ಬ್ರೇಕಿಂಗ್ ನ್ಯೂಸ್
11-01-24 03:34 pm HK News Desk ದೇಶ - ವಿದೇಶ
ಅಯೋಧ್ಯೆ, ಜ.11: ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ ಅವರು ಜನವರಿ 22ರಂದು ನಡೆಯುವ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದು ಪರಿಷತ್ ಹೇಳಿಕೆ ನೀಡಿದೆ. ರಾಮಜನ್ಮಭೂಮಿ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದ ಎಲ್.ಕೆ. ಆಡ್ವಾಣಿ ರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಎಚ್ ಪಿ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
96 ವರ್ಷದ ಆಡ್ವಾಣಿ ಮತ್ತು 89 ವರ್ಷದ ಮುರಳಿ ಮನೋಹರ ಜೋಷಿ ಅವರನ್ನು ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಆಹ್ವಾನಿಸಲಾಗಿತ್ತು. ಆದರೆ ಅವರನ್ನು ವಯಸ್ಸಿನ ಕಾರಣದಿಂದ ಬಾರದೇ ಇರಲು ಮನವೊಲಿಸಲಾಗಿದೆ ಎಂದು ಈ ಹಿಂದೆ ಹೇಳಿದ್ದು ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಆನಂತರ, ವಿಶ್ವ ಹಿಂದು ಪರಿಷತ್ ಮುಖಂಡರು ಅವರನ್ನು ಕರೆತರಲು ಪ್ರಯತ್ನ ನಡೆಸಲಾಗುವುದು ಎಂದು ಸ್ಪಷ್ಟನೆ ನೀಡಿದ್ದರು.
ಇದೀಗ ಅವರನ್ನು ಕರೆತರಲು ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ವೈದ್ಯಕೀಯ ಸೌಲಭ್ಯಗಳನ್ನೂ ಮಾಡಲಾಗಿದೆ ಎಂದು ಅಲೋಕ್ ಕುಮಾರ್ ಅಯೋಧ್ಯೆಯಲ್ಲಿ ತಿಳಿಸಿದ್ದಾರೆ. ದೇಶಾದ್ಯಂತ ಸಾವಿರಾರು ಸಾಧು ಸಂತರನ್ನು ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ಆಹ್ವಾನಿಸಲಾಗಿದೆ. ಜ.16ರಂದು ಏಳು ದಿನಗಳ ಪೂಜಾ ವಿಧಿಗಳು ಆರಂಭಗೊಳ್ಳಲಿದ್ದು ಜ.22ರಂದು ರಾಮನ ವಿಗ್ರಹದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ.
Veteran BJP leader LK Advani will be attending the consecration ceremony of the Ram Temple in Ayodhya on January 22, news agency ANI quoted a Vishva Hindu Parishad leader as saying.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm