ಬ್ರೇಕಿಂಗ್ ನ್ಯೂಸ್
28-01-24 10:18 pm HK News Desk ದೇಶ - ವಿದೇಶ
ಪಾಟ್ನಾ, ಜ.29: ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿ ಮೈತ್ರಿ ಸರ್ಕಾರ ಮತ್ತೆ ಅಸ್ತಿತ್ವಕ್ಕೆ ಬಂದಿದೆ. ನಿತೀಶ್ ಕುಮಾರ್ ಬಿಹಾರದಲ್ಲಿ 9ನೇ ಬಾರಿ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ.
ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲ ರಾಜೇಂದ್ರ ಆರ್ಲೇಕರ್ ಅವರು ಭಾನುವಾರ ನಿತೀಶ್ ಕುಮಾರ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ವೇಳೆ ಬಿಜೆಪಿ ಶಾಸಕ ಸಾಮ್ರಾಟ್ ಚೌಧರಿ ಅವರು ನೂತನ ಡಿಸಿಎಂ ಆಗಿ ಪ್ರಮಾಣ ಸ್ವೀಕರಿಸಿದ್ದಾರೆ. ವಿಜಯ್ ಕುಮಾರ್ ಸಿನ್ಹಾ, ಡಾ. ಪ್ರೇಮ್ ಕುಮಾರ್, ವಿಜಯ್ ಕುಮಾರ್ ಚೌಧರಿ, ವಿಜೇಂದ್ರ ಪ್ರಸಾದ್ ಯಾದವ್, ಶ್ರವಣ್ ಕುಮಾರ್, ಸಂತೋಷ್ ಸುಮನ್ ಮತ್ತು ಸುಮಿತ್ ಕುಮಾರ್ ಸಿಂಗ್ ಅವರು ನೂತನ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿ ಪದಗ್ರಹಣ ಮಾಡಿದ್ದಾರೆ.
ಜೆಡಿಯು ಪಕ್ಷದ ಅಧ್ಯಕ್ಷ ನಿತೀಶ್ ಕುಮಾರ್ ಬಿಹಾರದಲ್ಲಿ 9ನೇ ಬಾರಿಗೆ ಸಿಎಂ ಆಗಿ ದಾಖಲೆ ನಿರ್ಮಿಸಿದ್ದಾರೆ. ಬಿಹಾರದಲ್ಲಿ ದೀರ್ಘ ಕಾಲ ಮುಖ್ಯಮಂತ್ರಿಯಾಗಿರುವ ದಾಖಲೆಯೂ ಅವರದ್ದು. ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷ ಬಹುಮತ ಇಲ್ಲದಿದ್ದರೂ ಸುದೀರ್ಘ ಕಾಲ ರಾಜ್ಯದ ಚುಕ್ಕಾಣಿ ಹಿಡಿದಿರುವ ದಾಖಲೆಯನ್ನೂ ಮಾಡಿದ್ದಾರೆ.
ಜೆಡಿಯು ಮೊನ್ನೆಯ ವರೆಗೂ ಆರ್ಜೆಡಿ ಜೊತೆಗೆ ಮೈತ್ರಿ ಮಾಡಿಕೊಂಡಿತ್ತು. ಅಲ್ಲದೆ, ಕಾಂಗ್ರೆಸ್ ಜೊತೆ ಸೇರಿ ಮಹಾಘಟಬಂದನ್ ಮಹಾ ಒಕ್ಕೂಟದ ಭಾಗವಾಗಿತ್ತು. ಆದರೆ, ಕಾಂಗ್ರೆಸ್ ಪಕ್ಷದಿಂದ ಇಂಡಿಯಾ ಒಕ್ಕೂಟಕ್ಕೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿ ನಿತೀಶ್ ಕುಮಾರ್ ಮೈತ್ರಿಕೂಟದಿಂದ ಹೊರಬರಲು ನಿರ್ಧರಿಸಿದ್ದು ಇದೀಗ ರಾಜ್ಯದಲ್ಲಿ ತನ್ನ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಜೊತೆಗೆ ಮೈತ್ರಿ ಮರು ಸ್ಥಾಪನೆ ಮಾಡಿದ್ದಾರೆ.
ಇದೀಗ ಲೋಕಸಭೆ ಚುನಾವಣೆ ಹೊತ್ತಿಗೆ ಮತ್ತೆ ಎನ್ಡಿಎ ತೆಕ್ಕೆಗೆ ಜೆಡಿಯು ಬಂದಂತಾಗಿದೆ. ಮತ್ತೆ ಲೋಕಸಭೆ ಗೆಲ್ಲುವತ್ತ ಕಣ್ಣು ನೆಟ್ಟಿರುವ ಬಿಜೆಪಿಗೆ ಬಿಹಾರದಲ್ಲಿ ಬಲ ಹೆಚ್ಚಿದಂತಾಗಿದೆ.
Nitish Kumar is likely to be sworn-in as the new chief minister of Bihar with BJP backing at 5pm on Sunday. The move comes hours after Kumar submitted his resignation.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm