ಬ್ರೇಕಿಂಗ್ ನ್ಯೂಸ್
26-12-23 02:03 pm HK News Desk ದೇಶ - ವಿದೇಶ
ಪಾಕಿಸ್ತಾನ, ಡಿ 26: ಇದೇ ಮೊಟ್ಟ ಮೊದಲ ಬಾರಿಗೆ ಹಿಂದೂ ಮಹಿಳೆಯೊಬ್ಬರು ಮುಂಬರುವ ಸಾರ್ವತ್ರಿಕ ಚುನಾವಣೆಗೆ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ)ಯಿಂದ ಅವರು ಕಣಕ್ಕಿಳಿಯಲಿದ್ದಾರೆ. ಖೈಬರ್ ಪಖ್ತುಂಖ್ವಾದ ಬುನೇರ್ ಜಿಲ್ಲೆಯಿಂದ ನಾಮಪತ್ರ ಸಲ್ಲಿಸಿದ್ದಾರೆ.
ಸವೀರಾ ಪ್ರಕಾಶ್ ಚುನಾವಣೆಗೆ ಸ್ಪರ್ಧಿಸುತ್ತಿರುವ ಹೆಮ್ಮೆಯ ಹಿಂದೂ. 16ನೇ ರಾಷ್ಟ್ರೀಯ ಅಸೆಂಬ್ಲಿಗೆ 2024ರ ಫೆಬ್ರವರಿ 8 ರಂದು ಚುನಾವಣೆ ನಡೆಯಲಿದೆ. ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಜೊತೆ ಗುರುತಿಸಿಕೊಂಡಿರುವ ಸವೀರಾ ಅವರು, ಇದೇ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿಯಲಿದ್ದಾರೆ. ಬುನೇರ್ ಜಿಲ್ಲೆಯ PK-25 ಕ್ಷೇತ್ರದಿಂದ ಅವರು ಸಾಮಾನ್ಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇತ್ತೀಚೆಗೆ ವೈದ್ಯಕೀಯ ಸೇವೆಯಿಂದ ನಿವೃತ್ತರಾಗಿರುವ ಸವೀರಾ ಅವರ ತಂದೆ ಓಂ ಪ್ರಕಾಶ್ ಅವರು ಕಳೆದ 35 ವರ್ಷಗಳಿಂದ ಪಿಪಿಪಿ ಪಕ್ಷದ ಸದಸ್ಯರಾಗಿದ್ದಾರೆ.
ಸವೀರಾ ಅವರು ಚುನಾವಣೆಗೆ ಸ್ಪರ್ಧಿಸುತ್ತಿರುವ ಬಗ್ಗೆ ಕ್ವಾಮಿ ವತನ್ ಪಕ್ಷದ ನಾಯಕ ಸಲೀಮ್ ಖಾನ್ ಎಂಬುವರು ಮಾಧ್ಯಮವೊಂದಕ್ಕೆ ಮಾಹಿತಿ ಹಂಚಿಕೊಂಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಸಾಮಾನ್ಯ ಸ್ಥಾನಕ್ಕೆ ಬುನರ್ನಿಂದ ಸವೀರಾ ಪ್ರಕಾಶ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಹಿಂದೂ ಮಹಿಳೆಯೊಬ್ಬರು ಚುನಾವಣೆಗೆ ಸ್ಪರ್ಧಿಸುತ್ತಿರುವುದು ಇದೇ ಮೊದಲು ಎಂದು ತಿಳಿಸಿದ್ದಾರೆ.
ಅಬೋಟಾಬಾದ್ ಇಂಟರ್ನ್ಯಾಷನಲ್ ಮೆಡಿಕಲ್ ಕಾಲೇಜಿನ ಪದವೀಧರರಾದ ಸವೀರಾ ಪ್ರಕಾಶ್ ಅವರು ಬುನರ್ನಲ್ಲಿ ಪಿಪಿಪಿ ಪಕ್ಷದ ಮಹಿಳಾ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ 2022 ರಿಂದ ಸೇವೆ ಸಲ್ಲಿಸುತ್ತಿದ್ದಾರೆ. ಸಮುದಾಯದ ಅಭಿವೃದ್ಧಿಯ ಬದ್ಧತೆ ಹೊಂದಿರುವ ಅವರು, ಮಹಿಳೆಯರ ಸುಧಾರಣೆ, ಸುರಕ್ಷಿತ ವಾತಾವರಣ ಮತ್ತು ಅವರ ಹಕ್ಕುಗಳಿಗಾಗಿ ಪ್ರಬಲವಾಗಿ ಪ್ರತಿಪಾದಿಸುತ್ತಿದ್ದಾರೆ.
ತಮ್ಮ ತಂದೆಯಂತೆಯೇ ರಾಜಕೀಯದಲ್ಲಿ ನೆಲೆ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು. ಹಿಂದುಳಿದ ವರ್ಗದ ಜನರ ಅಭಿವೃದ್ಧಿಗೆ ಶ್ರಮಿಸಲಾಗುವುದು. ಇದೇ ಡಿಸೆಂಬರ್ 23 ರಂದು ಚುನಾವಣೆ ಸ್ಪರ್ಧೆ ಬಯಸಿ ನಾಮಪತ್ರ ಸಲ್ಲಿಸಿದ್ದೇನೆ. ಪಕ್ಷದ ಹಿರಿಯ ನಾಯಕರು ತನ್ನ ಉಮೇದುವಾರಿಕೆ ಅನುಮೋದಿಸಲಿದ್ದಾರೆ. ಮಾನವೀಯತೆ ಮತ್ತು ಜನ ಸೇವೆಗೆ ತಾನು ಬದ್ಧಳಾಗಿದ್ದೇನೆ ಎಂದು ಅವರು ಹೇಳಿದರು.
ಬುನರ್ ಪ್ರದೇಶವು ಪಾಕಿಸ್ತಾನದೊಂದಿಗೆ ವಿಲೀನಗೊಂಡ 55 ವರ್ಷಗಳ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಪಾಕಿಸ್ತಾನದ ಚುನಾವಣಾ ಆಯೋಗದ (ಇಸಿಪಿ) ಇತ್ತೀಚಿನ ತಿದ್ದುಪಡಿಯಂತೆ ಸಾಮಾನ್ಯ ಕ್ಷೇತ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳ ಕಡ್ಡಾಯ ಸ್ಪರ್ಧೆಗೆ ಶೇಕಡಾ 5 ರಷ್ಟು ಮೀಸಲಾತಿ ನೀಡಿದೆ.
In a first, Dr Saveera Parkash, a member of the Hindu community in Khyber Pakhtunkhwa's Buner district in Pakistan, has filed her nomination papers for a general seat in the upcoming general elections in the country, the Dawn reported.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm