ಬ್ರೇಕಿಂಗ್ ನ್ಯೂಸ್
04-02-24 08:48 pm HK News Desk ದೇಶ - ವಿದೇಶ
ಲಕ್ನೋ, ಫೆ 04: ರಷ್ಯಾದ ಮಾಸ್ಕೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಕೆಲಸ ಮಾಡುತ್ತ, ಪಾಕಿಸ್ತಾನದ ಐಎಸ್ಐಗೆ ಭಾರತದ ರಹಸ್ಯ ಮಾಹಿತಿಗಳನ್ನು ರವಾನಿಸುತ್ತಿದ್ದ ಗೂಢಚಾರನೊಬ್ಬನನ್ನು ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ.
ಬಂಧಿತನು ಭಾರತದ ರಕ್ಷಣಾ ಸಚಿವಾಲಯ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ಮಿಲಿಟರಿ ಸಂಸ್ಥೆಗಳ ಕಾರ್ಯತಂತ್ರದ ಚಟುವಟಿಕೆಗಳ ಬಗ್ಗೆ ಪ್ರಮುಖ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐಗೆ ರವಾನೆ ಮಾಡುತ್ತಿದ್ದ ಎಂದು ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳ ಭಾನುವಾರ ಇಲ್ಲಿ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಹಾಪುರ್ ಜಿಲ್ಲೆಯ ಶಾಹ ಮಹಿಯುದ್ದೀನ್ಪುರ ಗ್ರಾಮ ಮತ್ತು ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಜೈವೀರ್ ಸಿಂಗ್ ಎಂಬಾತನ ಪುತ್ರ ಸತೇಂದ್ರ ಸಿವಾಲ್ ಈತನನ್ನು ಬಂಧಿಸಲಾಗಿದೆ ಎಂದು ಎಟಿಎಸ್ ಪ್ರಕಟಣೆಯಲ್ಲಿ ತಿಳಿಸಿದೆ. ಸಿವಾಲ್ ವಿದೇಶಾಂಗ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದು, ಪ್ರಸ್ತುತ ರಷ್ಯಾದ ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾನೆ.
ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐನ ಹ್ಯಾಂಡ್ಲರ್ಗಳು ಕೆಲ ವ್ಯಕ್ತಿಗಳ ಮೂಲಕ ಭಾರತೀಯ ಸೇನೆಗೆ ಸಂಬಂಧಿಸಿದ ರಹಸ್ಯ ಮತ್ತು ಕಾರ್ಯತಂತ್ರದ ಪ್ರಮುಖ ಮಾಹಿತಿಗಳನ್ನು ಪಡೆಯಲು ವಿದೇಶಾಂಗ ಸಚಿವಾಲಯದ ಉದ್ಯೋಗಿಗಳಿಗೆ ಹಣದ ಆಮಿಷ ಒಡ್ಡುತ್ತಿರುವ ಬಗ್ಗೆ ವಿವಿಧ ಗೌಪ್ಯ ಮೂಲಗಳಿಂದ ಎಟಿಎಸ್ಗೆ ಮಾಹಿತಿ ಬಂದಿತ್ತು. ಇಂಥ ರಹಸ್ಯ ಮಾಹಿತಿಯ ಸೋರಿಕೆಯಿಂದ ಭಾರತದ ಆಂತರಿಕ ಮತ್ತು ಬಾಹ್ಯ ಸುರಕ್ಷತೆಗೆ ಭಾರಿ ಅಪಾಯ ಎದುರಾಗುವ ಸಾಧ್ಯತೆಯಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಸಿವಾಲ್ ಐಎಸ್ಐ ಹ್ಯಾಂಡ್ಲರ್ಗಳ ಜಾಲದೊಂದಿಗೆ ಭಾರತ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಮತ್ತು ರಕ್ಷಣಾ ಸಚಿವಾಲಯ, ವಿದೇಶಾಂಗ ಸಚಿವಾಲಯ ಮತ್ತು ಭಾರತೀಯ ಮಿಲಿಟರಿ ಸಂಸ್ಥೆಗಳ ರಹಸ್ಯ ಚಟುವಟಿಕೆಗಳ ಬಗ್ಗೆ ಪ್ರಮುಖ ಗೌಪ್ಯ ಮಾಹಿತಿಯನ್ನು ಅವರಿಗೆ ಒದಗಿಸುತ್ತಿದ್ದಾನೆ ಎಂಬುದನ್ನು ಎಟಿಎಸ್ ಎಲೆಕ್ಟ್ರಾನಿಕ್ ಮತ್ತು ಭೌತಿಕ ಕಣ್ಗಾವಲು ಮೂಲಕ ತನಿಖೆಯಲ್ಲಿ ಕಂಡುಹಿಡಿದಿದೆ.
ಸಿವಾಲ್ನನ್ನು ಎಟಿಎಸ್ ಮೀರತ್ಗೆ ಕರೆಸಿಕೊಂಡು ನಿಯಮಗಳ ಪ್ರಕಾರ ವಿಚಾರಣೆ ನಡೆಸಿದೆ. ಆದರೆ ವಿಚಾರಣೆಯ ಸಮಯದಲ್ಲಿ ಆತ ಸೂಕ್ತ ಉತ್ತರಗಳನ್ನು ನೀಡಿಲ್ಲ ಹಾಗೂ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಎಟಿಎಸ್ ತಿಳಿಸಿದೆ.
ಸಿವಾಲ್ ರಷ್ಯಾದ ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಐಬಿಎಸ್ಎ (ಭಾರತ ಮೂಲದ ಭದ್ರತಾ ಸಹಾಯಕ) ಆಗಿ 2021 ರಿಂದ ಕೆಲಸ ಮಾಡುತ್ತಿದ್ದಾನೆ. ಸದ್ಯ ಈತನ ವಿರುದ್ಧ ಲಕ್ನೋದ ಎಟಿಎಸ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 121 ಎ (ದೇಶದ ವಿರುದ್ಧ ಯುದ್ಧ ಸಾರುವುದು) ಮತ್ತು ಅಧಿಕೃತ ರಹಸ್ಯ ಕಾಯ್ದೆ 1923 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
The Uttar Pradesh Anti-Terrorism Squad (ATS) has arrested an employee of the Indian Embassy in Moscow for allegedly spying for Pakistan's intelligence agency ISI. He was arrested in Meerut. The arrested individual, identified as Satendra Siwal, was working as a Multi-Tasking Staff (MTS) in the Ministry of External Affairs.
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am