ಬ್ರೇಕಿಂಗ್ ನ್ಯೂಸ್
14-11-20 01:54 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 14: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಪಕ್ಷದ ರಾಷ್ಟ್ರೀಯ ಪದಾಧಿಕಾರಿ ಹುದ್ದೆಗಳಿಗೆ ಕೆಲವು ಹೊಸ ನೇಮಕಾತಿಗಳನ್ನು ಮಾಡಿದ್ದಾರೆ.
ಇತ್ತೀಚೆಗೆ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೈಬಿಡಲಾಗಿದ್ದ ಪಿ. ಮುರಳೀಧರ್ ರಾವ್ ಅವರನ್ನು ಮಧ್ಯಪ್ರದೇಶದ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಹೊಸತಾಗಿ ನೇಮಕಗೊಂಡಿದ್ದ ಪ್ರಧಾನ ಕಾರ್ಯದರ್ಶಿಗಳಾದ ತರುಣ್ ಚುಗ್ ಅವರನ್ನು ಜಮ್ಮು ಕಾಶ್ಮೀರ, ಲಡಾಖ್ ಹಾಗೂ ತೆಲಂಗಾಣ ಬಿಜೆಪಿ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಕರ್ನಾಟಕದ ಸಿಟಿ ರವಿ ಅವರಿಗೆ ಮಹಾರಾಷ್ಟ್ರ, ಗೋವಾ ಹಾಗೂ ಮುಂದಿನ ವರ್ಷ ಚುನಾವಣೆ ಎದುರಿಸಲಿರುವ ತಮಿಳುನಾಡಿನ ಪಕ್ಷದ ಉಸ್ತುವಾರಿ ವಹಿಸಲಾಗಿದೆ. ಡಿ. ಪುರಂದೇಶ್ವರಿ ಅವರಿಗೆ ಛತ್ತೀಸಗಢ ಮತ್ತು ಒಡಿಶಾ ಜವಾಬ್ದಾರಿ ನೀಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಜಯ್ ಪಾಂಡಾ ಅವರಿಗೆ ದಿಲ್ಲಿ ಹಾಗೂ ಚುನಾವಣೆ ನಡೆಯಲಿರುವ ಅಸ್ಸಾಂ ಜವಾಬ್ದಾರಿ ವಹಿಸಲಾಗಿದೆ. ಬಿಜೆಪಿ ಪ್ರಧಾನ ಕಾರ್ಯದರ್ಶಿಗಳ ಪೈಕಿ ದಲಿತ ನಾಯಕರಾಗಿರುವ ದುಷ್ಯಂತ್ ಕುಮಾರ್ ಗೌತಮ್ ಅವರಿಗೆ ಪಂಜಾಬ್, ಚಂಡೀಗಢ ಮತ್ತು ಉತ್ತರಾಖಂಡದ ಜವಾಬ್ದಾರಿ ನೀಡಲಾಗಿದೆ.
ಮಾಜಿ ಕೇಂದ್ರ ಸಚಿವ ಹಾಗೂ ಹಾಲಿ ಬಿಜೆಪಿ ಉಪಾಧ್ಯಕ್ಷ ರಾಧಾ ಮೋಹನ್ ಸಿಂಗ್ ಅವರನ್ನು ಉತ್ತರ ಪ್ರದೇಶದ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದ ಬಿಜೆಪಿ ಉಸ್ತುವಾರಿಯಾಗಿ ಕೈಲಾಶ್ ವಿಜಯ್ ವರ್ಗಿಯಾ ಅವರನ್ನು ಉಳಿಸಿಕೊಳ್ಳಲಾಗಿದೆ.
BJP leader Baijayant Panda has been made in charge of Assam and Delhi. Meanwhile, C.T Ravi - ex-Karnataka minister and the national general secretary has been given the leadership of three states - Goa, Maharashtra, and the crucial poll-bound Tamil Nadu.
06-05-25 01:35 pm
HK News Desk
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 04:02 pm
Mangalore Correspondent
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm