ಬ್ರೇಕಿಂಗ್ ನ್ಯೂಸ್
14-08-23 06:13 pm HK News Desk ದೇಶ - ವಿದೇಶ
ಶಿಮ್ಲಾ, ಆಗಸ್ಟ್14: ಹಿಮಾಚಲ ಪ್ರದೇಶದಲ್ಲಿ ಮಳೆಯ ರೌದ್ರಾವಾತಾರ ಮುಂದುವರೆದಿದ್ದು, ಮೇಘಸ್ಫೋಟದ ಹಿನ್ನಲೆಯಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಸೋಮವಾರ ಶಿಮ್ಲಾದಲ್ಲಿ ಶಿವನ ದೇವಾಲಯ ಕುಸಿದು ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಶಿಮ್ಲಾ ಜಿಲ್ಲೆಯ ಸಮ್ಮರ್ ಹಿಲ್ ಪ್ರದೇಶದಲ್ಲಿರುವ ಶಿವ ದೇವಸ್ಥಾನದಲ್ಲಿ ಭೂಕುಸಿತ ಸಂಭವಿಸಿ ಇಡೀ ದೇಗುಲ ಕುಸಿದಿದೆ. ಈ ವೇಳೆ 20ಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಕನಿಷ್ಟ 9 ಮಂದಿ ಸಾವನ್ನಪ್ಪಿದ್ದಾರೆ. ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.


ಪೊಲೀಸ್ ಮೂಲಗಳ ಪ್ರಕಾರ ಭೂ ಕುಸಿತ ಸಂಭವಿಸಿದ ಸಂದರ್ಭದಲ್ಲಿ ಶಿವನ ದೇವಸ್ಥಾನದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಇದ್ದರು. ಶ್ರಾವಣವಾದ್ದರಿಂದ ಭಕ್ತರು ವಿಶೇಷ ಪೂಜೆ ಸಲ್ಲಿಸಲು ದೇಗುಲದಲ್ಲಿ ಸೇರಿದ್ದರು ಎನ್ನಲಾಗಿದೆ.
ಘಟನಾ ಸ್ಥಳದಲ್ಲಿ ರಕ್ಷಣಾ ತಂಡದಿಂದ ಮಣ್ಣಿನಡಿ ಸಿಲುಕಿರುವವರ ರಕ್ಷಣಾ ಕಾರ್ಯ ನಡೆಯುತ್ತಿದೆ. ಹಿಮಾಚಲ ಪ್ರದೇಶದ ಸೋಲಾನ್ ಜಿಲ್ಲೆಯಲ್ಲಿ ಈಗಾಗಲೇ ಮೇಘ ಸ್ಫೋಟ ಸಂಭವಿಸಿ ಏಳು ಮಂದಿ ಮೃತಪಟ್ಟಿದ್ದಾರೆ, ಈ ಘಟನೆಯಲ್ಲಿ ಐವರನ್ನು ರಕ್ಷಣೆ ಮಾಡಲಾಗಿದ್ದು ಓರ್ವ ಕಾಣೆಯಾಗಿದ್ದಾನೆ ಎನ್ನಲಾಗಿದೆ.


ಈ ಬಗ್ಗೆ ಟ್ವೀಟ್ ಕೂಡ ಮಾಡಿರುವ ಅವರು, 'ಶಿಮ್ಲಾದಿಂದ ದುಃಖದ ಸುದ್ದಿ ಹೊರಬಿದ್ದಿದ್ದು, ಭಾರೀ ಮಳೆಯ ಪರಿಣಾಮವಾಗಿ ಸಮ್ಮರ್ ಹಿಲ್‌ನಲ್ಲಿರುವ "ಶಿವ ಮಂದಿರ" ಕುಸಿದು ಬಿದ್ದಿದ್ದು, ಹೊಮ್ಮಿದೆ. ಸದ್ಯಕ್ಕೆ ಒಂಬತ್ತು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನೂ ಸಿಲುಕಿರುವ ವ್ಯಕ್ತಿಗಳನ್ನು ರಕ್ಷಿಸುವ ಸಲುವಾಗಿ ಸ್ಥಳೀಯ ಆಡಳಿತವು ಅವಶೇಷಗಳನ್ನು ತೆರವುಗೊಳಿಸಲು ಶ್ರದ್ಧೆಯಿಂದ ಕಾರ್ಯನಿರ್ವಹಿಸುತ್ತಿದೆ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.
Monsoon furry has claimed at least 29 lives in Himachal Pradesh in two days, with nine of them buried under the rubble of a temple in Shimla. The weather office has predicted heavy rain for the state over the next couple of days.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm