ಬ್ರೇಕಿಂಗ್ ನ್ಯೂಸ್
07-01-24 08:48 pm HK News Desk ದೇಶ - ವಿದೇಶ
ನವದೆಹಲಿ, ಜ 07: ಪ್ರಧಾನಿ ಮೋದಿ ಇತ್ತೀಚಿಗೆ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದನ್ನು ಅಣಕಿಸಿ ಮಾಲ್ಡೀವ್ಸ್ ಸಚಿವರು ಮತ್ತು ರಾಜಕಾರಣಿಗಳು ನೀಡಿರುವ ವಿವಾದಾತ್ಮಕ ಹೇಳಿಕೆಗಳು ಆಕ್ರೋಶಕ್ಕೆ ಕಾರಣವಾಗಿವೆ. ಈ ವಿಷಯವನ್ನು ಭಾರತೀಯ ರಾಯಭಾರಿ ಖಂಡಿಸಿದ ಬೆನ್ನಲ್ಲೇ ಮೂವರು ಸಚಿವರನ್ನು ಮಾಲ್ಡೀವ್ಸ್ ಸರ್ಕಾರ ಅಮಾನತುಗೊಳಿಸಿದೆ. ಸಚಿವರಾದ ಮರಿಯಮ್ ಶಿಯುನಾ, ಮಲ್ಶಾ ಶರೀಫ್ ಮತ್ತು ಮಹಜೂಮ್ ಮಜೀದ್ ಅವರ ತಲೆದಂಡವಾಗಿದೆ.
ನೆರೆಯ ಭಾರತವನ್ನು ಅವಮಾನಿಸುವ ಸಾಮಾಜಿಕ ಮಾಧ್ಯಮಗಳ ಕೆಲವು ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಭಾರತ ಸರ್ಕಾರದ ನಿಲುವಿನ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು ಹೇಳಿಕೆಯನ್ನು ನೀಡಿದೆ ಎಂದು ಮಾಲ್ಡೀವ್ಸ್ ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಸರ್ಕಾರಿ ಹುದ್ದೆಗಳಲ್ಲಿದ್ದಾಗ ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಪೋಸ್ಟ್ ಮಾಡಿದವರನ್ನು ಈಗ ಅಮಾನತುಗೊಳಿಸಲಾಗಿದೆ ಎಂದು ಮಾಲ್ಡೀವ್ಸ್ ಸರ್ಕಾರ ಹೇಳಿದೆ.
ಸಚಿವೆ ಮರಿಯಮ್ ಶಿಯುನಾ ತಮ್ಮ ಟ್ವೀಟ್‌ನಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪದ ಬಳಸಿದ್ದರು. ಇದು ಟೀಕೆ, ಆಕ್ರೋಶ ಹಾಗೂ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಶಿಯುನಾ ತಮ್ಮ ಪೋಸ್ಟ್ಅನ್ನು ಒಂದೆರಡು ಗಂಟೆಗಳಲ್ಲೇ ಡೀಲಿಟ್ ಮಾಡಿದ್ದರು. ಆದರೆ, ಇದು ಅಷ್ಟೊತ್ತಿಗೆ ಭಾರತ ಮತ್ತು ಮಾಲ್ಡೀವ್ಸ್ ನಡುವಿನ ರಾಜತಾಂತ್ರಿಕ ಸಂಬಂಧಗಳನ್ನು ಹದಗೆಡಿಸಿತ್ತು.
ಮಾಲ್ಡೀವ್ಸ್‌ನ ಭದ್ರತೆ ಮತ್ತು ಸಮೃದ್ಧಿಗೆ ಸಹಕಾರಿಯಾದ ಪ್ರಮುಖ ಮಿತ್ರ ನಾಯಕನ ಬಗ್ಗೆ ಮಾಲ್ಡೀವ್ಸ್ ಸರ್ಕಾರದ ಶಿಯುನಾ ಎಂತಹ ಭಯಾನಕ ಭಾಷೆ ಇದು. ಮುಯಿಝು ಈ ಹೇಳಿಕೆಗಳಿಂದ ದೂರವಿರಬೇಕು. ಇದು ಸರ್ಕಾರದ ನೀತಿಯನ್ನು ಪ್ರತಿಬಿಂಬಿಸುವುದಿಲ್ಲ ಎಂದು ಮತ್ತು ಭಾರತಕ್ಕೆ ಸ್ಪಷ್ಟ ಭರವಸೆ ನೀಡಬೇಕು'' ಎಂದು ನಶೀದ್ 'ಏಕ್ಸ್' ಪೋಸ್ಟ್ನಲ್ಲಿ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರಿಗೆ ಸಲಹೆ ನೀಡಿದ್ದಾರೆ.
ಇದೇ ವೇಳೆ, ''ಸಚಿವರ ಅವಹೇಳನಕಾರಿ ಹೇಳಿಕೆಗಳು ಖಂಡನೀಯ ಮತ್ತು ಅಸಹ್ಯಕರ'' ಎಂದು ಮಾಲ್ಡೀವ್ಸ್ ಮಾಜಿ ವಿದೇಶಾಂಗ ಸಚಿವ ಅಬ್ದುಲ್ಲಾ ಶಾಹಿದ್ ಸಹ ಅಸಮಾಧಾನ ಹೊರಹಾಕಿದ್ದಾರೆ. ತಮ್ಮ ಸಚಿವರ ಬಗ್ಗೆ ಸ್ವದೇಶಿ ನಾಯಕರಿಂದಲೇ ಖಂಡನೆ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದೆ.
India has raised with the Maldives government the derogatory remarks against Prime Minister Narendra Modi by a minister of the island nation following a row that erupted after Maldivian politicians mocked the Prime Minister's Lakshadweep visit.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am