ಬ್ರೇಕಿಂಗ್ ನ್ಯೂಸ್
06-08-23 10:05 pm HK News Desk ದೇಶ - ವಿದೇಶ
ಪಾಕಿಸ್ತಾನ, ಆಗಸ್ಟ್ 6: ದಕ್ಷಿಣ ಪಾಕಿಸ್ತಾನದಲ್ಲಿ ರೈಲು ಹಳಿ ತಪ್ಪಿದ ಪರಿಣಾಮ 15ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನದ ರೈಲ್ವೆ ಇಲಾಖೆ ತಿಳಿಸಿದೆ.
ಇದು ಅತಿ ದೊಡ್ಡ ಅಪಘಾತ ಎಂದಿರುವ ಪಾಕಿಸ್ತಾನದ ರೈಲ್ವೆ ಸಚಿವ ಖ್ವಾಜಾ ಸಾದ್ ರಫೀಕ್, ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿವೆ ಎಂದು ಮಾಹಿತಿ ನೀಡಿದ್ದಾರೆ. ಕನಿಷ್ಟ 15 ಮಂದಿ ಈ ಅಪಘಾತದಲ್ಲಿ ಸಾವನ್ನಪ್ಪಿದ್ದು, 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ಧಾರೆ ಎಂದು ಅವರು ತಿಳಿಸಿದ್ದಾರೆ. ರೈಲು ಅಪಘಾತದ ತೀವ್ರತೆ ಆಧರಿಸಿ ಹೆಚ್ಚಿನ ರಕ್ಷಣಾ ತಂಡಗಳನ್ನು ಸ್ಥಳಕ್ಕೆ ರವಾನೆ ಮಾಡೋದಾಗಿ ಹೇಳಿದ್ದಾರೆ.
ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದ ನವಾಬ್‌ಷಾ ನಗರದ ಸಹರಾ ರೈಲು ನಿಲ್ದಾಣದ ಬಳಿ ಈ ರೈಲು ಹಳಿ ತಪ್ಪಿದೆ ಎಂದು ಮಾಹಿತಿ ಲಭ್ಯವಾಗಿದೆ.
ಕರಾಚಿಯಿಂದ ಅಬೋಟಾಬಾದ್‌ಗೆ ತೆರಳುತ್ತಿದ್ದ ಹಜಾರಾ ಎಕ್ಸ್‌ಪ್ರೆಸ್ ರೈಲಿನ 8 ಬೋಗಿಗಳು ಹಳಿ ತಪ್ಪಿದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿ ಮೊಹ್ಸಿನ್ ಸಯಾಲ್ ಅವರು ಸುದ್ದಿ
ಈ ಕುರಿತಾಗಿ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ಎಎಫ್‌ಪಿಗೆ ಮಾಹಿತಿ ನೀಡಿರುವ ಸಿಂಧ್ ಪ್ರಾಂತ್ಯದ ರೈಲ್ವೆ ಅಧಿಕಾರಿ ಇಜಾಜ್ ಷಾ, ದೊಡ್ಡ ಸಂಖ್ಯೆಯಲ್ಲಿ ಪ್ರಯಾಣಿಕರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸ್ಥಳಕ್ಕೆ ಹೆಚ್ಚುವರಿ ರೈಲುಗಳನ್ನು ರವಾನೆ ಮಾಡಿರೋದಾಗಿ ತಿಳಿಸಿದ್ದಾರೆ.
ಸಿಂಧ್ ಪ್ರಾಂತ್ಯದ ಸ್ಥಳೀಯ ಸುದ್ದಿ ವಾಹಿನಿಗಳು ಅಪಘಾತದ ಫೋಟೋ, ವಿಡಿಯೋಗಳನ್ನು ಪ್ರಸಾರ ಮಾಡುತ್ತಿವೆ. ನೂರಾರು ಜನರು ಘಟನಾ ಸ್ಥಳದಲ್ಲಿ ಸೇರಿದ್ಧಾರೆ. ರೈಲಿನ ಬೋಗಿಗಳ ಗಾಜನ್ನು ಒಡೆದು ಗಾಯಾಳುಗಳನ್ನು ಹೊರಗೆ ತೆಗೆಯಲಾಗುತ್ತಿದೆ. ಕೆಲವು ಪ್ರಯಾಣಿಕರು ಹಳಿ ತಪ್ಪಿ ಉರುಳಿ ಬಿದ್ದ ರೈಲಿನ ಬೋಗಿಗಳ ಒಳಗಿನಿಂದ ತಾವಾಗೇ ಹೊರಗೆ ಬರುತ್ತಿದ್ದಾರೆ. ಹಲವು ಕೋಚ್‌ಗಳು ಹಳಿಯಿಂದ ಉರುಳಿ ಬಿದ್ದಿವೆ.
A train derailed in southern Pakistan on Sunday, killing at least 30 people and injuring at least 60 others, officials said. Rescue operations were underway. Ten cars of a Rawalpindi-bound train derailed and some overturned, near the Pakistani town of Nawabshah, trapping many passengers, said senior railway officer Mahmoodur Rehman Lakho.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm