ಬ್ರೇಕಿಂಗ್ ನ್ಯೂಸ್
11-01-24 10:43 pm HK News Desk ದೇಶ - ವಿದೇಶ
ನವದೆಹಲಿ, ಜ.11: ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಅಪೂರ್ಣವಾಗಿರುವ ಮಂದಿರದಲ್ಲಿ ರಾಮನ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠೆ ಮಾಡುವುದು ಶಾಸ್ತ್ರಕ್ಕೆ ವಿರುದ್ಧ ಎಂದು ಉತ್ತರಾಖಂಡದ ಜ್ಯೋತಿರ್ಮಠದ ಪೀಠಾಧೀಶ ಶಂಕರಾಚಾರ್ಯ ಶ್ರೀ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದ್ದಾರೆ. ಆಮೂಲಕ ರಾಮ ಮಂದಿರ ಉದ್ಘಾಟನೆ ಬಗ್ಗೆ ಸನಾತನ ಧರ್ಮದ ಪ್ರಮುಖ ಹಿಂದು ಪೀಠಗಳೇ ವಿರೋಧ ವ್ಯಕ್ತಪಡಿಸಿದಂತಾಗಿದೆ.
ಮಂದಿರ ಉದ್ಘಾಟನೆಯ ಸಮಾರಂಭವನ್ನು ಪವಿತ್ರ ಹಿಂದೂ ಧರ್ಮಗ್ರಂಥಗಳಿಗೆ ವಿರುದ್ಧವಾಗಿ ನಡೆಸಲಾಗುತ್ತಿದೆ. ದೇವಾಲಯದ ನಿರ್ಮಾಣ ಕೆಲಸ ಅಪೂರ್ಣ ಆಗಿರುವುದರಿಂದ ಇದರ ನಡುವೆ ಪ್ರಾಣ ಪ್ರತಿಷ್ಠೆ ಮಾಡುವುದು ಶಾಸ್ತ್ರಗಳಿಗೆ ವಿರುದ್ಧವಾಗುತ್ತದೆ ಎಂದು ಮಠದ ಅಧಿಕೃತ ಸೋಶಿಯಲ್ ಮೀಡಿಯಾ ಟ್ವಿಟರ್ ಖಾತೆಯಲ್ಲಿ ವೀಡಿಯೊ ಮೂಲಕ ಅವರು ಹೇಳಿದ್ದಾರೆ.
ನಾಲ್ಕು ಜ್ಯೋತಿರ್ಮಠಗಳು 8ನೇ ಶತಮಾನದ ಆಚಾರ್ಯ ಆದಿಶಂಕರರಿಂದ ಸ್ಥಾಪಿಸಲ್ಪಟ್ಟವುಗಳು. ಹಿಂದೂ ಧರ್ಮದ ಅದ್ವೈತ ವೇದಾಂತ ಸಂಪ್ರದಾಯವನ್ನು ಈ ನಾಲ್ಕು ಮಠಗಳು ಪ್ರತಿಪಾದಿಸುತ್ತವೆ. ಈಗ ಉತ್ತರಾಖಂಡದ ಜೋಶಿಮಠದ ಜ್ಯೋತಿರ್ಮಠ, ಪುರಿಯ ಗೋವರ್ಧನ ಮಠದ ಶ್ರೀಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನೆರಡು ಮಠಗಳೆಂದರೆ ಕರ್ನಾಟಕದ ಶೃಂಗೇರಿಯ ಶ್ರೀ ಶಾರದಾ ಪೀಠ ಮತ್ತು ಗುಜರಾತಿನ ದ್ವಾರಕಾ ಶಾರದಾ ಪೀಠ. ಈ ಪೈಕಿ ಶೃಂಗೇರಿ ಪೀಠದ ಸ್ವಾಮಿಗಳು ತಾವು ರಾಮ ಮಂದಿರ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದಿದ್ದಾರೆ.
ಹಾಗೆಂದು, ನಾವು ಪ್ರಧಾನಿ ಮೋದಿ ವಿರೋಧಿಗಳಲ್ಲ. ಆದರೆ ಧರ್ಮಕ್ಕೆ ವಿರುದ್ಧವಾಗಿ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯಬಾರದು. ರಮಾನಂದ ಸಂಪ್ರದಾಯದ ಪ್ರಕಾರ ಮಾಡುವುದಾದರೆ ಚಂಪತ್ ರಾಯ್, ನೃಪೇಂದ್ರ ಮಿಶ್ರಾ ಟ್ರಸ್ಟ್ ಸ್ಥಾನಗಳಿಗೆ ರಾಜೀನಾಮೆ ನೀಡಲಿ. ಅಯೋಧ್ಯೆಯ ರಾಮಮಂದಿರವನ್ನು ರಮಾನಂದ ಸಂಪ್ರದಾಯದವರಿಗೆ ವಹಿಸಲಿ ಎಂದು ಅವಿಮುಕ್ತೇಶ್ವರಾನಂದ ಸರಸ್ವತಿ ಆಗ್ರಹಿಸಿದ್ದಾರೆ.
ಪುರಿಯ ಶಂಕರಾಚಾರ್ಯ ಪೀಠದ ನಿಶ್ವಲಾನಂದ ಸ್ವಾಮೀಜಿ ಕೂಡ ಪ್ರಾಣ ಪ್ರತಿಷ್ಠಾಪನೆಗೆ ಗೈರಾಗಲಿದ್ದಾರೆ. ನಮಗೆ ಮಂದಿರ ಲೋಕಾರ್ಪಣೆಗೆ ಆಹ್ವಾನ ಬಂದಿದೆ. ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ನಾವು ಭಾಗಿಯಾಗಲ್ಲ. ಧಾರ್ಮಿಕ ವಿಧಿ-ವಿಧಾನಗಳ ಪ್ರಕಾರ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿಲ್ಲ. ಇದಕ್ಕೆ ನಮ್ಮ ಸಹಮತಿ ಇಲ್ಲ. ಶಾಸ್ತ್ರ, ಧಾರ್ಮಿಕ ವಿಧಿ ವಿಧಾನಗಳು ಸರಿಯಾಗಿ ನಡೆಯಬೇಕು. ಹೀಗಾಗಿ ಜನವರಿ 22ರ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ ಎಂದು ನಿಶ್ಚಲಾನಂದ ಸ್ವಾಮೀಜಿ ಹೇಳಿದ್ದಾರೆ.
Swami Avimukteshwaranand Saraswati, the shankaracharya of Jyotishpeeth in Uttarakhand, has said the four shankaracharyas will not attend the January 22 inauguration of the Ram temple in Ayodhya because it is being held in violation of the rules of Sanatan Dharma.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
07-10-25 11:16 pm
HK News Desk
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
08-10-25 09:17 am
Udupi Correspondent
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm