ಬ್ರೇಕಿಂಗ್ ನ್ಯೂಸ್
16-08-23 01:57 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 16: ಇಂಗ್ಲೆಂಡಿನ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ನಡೆದ 'ರಾಮ ಕಥಾ' ಕಾರ್ಯಕ್ರಮದಲ್ಲಿ ಭಾಗವಹಿಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್, 'ನಾನು ಇಲ್ಲಿಗೆ ಪ್ರಧಾನಿಯಾಗಿ ಬಂದಿಲ್ಲ. ಒಬ್ಬ ಹಿಂದೂವಾಗಿ ಬಂದಿದ್ದೇನೆ' ಎಂದು ಹೇಳಿರುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
'ಜೈ ಸೀತಾ ರಾಮ್' ಎಂದು ಭಾಷಣ ಆರಂಭಿಸಿದ ಪ್ರಧಾನಿ ರಿಷಿ ಸುನಕ್, ಶ್ರೀರಾಮನೇ ನನಗೆ ಆದರ್ಶ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಖುಷಿ ತಂದಿದೆ ಎಂದಿದ್ದಾರೆ. ಭಾರತದ ಸ್ವಾತಂತ್ರ್ಯ ದಿನದಂದು ಮೊರಾರಿ ಬಾಪು ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಿಷಿ ಸುನಕ್ ಭಾಗವಹಿಸಿದ್ದರು. ಬಾಪು ಅವರೇ ನಾನು ಇಂದು ಪ್ರಧಾನಿಯಾಗಿ ಇಲ್ಲಿಗೆ ಬಂದಿಲ್ಲ. ಒಬ್ಬ ಹಿಂದೂ ಆಗಿ ಬಂದಿದ್ದೇನೆ ಎಂದಿದ್ದಾರೆ.
ನಂಬಿಕೆ ಎನ್ನುವುದು ವೈಯಕ್ತಿಕ ವಿಷಯವಾಗಿದೆ. ನನ್ನ ಜೀವನದ ಪ್ರತಿಯೊಂದು ಅಂಶದಲ್ಲೂ ನಾನಿಟ್ಟಿರುವ ನಂಬಿಕೆ ನನಗೆ ಮಾರ್ಗದರ್ಶನ ನೀಡಿದೆ. ಪ್ರಧಾನಿಯಾಗುವುದು ದೊಡ್ಡ ಗೌರವ, ಆದರೆ ಅದಕ್ಕೆ ಅನೇಕ ಕಷ್ಟಗಳನ್ನು ಎದುರಿಸಬೇಕು. ನಂಬಿಕೆ ನನಗೆ ಆ ಧೈರ್ಯ, ಶಕ್ತಿ ನೀಡಿದೆ ಎಂದು ಸುನಕ್ ಹೇಳಿದ್ದಾರೆ. ರಾಮಾಯಣ, ಭಗವದ್ಗೀತೆ ಮತ್ತು ಹನುಮಾನ್ ಚಾಲೀಸಾ ನೆನಪಿಸಿಕೊಂಡು ಇಲ್ಲಿಗೆ ಬಂದಿದ್ದೇನೆ. ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಲು, ದೇಶದ ಆಡಳಿತವನ್ನು ಸುಗಮವಾಗಿ ನಡೆಸಲು ನನಗೆ ಶ್ರೀರಾಮನು ಸ್ಫೂರ್ತಿ ನೀಡಿದ್ದಾನೆ ಎಂದರು. ರಿಷಿ ಸುನಕ್ 'ರಾಮ ಕಥಾ' ಕಾರ್ಯಕ್ರಮದಲ್ಲಿ ಮಾತನಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Not here as PM but as a Hindu, UK PM @RishiSunak greets with ‘Jai Siya Ram’ as he attends Morari Bapu's Katha at Cambridge University pic.twitter.com/atO95iQjtf
— 🦏 Payal M/પાયલ મેહતા/ पायल मेहता/ পাযেল মেহতা (@payalmehta100) August 15, 2023
British Prime Minister Rishi Sunak, who met renowned Ramayan ‘kathakar’ Morari Bapu at Cambridge University on Tuesday on the Indian Independence Day, said he was there “not as prime minister but as a Hindu”.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am