ಬ್ರೇಕಿಂಗ್ ನ್ಯೂಸ್
30-10-23 12:02 pm HK News Desk ದೇಶ - ವಿದೇಶ
ಕೊಚ್ಚಿ, ಅ 30: ಕೇರಳದಲ್ಲಿ ಸಂಭವಿಸಿದ ಸರಣಿ ಸ್ಪೋಟದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 12 ವರ್ಷದ ಬಾಲಕಿಯೊಬ್ಬಳು ಸೋಮವಾರ ಮೃತಪಟ್ಟಿದ್ದಾಳೆ, ಇದರಿಂದ ಕೇರಳ ಸರಣಿ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 3 ಕ್ಕೆ ಏರಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಎರ್ನಾಕುಲಂನ ಕಲಮಸ್ಸೆರಿಯಲ್ಲಿ ಭಾನುವಾರ ಕ್ರಿಶ್ಚಿಯನ್ ಸಮುದಾಯದ ಪ್ರಾರ್ಥನಾ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಸರಣಿ ಸ್ಫೋಟ ಸಂಭವಿಸಿ ಹಲವು ಮಂದಿ ಗಂಭೀರ ಗಾಯಗೊಂಡು ಕೇರಳದ ವಿವಿಧ ಆಸ್ಪತ್ರೆಗೆ ದಾಖಲಾಗಿದ್ದರು ಅದರಲ್ಲಿ ಇಬ್ಬರು ಭಾನುವಾರ ಮೃತಪಟ್ಟರೆ ಹನ್ನೆರಡು ವರ್ಷದ ಬಾಲಕಿ ಸೋಮವಾರ ಮುಂಜಾನೆ ಮೃತಪಟ್ಟಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ತಿಳಿಸಿದೆ.


ಘಟನೆಯಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ಕೇರಳದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಲಾಗಿದೆ.
ಕೇರಳದ ಎರ್ನಾಕುಲಂನಲ್ಲಿ ನಡೆದ ಸರಣಿ ಸ್ಫೋಟ ಪ್ರಕರಣದ ತನಿಖೆಯನ್ನು 20 ಸದಸ್ಯರ ತಂಡ ನಡೆಸಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾನುವಾರ ಹೇಳಿದ್ದಾರೆ. ಅಲ್ಲದೆ, ಪ್ರಕರಣದ ಕುರಿತು ಎಫ್ಐಆರ್ ಕೂಡ ದಾಖಲಾಗಿದೆ.
ಕೊಚ್ಚಿಯಿಂದ ಈಶಾನ್ಯಕ್ಕೆ ಸುಮಾರು 10 ಕಿಲೋ ಮೀಟರ್ ದೂರದಲ್ಲಿರುವ ಕಲಮಶೇರಿಯ ‘ಯಹೋವನ ಸಾಕ್ಷಿಗಳು’ ಪಂಥದ ಕಾರ್ಯಕ್ರಮ ನಡೆಯುತ್ತಿದ್ದ ಸಭಾ ಭವನದಲ್ಲಿ ಬೆಳಿಗ್ಗೆ 9.40ಕ್ಕೆ ಈ ಸ್ಫೋಟ ನಡೆದಿದೆ. ಮೂರು ದಿನಗಳ ಸಮಾವೇಶದ ಕೊನೆಯ ದಿನವಾದ ಭಾನುವಾರ ಎರಡು ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ಸಭಾ ಭವನದ ಒಳಗೆ ಕನಿಷ್ಠ ಮೂರು ಸ್ಫೋಟಗಳು ಸಂಭವಿಸಿವೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಘಟನೆ ನಡೆದ ಕೆಲವು ತಾಸುಗಳ ಬಳಿಕ, ಯಹೋವನ ಸಾಕ್ಷಿಗಳು ಪಂಥದ ಸದಸ್ಯನೆಂದು ಹೇಳಿಕೊಂಡ 48 ವರ್ಷ ವಯಸ್ಸಿನ ಡಾಮಿನಿಕ್ ಮಾರ್ಟಿನ್ ಎಂಬಾತ ಕೊಡಕರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದು, ‘ಸ್ಫೋಟಕ್ಕೆ ನಾನೇ ಕಾರಣ’ ಎಂದು ಹೇಳಿಕೊಂಡಿದ್ದಾನೆ ಎಂದು ಕೇರಳದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಎಂ.ಆರ್.ಅಜಿತ್ ಕುಮಾರ್ ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿ, ಸ್ಫೋಟದ ನಂತರದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು ಎಂದು ಮೂಲಗಳು ತಿಳಿಸಿವೆ.
One person died and over 20 injured after multiple explosions took place at a prayer meeting of Jehovah's Witnesses in the Kalamassery area of Kerala's Kochi on Sunday morning, police said. State Industries Minister P Rajeev said the blast site is cordoned off and police and fire rescue have been pressed into service.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm