ಬ್ರೇಕಿಂಗ್ ನ್ಯೂಸ್
27-12-23 08:11 pm HK News Desk ದೇಶ - ವಿದೇಶ
ನವದೆಹಲಿ, ಡಿ.27: ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಸಂಭವಿಸಿದ ಸ್ಫೋಟ ಘಟನೆಯ ತನಿಖೆಯನ್ನು ದೆಹಲಿ ಪೊಲೀಸರು ತೀವ್ರಗೊಳಿಸಿದ್ದಾರೆ. ಘಟನೆ ನಡೆದ ಸ್ಥಳದ ಬಳಿ ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ಇಬ್ಬರು ಯುವಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ರಾಷ್ಟ್ರೀಯ ತನಿಖಾ ದಳ (ಎನ್‌ಎಸ್‌ಜಿ) ಹಾಗೂ ವಿಧಿವಿಜ್ಞಾನ ತಜ್ಞರು ಘಟನಾ ಸ್ಥಳಕ್ಕೆ ಬುಧವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸ್ಫೋಟಕ್ಕೆ ಬಳಸಿದ ರಾಸಾಯನಿಕ ಯಾವುದು ಎಂಬ ಮಾಹಿತಿ ಸಂಗ್ರಹಿಸಲು ಅಲ್ಲಿನ ಪ್ರದೇಶದ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಎನ್‌ಎಸ್‌ಜಿಯ ಶ್ವಾನ ದಳವೂ ಸ್ಥಳಕ್ಕೆ ಭೇಟಿ ನೀಡಿದೆ.




ನಿನ್ನೆ ರಾತ್ರಿ ಸ್ಫೋಟ ಘಟನೆ ನಡೆದ ಬಳಿಕ ಸ್ಥಳದಲ್ಲಿ ಅರೆಸೇನಾ ಪಡೆಯ ತುಕಡಿಯನ್ನು ನಿಯೋಜಿಸಲಾಗಿದೆ. ಸ್ಫೋಟ ಸಂಭವಿಸಿದ ದೆಹಲಿಯ ಚಾಣಕ್ಯಪುರಿ ಎಂಬೆಸಿ ಎನ್‌ಕ್ಲೇವ್ ಮತ್ತು ಯಹೂದಿಗಳಿಗೆ ಸೇರಿದ ಸಂಸ್ಥೆಗಳಿರುವಲ್ಲಿ ಭದ್ರತಾ ಸಿಬ್ಬಂದಿ ಹದ್ದಿನ ಕಣ್ಣನ್ನು ನೆಟ್ಟಿದ್ದಾರೆ.
ಘಟನಾ ಸ್ಥಳದ ಸುತ್ತಮುತ್ತಲಿನ ಅಬ್ದುಲ್ ಕಲಾಂ ರಸ್ತೆ, ಪೃಥ್ವಿರಾಜ್ ರಸ್ತೆ ಸೇರಿದಂತೆ ಹಲವು ಪ್ರದೇಶಗಳ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿರುವ ದೃಶ್ಯಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಸ್ಫೋಟಕ್ಕೂ ಕೆಲವು ನಿಮಿಷಗಳ ಮೊದಲು ಇಬ್ಬರು ಯುವಕರು ಸ್ಥಳದಿಂದ ಅನತಿ ದೂರದಲ್ಲಿ ಸಾಗಿರುವ ದೃಶ್ಯ ಇದೆ. ಇವರ ಬಗ್ಗೆ ಅನುಮಾನ ವ್ಯಕ್ತವಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A blast occurred close to the Israel embassy in New Delhi on Monday, following which security has been beefed up in the area. The embassy has confirmed the incident, and no casualties or injuries have been reported.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm