ಬ್ರೇಕಿಂಗ್ ನ್ಯೂಸ್
08-11-20 04:47 pm Headline Karnataka News Network ದೇಶ - ವಿದೇಶ
ಚೆನ್ನೈ, ನವೆಂಬರ್ 8: ಅತ್ತ ಐಎಎಸ್ ಅಧಿಕಾರಿಯಾಗಿ ಹೆಸರು ಮಾಡಿದ್ದ ಅಣ್ಣಾಮಲೈ ತಮಿಳುನಾಡಿನಲ್ಲಿ ಬಿಜೆಪಿ ಸೇರ್ಪಡೆಯಾಗಿ ಸಂಚಲನ ಮೂಡಿಸಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿದ್ದ ಮಾಜಿ ಐಎಎಸ್ ಅಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಲು ಸಜ್ಜಾಗಿದ್ದಾರೆ.
ಸೆಂಥಿಲ್ ಕಳೆದ ವರ್ಷ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಆಬಳಿಕ ಬಿಜೆಪಿ ಮತ್ತು ಕೇಂದ್ರ ಸರಕಾರದ ನಡೆಯನ್ನು ವಿರೋಧಿಸಿ ಅಭಿಯಾನ ಆರಂಭಿಸಿದ್ದರು. ಸಿಎಎ ವಿರೋಧಿ ಹೋರಾಟದಲ್ಲೂ ಕಾಣಿಸಿಕೊಂಡಿದ್ದರು.
ಈ ಬಗ್ಗೆ ಸೆಂಥಿಲ್ ಅವರನ್ನು ಪ್ರಶ್ನೆ ಮಾಡಿದಾಗ, ರಾಜಕೀಯಕ್ಕೆ ಸೇರುವುದನ್ನು ಖಚಿತಪಡಿಸಿದ್ದಾರೆ. ನಾನು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲಿದ್ದೇನೆ ಎಂದು 2009ರ ಬ್ಯಾಚಿನ ಐಎಎಸ್ ಅಧಿಕಾರಿ ಸೆಂಥಿಲ್ 'ಡೆಕ್ಕನ್ ಹೆರಾಲ್ಡ್' ಪತ್ರಿಕೆಗೆ ತಿಳಿಸಿದ್ದಾರೆ.
41ರ ಹರೆಯದ ಮಾಜಿ ಅಧಿಕಾರಿ ಸೋಮವಾರ ತಮಿಳುನಾಡು ಕಾಂಗ್ರೆಸ್ ಸಮಿತಿಗೆ(ಟಿಎನ್‌ಸಿಸಿ) ಸೇರಲಿದ್ದಾರೆ ಎನ್ನಲಾಗುತ್ತಿದೆ. ತಮಿಳುನಾಡಿನ ಉಸ್ತುವಾರಿ ಆಗಿರುವ ದಿನೇಶ್ ಗುಂಡೂರಾವ್, ಸೆಂಥಿಲ್‌ರನ್ನು ಪಕ್ಷಕ್ಕೆ ಕರೆತರಲು ಮುಖ್ಯ ಪಾತ್ರ ವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ. ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷಕ್ಕೂ ನೆಲೆ ಇಲ್ಲ. ಡಿಎಂಕೆ, ಎಐಡೆಎಂಕೆ ಸೇರಿ ಪ್ರಾದೇಶಿಕ ಪಕ್ಷಗಳದ್ದೇ ಅಧಿಪತ್ಯ. ಹೀಗಿರುವಾಗ ಬಿಜೆಪಿ ಅಣ್ಣಾಮಲೈ ಮೂಲಕ ನೆಲೆ ಕಂಡುಕೊಳ್ಳಲು ಪ್ರಯತ್ನದಲ್ಲಿದೆ. ಇದೇ ವೇಳೆ, ಅಣ್ಣಾಮಲೈಗೆ ಎದುರಾಗಿ ಸೆಂಥಿಲ್ ಅವರನ್ನು ಕಾಂಗ್ರೆಸ್ ರಾಜಕೀಯಕ್ಕೆ ಎಳೆತಂದಿದೆ.
Former IAS officer, S. Sasikanth Senthil, who quit the civil services last year in 2019, citing a “totalitarian attack on the country” will join the Congress on Monday.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm