ಬ್ರೇಕಿಂಗ್ ನ್ಯೂಸ್
28-10-23 05:26 pm HK News Desk ದೇಶ - ವಿದೇಶ
ನವದೆಹಲಿ, ಅ 28: ದೇಶದ ಮುಸ್ಲಿಮರಲ್ಲಿ ಅಪರಾಧ ಪ್ರಮಾಣಗಳು ಹೆಚ್ಚಾಗುತ್ತಿದೆ ಎಂದು ಹೇಳುವ ಮೂಲಕ ಅಸ್ಸಾಂನ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಹೊಸ ವಿವಾದ ಹುಟ್ಟುಹಾಕಿದ್ದಾರೆ.
ದೇಶದಲ್ಲಿ ಮುಸ್ಲಿಮರು ದರೋಡೆ, ಡಕಾಯಿತಿ, ಅತ್ಯಾಚಾರ, ಲೂಟಿಯಂಥ ಎಲ್ಲಾ ಅಪರಾಧಗಳಲ್ಲಿ ನಂಬರ್ 1 ಆಗಿದ್ದೇವೆ. ಜೈಲಿಗೆ ಹೋಗುವುದರಲ್ಲಿಯೂ ನಾವೇ ನಂಬರ್ 1 ಎಂದು ಹೇಳಿದ್ದಾರೆ. ತಮ್ಮ ಹೇಳಿಕೆಯ ಕುರಿತಾಗಿ ಕೆಲವರಿಂದ ಭಾರೀ ಪ್ರಮಾಣದ ಟೀಕೆಗಳನ್ನು ಎದುರಿಸಿರುವ ಹೊರತಾಗಿಯೂ ಬದ್ರುದ್ದೀನ್ ಅಜ್ಮಲ್, ಮುಸ್ಲಿಮರಲ್ಲಿ ಅಪರಾಧಗಳ ಪ್ರಮಾಣ ಹೆಚ್ಚಾಗುತ್ತಿದೆ ಎನ್ನುವ ತಮ್ಮ ಹೇಳಿಕೆಯ ಬಗ್ಗೆ ಅಚಲವಾಗಿ ನಿಂತಿದ್ದಾರೆ.
ಶುಕ್ರವಾರ ಈ ಬಗ್ಗೆ ಮಾತನಾಡಿದ ಅವರು ನಾನು ಯಾವುದೇ ತಪ್ಪಾದ ಹೇಳಿಕೆಯನ್ನು ನೀಡಿಲ್ಲ. ಮುಸ್ಲಿಮರಲ್ಲಿ ಶಿಕ್ಷಣದ ಕೊರತಯೇ ನೇರವಾಗಿ ಇಂಥ ಅಪರಾಧ ಪ್ರಕರಣಗಳಲ್ಲಿ ನಮ್ಮವರ ಸಂಖ್ಯೆ ಏರಿಕೆಗೆ ಕಾರಣವಾಗಿದೆ ಎಂದು ಹೇಳಿದ್ದಾರೆ. ಸುಗಂಧ ದ್ರವ್ಯದ ಉದ್ದಿಮೆ ಹೊಂದಿರುವ ಬದ್ರುದ್ದೀನ್ ಅಜ್ಮಲ್ ನೇತೃತ್ವದ ಎಐಯುಡಿಎಫ್, ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರ ನಡುವೆ ತನ್ನ ಅಧಿಕಾರವನ್ನು ಹೊಂದಿದೆ. 126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಎಐಯುಡಿಎಫ್ 15 ಶಾಸಕರನ್ನು ಹೊಂದಿದೆ.
ಮಹಿಳೆಯರನ್ನು, ಯುವತಿಯರನ್ನು ನೋಡಿದ ಬಳಿಕ ನಾವು ಲಂಗಿಕವಾಗಿ ಉತ್ಸುಕರಾಗುತ್ತೇವೆ ಎಂದು ಹೇಳುವ ಹುಡುಗರಿಗೆ ನಾನು ಒಂದೇ ಮಾತನ್ನು ಹೇಳಲು ಬಯಸುತ್ತೇನೆ. ಇಸ್ಲಾಂ ಧರ್ಮದಲ್ಲಿ ಸಾರ್ವಜನಿಕ ಸ್ಥಳಕ್ಕೆ ನಾವು ಹೋದಾಗ ಮಹಿಳೆಯರನ್ನು ಹಾಗೂ ಯುವತಿಯರನ್ನು ನೋಡಿದಾಗ ಸರಿಯಾದ ನಡವಳಿಕೆಯನ್ನು ಹೊಂದಿರಬೇಕು. ನಮ್ಮ ವರ್ತನೆ ಉತ್ತಮವಾಗಿರಬೇಕು. ನಿಮ್ಮ ಕುಟುಂಬದಲ್ಲಿಯೂ ಹೆಣ್ಣು ಮಕ್ಕಳಿದ್ದಾರೆ ಅನ್ನೋದನ್ನು ಅರ್ಥ ಮಾಡಿಕೊಳ್ಳಬೇಕು. ನಿಮ್ಮ ಮನೆಯಲ್ಲಿ ನಿಮ್ಮ ತಾಯಿ ಹಾಗೂ ತಂಗಿಯರು ಇದ್ದಾರೆ ಎಂದು ನೆನಪಾದಾಗ ನಿಮಗೆ ಯಾವುದೇ ಕೆಟ್ಟ ಯೋಚನೆಗಳು ಬರಲು ಸಾಧ್ಯವಿಲ್ಲ ಎಂದು ಅಜ್ಮಲ್ ಹೇಳಿದ್ದಾರೆ.
The Chief of All India United Democratic Front (AIUDF), Badruddin Ajmal, has landed in the middle of a controversy following his recent remark that crime rates are quite high among Muslims.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm