ಬ್ರೇಕಿಂಗ್ ನ್ಯೂಸ್
10-11-20 03:43 pm Headline Karnataka News Network ದೇಶ - ವಿದೇಶ
ಪಾಟ್ನಾ, ನವೆಂಬರ್ 10 : ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಜೆಡಿಯು ನೇತೃತ್ವದ ಎನ್ ಡಿಎ ಮೈತ್ರಿಕೂಟ ಸ್ಪಷ್ಟ ಮುನ್ನಡೆ ಪಡೆಯುವತ್ತ ದಾಪುಗಾಲಿಟ್ಟಿದೆ.
ಮಧ್ಯಾಹ್ನ 2 ಗಂಟೆ ಸುಮಾರಿಗೆ ಎನ್ ಡಿಎ ಮೈತ್ರಿಕೂಟ 127 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಆರ್ ಜೆಡಿ ನೇತೃತ್ವದ ಮಹಾಘಟಬಂಧನ್ ಒಕ್ಕೂಟ 105 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಎಲ್ ಜೆಪಿ 2, ಇತರೇ ಪಕ್ಷಗಳು 9 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದ್ದಾರೆ.
ಬಿಹಾರದಲ್ಲಿ 243 ಸದಸ್ಯ ಬಲ ಇದ್ದು, ಸರಕಾರ ರಚನೆಗೆ 122 ಸ್ಥಾನಗಳನ್ನು ಪಡೆಯಬೇಕು. ಮೂರು ಅವಧಿಗೆ ಮುಖ್ಯಮಂತ್ರಿ ಆಗಿ ಆಡಳಿತ ನಡೆಸಿರುವ ನಿತೀಶ್ ಕುಮಾರ್ ನೇತೃತ್ವದಲ್ಲಿ ಎನ್ ಡಿಎ ಮೈತ್ರಿಕೂಟ ಮತ್ತೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ಎನ್ ಡಿಎ ಗೆಲುವು ಕಷ್ಟ ಎನ್ನಲಾಗಿತ್ತು. ಹೆಚ್ಚಿನ ಸಮೀಕ್ಷೆಗಳು ತಲೆಕೆಳಗಾಗುವ ರೀತಿ ಫಲಿತಾಂಶವನ್ನು ಮತದಾರರು ನೀಡಿದ್ದಾರೆ.
ಬಿಜೆಪಿ 80, ಜೆಡಿಯು 48, ಆರ್ ಜೆಡಿ 70, ಕಾಂಗ್ರೆಸ್ 24 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಹೀಗಾಗಿ ಬಿಜೆಪಿ ಇದೇ ಮೊದಲಿಗೆ ಬಿಹಾರದಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಸಿಎಂ ಸ್ಥಾನ ನಿತೀಶ್ ಕುಮಾರ್ ಗೆ ನೀಡುತ್ತಾರಾ ಅಥವಾ ಬಿಜೆಪಿ ಅಭ್ಯರ್ಥಿಯನ್ನು ಸಿಎಂ ಸ್ಥಾನಕ್ಕೆ ತಂದು ಕೂರಿಸುತ್ತಾರೆಯೇ ಅನ್ನುವ ಕುತೂಹಲ ಇದೆ. ಪ್ರಧಾನಿ ಮೋದಿ, ಚುನಾವಣೆಗೆ ಮೊದಲೇ ನಿತೀಶ್ ಕುಮಾರ್ ಅವರೇ ಮುಂದಿನ ಸಿಎಂ ಎಂದು ಹೇಳಿರುವುದರಿಂದ ಫಲಿತಾಂಶ ಬಳಿಕ ಯಾವ ನಿರ್ಧಾರ ಕೈಗೊಳ್ಳುತ್ತಾರೋ ನೋಡಬೇಕು.


ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್ ನೇತೃತ್ವದಲ್ಲಿ ಆರ್ ಜೆಡಿ, ಕಾಂಗ್ರೆಸ್ ಮತ್ತು ಎಡಪಕ್ಷಗಳು ಸೇರಿ ಮಹಾಘಟಬಂಧನ್ ಒಕ್ಕೂಟ ಮಾಡಿಕೊಂಡಿದ್ದು ಈ ಬಾರಿ ಜಯದ ನಿರೀಕ್ಷೆಯಲ್ಲಿದ್ದವು. ಆದರೆ, ಈ ಬಾರಿ ಯಾರು ಅಧಿಕಾರಕ್ಕೇರುತ್ತಾರೆ ಎನ್ನುವುದನ್ನು ಈಗಲೇ ಹೇಳುವಂತಿಲ್ಲ. ಕೊನೆಕ್ಷಣದಲ್ಲಿ ಫಲಿತಾಂಶ ಬದಲಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಈ ಬಾರಿ ಕೊರೊನಾ ನಡುವೆಯೂ ಅತಿ ಹೆಚ್ಚು ಮತದಾನವಾಗಿದ್ದು, ಯಾರಿಗೆ ಜಯ ತಂದುಕೊಡಲಿದೆ ಎನ್ನುವ ಕುತೂಹಲ ಜನರಲ್ಲಿದೆ.
The counting of votes for 243 assembly constituencies in Bihar is under way. The closely fought elections saw incumbent Nitish Kumar, who is heading the JD(U)-BJP combine, take on the Tejashwi Yadav-led Mahagathbandhan comprising RJD, Congress and Left Parties. As per the current trends, the NDA has pulled ahead of the Grand Alliance with several rounds of voting still left
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am