ಬ್ರೇಕಿಂಗ್ ನ್ಯೂಸ್
01-01-24 03:33 pm HK News Desk ದೇಶ - ವಿದೇಶ
ನವದೆಹಲಿ, ಜ.1: ಪಾಕಿಸ್ತಾನದ ಪರವಾಗಿ ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಸಂಘಟನೆಯಾಗಿ ಗುರುತಿಸಿದ್ದ ತೆಹ್ರೀಕ್-ಇ-ಹುರಿಯತ್ ಸಂಘಟನೆಯನ್ನ ಕೇಂದ್ರ ಸರ್ಕಾರ ನಿಷೇಧಿಸಿದೆ. ಭಾರತ ವಿರೋಧಿ ಭಾವನೆ ಹಾಗೂ ಕಾಶ್ಮೀರದಲ್ಲಿ ಭಯೋತ್ಪಾದನೆ ಚಟುವಟಿಕೆಗೆ ಪ್ರಚೋದನೆ ನೀಡುತ್ತಿದ್ದ ಆರೋಪದಲ್ಲಿ ಸಂಘಟನೆಯನ್ನು ನಿಷೇಧಿಸಲಾಗಿದೆ.
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯಡಿ ತೆಹ್ರೀಕ್- ಇ-ಹುರಿಯತ್ ಅನ್ನು ‘ಕಾನೂನುಬಾಹಿರ ಸಂಘಟನೆ’ ಎಂದು ಘೋಷಿಸಿದೆ. ಈ ಸಂಘಟನೆಯನ್ನು ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ 2004ರಲ್ಲಿ ಸ್ಥಾಪಿಸಿದ್ದು ಕಾಶ್ಮೀರದಲ್ಲಿ ನಡೆದ ದುಷ್ಕೃತ್ಯಗಳಲ್ಲಿ ಪರೋಕ್ಷ ಸಹಾಯ ಮಾಡಿತ್ತು. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಟ್ವೀಟ್ ಮಾಡಿದ್ದು, ತೆಹ್ರೀಕ್-ಇ- ಹುರಿಯತ್ ಜಮ್ಮು ಮತ್ತು ಕಾಶ್ಮೀರದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸುವ ಚಟುವಟಿಕೆಗಳಲ್ಲಿ ನಿರತವಾಗಿದೆ. ಅಲ್ಲದೆ ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕತಾವಾದಕ್ಕೆ ಉತ್ತೇಜನ ನೀಡಲು ಭಾರತ ವಿರೋಧಿ ಪ್ರಚಾರ ಮತ್ತು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ತಿಳಿಸಿದ್ದಾರೆ.
ತೆಹ್ರೀಕ್-ಇ ಹುರಿಯತ್ ಕಾನ್ಫರೆನ್ಸ್ ಒಕ್ಕೂಟವನ್ನು 1993 ರಲ್ಲಿ ಮೊದಲ ಬಾರಿಗೆ ರಚಿಸಲಾಗಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ 26 ಸಂಘಟನೆಗಳ ಒಕ್ಕೂಟ ಇದಾಗಿದ್ದು ಅದರಲ್ಲಿ ಹುರಿಯತ್ ಕಾನ್ಫರೆನ್ಸ್ ಒಂದು. ಇದರಲ್ಲಿ ಪಾಕಿಸ್ತಾನ ಪರ ಇರುವ ಪ್ರತ್ಯೇಕತಾವಾದಿ ಹೋರಾಟಗಾರರು ಇದ್ದಾರೆ. JKLF ಮತ್ತು ದುಖ್ತರನ್-ಇ-ಮಿಲ್ಲತ್ ಸಂಘಟನೆಗಳು ಇದೇ ಒಕ್ಕೂಟದಲ್ಲಿ ಸೇರಿವೆ.
The Centre on Sunday declared Tehreek-e-Hurriyat (TeH) an 'Unlawful Association' under the Unlawful Activities (Prevention) Act (UAPA). The organisation was earlier headed by deceased separatist leader Syed Ali Shah Geelani.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm