ಬ್ರೇಕಿಂಗ್ ನ್ಯೂಸ್
10-01-24 07:24 pm HK News Desk ದೇಶ - ವಿದೇಶ
ನವದೆಹಲಿ, ಜ.10: ರಾಮ ಮಂದಿರ ನಿರ್ಮಾಣ ಕಾರ್ಯ ಇನ್ನೂ ಪೂರ್ಣ ಆಗಿಲ್ಲ. ಬಿಜೆಪಿ, ಆರೆಸ್ಸೆಸ್ ರಾಜಕೀಯ ಲಾಭಕ್ಕಾಗಿ ರಾಮ ಮಂದಿರವನ್ನು ತರಾತುರಿಯಲ್ಲಿ ಉದ್ಘಾಟನೆ ಮಾಡುತ್ತಿದ್ದಾರೆ. ಅದು ಸಂಪೂರ್ಣ ರಾಜಕೀಯ ಪ್ರೇರಿತ ಕಾರ್ಯಕ್ರಮವಾಗಿದ್ದು, ಕಾಂಗ್ರೆಸ್ ಅದರಲ್ಲಿ ಪಾಲ್ಗೊಳ್ಳುವುದಿಲ್ಲ. ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ ಕಾರ್ಯಕ್ರಮಕ್ಕೆ ಹೋಗಲ್ಲ ಎಂದು ಕಾಂಗ್ರೆಸ್ ಹೇಳಿದೆ.
ಜನವರಿ 22ರ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಪಾಲ್ಗೊಳ್ಳುತ್ತಾರೆಯೇ ಎನ್ನುವ ಕುತೂಹಲ ಇತ್ತು. ಇಂಡಿಯಾ ಒಕ್ಕೂಟದ ಸದಸ್ಯರು ಕಾಂಗ್ರೆಸ್ ತನ್ನ ನಿಲುವು ಸ್ಪಷ್ಟಪಡಿಸಬೇಕೆಂದು ಒತ್ತಾಯಿಸಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೇಳಿಕೆ ಬಿಡುಗಡೆ ಮಾಡಿದ್ದು, ನಾವು ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ ಎಂದಿದೆ.
ಭಗವಾನ್ ರಾಮನನ್ನು ದೇಶದಲ್ಲಿ ಲಕ್ಷಾಂತರ ಜನರು ಆರಾಧಿಸುತ್ತಾರೆ. ಧರ್ಮ ಎನ್ನುವುದು ವೈಯಕ್ತಿಕ ವಿಚಾರವಾಗಿದೆ. ಆದರೆ ಬಿಜೆಪಿ ಮತ್ತು ಆರೆಸ್ಸೆಸ್ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವುದನ್ನು ಸುದೀರ್ಘ ಕಾಲದಿಂದ ರಾಜಕೀಯ ಅಜೆಂಡಾ ಮಾಡಿಕೊಂಡಿದೆ. ಅಪೂರ್ಣ ರಾಮ ಮಂದಿರವನ್ನು ಉದ್ಘಾಟನೆ ಮಾಡುವುದು ಬಿಜೆಪಿಯ ರಾಜಕೀಯ ಲಾಭದ ಉದ್ದೇಶ ಹೊಂದಿದೆ. 2019ರಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಗೌರವಿಸುವುದಲ್ಲದೆ, ದೇಶದ ಕೋಟ್ಯಂತರ ಜನರ ಭಾವನೆಯನ್ನು ಗೌರವಿಸುತ್ತೇವೆ. ಮಂದಿರ ಉದ್ಘಾಟನೆಗೆ ನೀಡಿರುವ ಆಹ್ವಾನವನ್ನು ಗೌರವಪೂರ್ವಕವಾಗಿ ನಿರಾಕರಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಪಕ್ಷದ ಹೇಳಿಕೆ ಬಿಡುಗಡೆ ಮಾಡಿರುವ ಜನರಲ್ ಸೆಕ್ರೆಟರಿ ಜೈರಾಮ್ ರಮೇಶ್ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳದಿರುವ ಬಗ್ಗೆ ಮೂರು ಕಾರಣಗಳನ್ನು ಕೊಟ್ಟಿದ್ದಾರೆ. ಒಂದನೇದಾಗಿ ಆರೆಸ್ಸೆಸ್- ಬಿಜೆಪಿ ರಾಮ ಮಂದಿರವನ್ನು ರಾಜಕೀಯ ಲಾಭದ ಉದ್ದೇಶಕ್ಕೆ ಬಳಸಿಕೊಳ್ಳುತ್ತಿದೆ. ಎರಡನೇ ಕಾರಣ, ಮಂದಿರ ಕಟ್ಟಡದ ನಿರ್ಮಾಣ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಮೂರನೇಯದಾಗಿ, ಮಂದಿರ ಉದ್ಘಾಟನೆಯನ್ನು ರಾಜಕೀಯ ಕಾರಣಕ್ಕಾಗಿ ಕಟ್ಟಡ ಪೂರ್ಣಗೊಳ್ಳುವ ಮೊದಲೇ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದೆ. ಈ ಹಿಂದೆ ಮಂದಿರ ಉದ್ಘಾಟನೆಯ ಆಹ್ವಾನವನ್ನು ಇಂಡಿಯಾ ಒಕ್ಕೂಟದ ಸಿಪಿಎಂ ಜನರಲ್ ಸೆಕ್ರಟರಿ ಸೀತಾರಾಂ ಯೆಚೂರಿ ತಿರಸ್ಕರಿಸಿ ಹೇಳಿಕೆ ನೀಡಿದ್ದರು.
Congress President Mallikarjun Kharge and senior leaders including former president Sonia Gandhi and Leader of Opposition in Lok Sabha Adhir Ranjan Chowdhury will not attend the Ram Temple consecration event to be held in Ayodhya on January 22, a party communique said on Wednesday.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm