ಬ್ರೇಕಿಂಗ್ ನ್ಯೂಸ್
31-01-24 05:43 pm HK News Desk ದೇಶ - ವಿದೇಶ
ಲಕ್ನೋ, ಜ.31: ಕಾಶೀ ವಿಶ್ವನಾಥ ಮಂದಿರದ ಆವರಣದಲ್ಲಿರುವ ಗ್ಯಾನವಾಪಿ ಮಸೀದಿ ಕುರಿತ ವ್ಯಾಜ್ಯದಲ್ಲಿ ಹಿಂದುಗಳಿಗೆ ಮೊದಲ ಜಯ ಸಿಕ್ಕಿದೆ. ಗ್ಯಾನವಾಪಿ ಮಸೀದಿ ಸಂಕೀರ್ಣದಲ್ಲಿ ಹಿಂದೂ ಮೂರ್ತಿಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕೋರಿದ್ದ ಅರ್ಜಿಯನ್ನು ಸುದೀರ್ಘ ವಿಚಾರಣೆ ನಡೆಸಿದ ವಾರಣಾಸಿ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಹಿಂದೂಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕೋರ್ಟ್ ಹೇಳಿದ್ದು ಮಸೀದಿ ಆವರಣದಲ್ಲಿ ಏಳು ದಿನದೊಳಗೆ ಹಿಂದೂಗಳಿಗೆ ಪೂಜೆ ಸಲ್ಲಿಸಲು ಸ್ಥಳೀಯ ಜಿಲ್ಲಾಡಳಿತ ಅವಕಾಶ ಮಾಡಿಕೊಡಬೇಕು ಎಂದು ಸೂಚಿಸಿದೆ.
ವಿವಾದಿತ ಮಸೀದಿಯ ನೆಲಮಹಡಿಯಲ್ಲಿರುವ ಮೂರ್ತಿಗಳಿಗೆ ಪೂಜೆ ಸಲ್ಲಿಸಲು ಕೋರ್ಟ್ ಅವಕಾಶ ನೀಡಿದೆ. ವಾರಣಾಸಿ ಜಿಲ್ಲಾ ಕೋರ್ಟ್ ಈ ಮಹತ್ವದ ಆದೇಶ ನೀಡುತ್ತಿದ್ದಂತೆ ಹಿಂದೂಗಳ ಸಂಭ್ರಮ ಮುಗಿಲು ಮುಟ್ಟಿದೆ. ಕಾಶಿ ವಿಶ್ವನಾಥ ದೇಗುಲ ಟ್ರಸ್ಟ್ ಪೂಜೆಗೆ ಉಸ್ತುವಾರಿ ನೋಡಿಕೊಳ್ಳಲು ಅನುಮತಿ ನೀಡಿದೆ. ವಿವಾದಿತ ಸ್ಥಳದಲ್ಲಿರುವ ಮೂರ್ತಿಗಳಿಗೆ ಪೂಜೆ ಸಲ್ಲಿಸಲು ಕೇವಲ ಅರ್ಚಕರು ಮಾತ್ರ ತೆರಳಬೇಕು. ಸಾರ್ವಜನಿಕರ ದರ್ಶನ ಹಾಗೂ ಪೂಜೆಗೆ ಅವಕಾಶವಿಲ್ಲ ಎಂದೂ ಕೋರ್ಟ್ ಹೇಳಿದೆ.
1993ರ ಬಳಿಕ ಗ್ಯಾನವಾಪಿ ಮಸೀದಿಯ ತಳಮಹಡಿಯಲ್ಲಿರುವ ಹಿಂದೂ ಮೂರ್ತಿಗಳಿಗೆ ಪೂಜೆಗೆ ಅವಕಾಶ ನಿರಾಕರಿಸಲಾಗಿತ್ತು. ಆನಂತರ, ಗ್ಯಾನವಾಪಿಯಲ್ಲಿ ಕೇವಲ ಮುಸ್ಲಿಮರ ಪ್ರಾರ್ಥನೆ ಮಾತ್ರ ನಡೆಯುತ್ತಿತ್ತು. ಇತ್ತೀಚೆಗೆ ಮಸೀದಿಯ ಸರ್ವೆ ನಡೆಸಿದ್ದ ಭಾರತೀಯ ಪುರಾತತ್ವ ಇಲಾಖೆ ಕೋರ್ಟ್ಗೆ ಸಲ್ಲಿಸಿದ್ದ ವರದಿಯನ್ನು ಆಧರಿಸಿ ವಕೀಲರಾದ ಹರಿಶಂಕರ್ ಜೈನ್ ಹಾಗೂ ಶಶಿಶಂಕರ್ ಜೈನ್ ಮತ್ತೊಂದು ಅರ್ಜಿ ಸಲ್ಲಿಸಿದ್ದರು. ಹಿಂದೂ ಮಂದಿರ ಅನ್ನೋದು ಪುರಾತತ್ವ ಇಲಾಖೆಯಲ್ಲಿ ಸಾಬೀತಾಗಿರುವ ಕಾರಣ ಹಿಂದೂ ಮೂರ್ತಿಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕೋರಿದ್ದರು. ಇದೀಗ ಈ ಅರ್ಜಿಯನ್ನು ಪುರಸ್ಕರಿಸಿ ಪೂಜೆಗೆ ಅವಕಾಶ ನೀಡಲಾಗಿದೆ. ಹಿಂದುಗಳ ಪೂಜೆಗೆ ನಿರ್ಬಂಧ ವಿಧಿಸಿದ್ದನ್ನು ಪ್ರಶ್ನಿಸಿ ಐವರು ಮಹಿಳೆಯರು ವಾರಣಾಸಿ ಕೋರ್ಟ್ ಮೆಟ್ಟಿಲೇರಿದ್ದರು. ಗ್ಯಾನವಾಪಿ ಮಸೀದಿ ವಿವಾದಕ್ಕೆ ಈ ಅರ್ಜಿ ಮರು ಜೀವ ನೀಡಿತ್ತು.
Hindus have won their first victory in the dispute over the Gyanvapi mosque on the premises of the Kashi Vishwanath temple. A Varanasi court on Friday delivered a landmark verdict on a plea seeking permission to worship Hindu idols at the Gyanvapi mosque complex. The court said hindus should be allowed to offer prayers in the mosque premises and the local district administration should
07-10-25 11:20 pm
Bangalore Correspondent
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
07-10-25 11:16 pm
HK News Desk
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
07-10-25 10:13 pm
Mangalore Correspondent
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm