ಬ್ರೇಕಿಂಗ್ ನ್ಯೂಸ್
23-11-20 01:22 pm Headline Karnataka News Network ದೇಶ - ವಿದೇಶ
ಚೆನ್ನೈ, ನವೆಂಬರ್ 23: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಭಾರೀ ಚಂಡಮಾರುತ ತಮಿಳುನಾಡು ಕರಾವಳಿಗೆ ಅಪ್ಪಳಿಸುವ ಭೀತಿ ಎದುರಾಗಿದೆ. ನೀವಾರ್ ಎನ್ನುವ ಹೆಸರಿನ ಚಂಡಮಾರುತ ಎದುರಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡು ರಾಜ್ಯಾದ್ಯಂತ ರೆಡ್ ಎಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಆಗಿರುವುದರಿಂದ ಗಂಟೆಗೆ ನೂರು ಕಿಮೀ ವೇಗದಲ್ಲಿ ಬಿರುಗಾಳಿ ಇನ್ನು 24 ಗಂಟೆಯೊಳಗೆ ತಮಿಳುನಾಡು ಮತ್ತು ಪುದುಚೇರಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.
ಈಗಾಗಲೇ ಭಾರೀ ಬಿರುಗಾಳಿ ತಮಿಳುನಾಡು ಕರಾವಳಿ ಭಾಗದಲ್ಲಿ ಬೀಸಲು ಆರಂಭಿಸಿದೆ. ಹವಾಮಾನ ಇಲಾಖೆ ಪ್ರಕಾರ, ನ.24ರ ವೇಳೆಗೆ ಚಂಡಮಾರುತವು ತಮಿಳುನಾಡಿನ ಕಾರೈಕಲ್, ಮಹಾಬಲಿಪುರಂ ಭಾಗದಿಂದ ಹಾದು ಹೋಗಲಿದೆ ಎನ್ನಲಾಗುತ್ತಿದೆ. ಇದರ ಪರಿಣಾಮ ತಮಿಳುನಾಡಿನ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ. ಚೆನ್ನೈ, ನಾಗಪಟ್ಟಿಣಂ, ಪುದುಕೋಟೈ, ತಿರುವಾರೂರು, ತಂಜಾವೂರು ಜಿಲ್ಲೆಗಳಲ್ಲಿ ಚಂಡಮಾರುತದ ಪರಿಣಾಮ ಬೀರಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಎನ್ ಡಿಆರ್ ಎಫ್ ತಂಡ ಈಗಾಗ್ಲೇ ತಮಿಳುನಾಡು ಕರಾವಳಿಗೆ ಆಗಮಿಸಿದ್ದು, ವಿವಿಧ ತಂಡಗಳಾಗಿ ಕಾರ್ಯಾಚರಣೆ ಆರಂಭಿಸಿದೆ. ಸಮುದ್ರ ತೀರದ ನಿವಾಸಿಗಳನ್ನು ಸ್ಥಳಾಂತರಿಸಲು ಆರಂಭಿಸಿದೆ. ಚಂಡಮಾರುತದ ಎಫೆಕ್ಟ್ ನ.23ರಿಂದ 25ರ ವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನೀವಾರ್ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲಿಯೂ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಭಾಗದ ಜಿಲ್ಲೆಗಳು ಮತ್ತು ಕರಾವಳಿ ಭಾಗದಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
After a relatively calm five months, the North Indian Ocean has jumped back into action with multiple systems forming back to back across the basin. The depression formed over the southwest Arabian Sea on Saturday intensified into the Very Severe Cyclonic Storm ‘Gati’ on Sunday.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm