನ ವಿಚಾರ ಎಂದಿದ್ದಾರೆ. ಪ್ರಧಾನಿ ಮೋದಿ ಅವರೂ ಕಂಬನಿ ಮಿಡಿದಿದ್ದು, ನಾವೊಬ್ಬ ಉತ್ತಮ ಆಡಳಿತಗಾರನನ್ನು ಕಳಕೊಂಡಿದ್ದೇವೆ. ತನ್ನ ಇಡೀ ಜೀವನವನ್ನು ಸಾರ್ವಜನಿಕ ಸೇವೆಗಾಗಿ ಇಟ್ಟಿದ್ದವರು. ಕೇರಳದ ಅಭಿವೃದ್ಧಿಯಲ್ಲಿ ಉಮ್ಮನ್ ಚಾಂಡಿ ಕೊಡುಗೆ ಇದೆ ಎಂದು ಹೇಳಿದ್ದಾರೆ.
ಸೋಲಿಲ್ಲದ ಸರದಾರ, ದಣಿವರಿಯದ ನಾಯಕ
2004-06 ಮತ್ತು 2011 -2016ರ ಎರಡು ಅವಧಿಯಲ್ಲಿ ಕೇರಳದ ಮುಖ್ಯಮಂತ್ರಿಯಾಗಿದ್ದ ಉಮ್ಮನ್ ಚಾಂಡಿ ಯಶಸ್ವಿ ಆಡಳಿತಗಾರನಾಗಿ ಹೆಸರು ಮಾಡಿದ್ದರು. 2006-2011ರ ಅವಧಿಯಲ್ಲಿ ವಿಪಕ್ಷ ನಾಯಕನಾಗಿದ್ದರು. ಕೊಟ್ಟಾಯಂ ಜಿಲ್ಲೆಯ ಪುತ್ತುಪಳ್ಳಿ ಅಸೆಂಬ್ಲಿ ಕ್ಷೇತ್ರದಿಂದ 1970ರಲ್ಲಿ ತನ್ನ 27ರ ಹರೆಯದಲ್ಲೇ ಶಾಸಕರಾಗಿ ಆಯ್ಕೆಯಾಗಿದ್ದ ಉಮ್ಮನ್ ಚಾಂಡಿ ತನ್ನ ಕೊನೆಯ ವರೆಗೂ ಅದೇ ಕ್ಷೇತ್ರದಲ್ಲಿ ಶಾಸಕರಾಗಿ ಮುಂದುವರಿದಿದ್ದು ವಿಶೇಷ. 2021ರ ಚುನಾವಣೆಯಲ್ಲಿ ಸತತ 12ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಲ್ಲದೆ, ಒಂದೇ ಕ್ಷೇತ್ರದಲ್ಲಿ ಗೆಲ್ಲುತ್ತಾ ಬಂದಿದ್ದು ಉಮ್ಮನ್ ಚಾಂಡಿ ಹೆಗ್ಗಳಿಕೆ. ಕಾನೂನು ಪದವಿ ಪಡೆದು 1969ರಲ್ಲಿ ಕಾಂಗ್ರೆಸ್ ವಿದ್ಯಾರ್ಥಿ ಘಟಕದಲ್ಲಿ ಮುಂಚೂಣಿ ನಾಯಕರಾಗಿದ್ದ ಚಾಂಡಿ ಶಾಸಕರಾದ ಬಳಿಕ ಹಿಂತಿರುಗಿ ನೋಡಿದ್ದೇ ಇಲ್ಲ.
Senior Congress leader Oommen Chandy, who served as Chief Minister of Kerala twice, passed away at a private hospital in Bengaluru in the wee hours of Tuesday. Chandy, 79, had not been keeping well for quite some time and was staying in Bengaluru since November last year. He was ailing from throat cancer. As a mark of respect, the Kerala government has declared a public holiday on Tuesday. Also, a two-day mourning will be observed in the state.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm