ಬ್ರೇಕಿಂಗ್ ನ್ಯೂಸ್
06-02-24 02:54 pm HK News Desk ದೇಶ - ವಿದೇಶ
ಮಧ್ಯಪ್ರದೇಶ, ಫೆ 06: ಜಿಲ್ಲೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ (ಹರ್ದಾ ಪಟಾಕಿ ಕಾರ್ಖಾನೆ) ಹಠಾತ್ ಸ್ಫೋಟದಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಸಮೀಪದ ಹಲವು ಮನೆಗಳು ಬೆಂಕಿಗೆ ಆಹುತಿಯಾಗಿರುವ ಬಗ್ಗೆಯೂ ವರದಿಯಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಇದು ನಗರದ ಮಗರ್ಧಾ ರಸ್ತೆಯಲ್ಲಿರುವ ಅಕ್ರಮ ಪಟಾಕಿ ಕಾರ್ಖಾನೆ ಆಗಿದೆ. ಕಾರ್ಖಾನೆಯಲ್ಲಿ ಪಟಾಕಿ ತಯಾರಿಸಲು ದೊಡ್ಡ ಪ್ರಮಾಣದ ಗನ್ ಪೌಡರ್ ಸಂಗ್ರಹಿಸಲಾಗಿತ್ತು. ಆದರೆ ಸ್ಫೋಟ ಸಂಭವಿಸಿದ್ದು, ಏಳು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಬೆಂಕಿ ಎಷ್ಟರ ಮಟ್ಟಿಗೆ ಹರಡಿತ್ತೆಂದ್ರೆ ಅದರ ಹೊಗೆ ಹಲವಾರು ಕಿಲೋಮೀಟರ್ ದೂರದಿಂದ ಗೋಚರಿಸುತ್ತಿತ್ತು. ಕಾರ್ಖಾನೆ ಸ್ಫೋಟದಿಂದಾಗಿ ಉರಿಯುತ್ತಿರುವ ಜ್ವಾಲೆ ಎಲ್ಲರನ್ನೂ ಆತಂಕಕ್ಕೆ ದೂಡಿದೆ. ಬೆಂಕಿಗೆ ಕಾರಣ ಸದ್ಯಕ್ಕೆ ತಿಳಿದು ಬಂದಿಲ್ಲ. ಸ್ಫೋಟದ ಬಗ್ಗೆ ಮಾಹಿತಿ ದೊರೆತ ತಕ್ಷಣ ಅಗ್ನಿಶಾಮಕ ದಳದ ಹಲವು ವಾಹನಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿವೆ.
ಹರ್ದದ ಮಗರ್ಧಾ ರಸ್ತೆಯಲ್ಲಿರುವ ಬೈರಾಗರ್ ಗ್ರಾಮದಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ನಂತರ ಆ ಪ್ರದೇಶದಲ್ಲಿ ಆತಂಕ ಮನೆ ಮಾಡಿದೆ. ಬೆಂಕಿ ಎಷ್ಟು ತೀವ್ರವಾಗಿತ್ತು ಎಂದರೆ ರಸ್ತೆಯಲ್ಲಿ ಸಾಗುತ್ತಿದ್ದವರೂ ಬೆಂಕಿ ಕೆನ್ನಾಲಗೆಯಿಂದ ತತ್ತರಿಸಿದ್ದಾರೆ. 60ಕ್ಕೂ ಹೆಚ್ಚು ಜನರು ಗಾಯಗೊಂಡಿರುವುದರ ಬಗ್ಗೆ ವರದಿಗಳಿವೆ. ಅಲ್ಲದೆ, ಸಮೀಪದ 50ಕ್ಕೂ ಹೆಚ್ಚು ನಿವಾಸಿಗಳ ಮನೆಗಳಿಗೂ ಬೆಂಕಿ ವ್ಯಾಪಿಸಿದ್ದು, ಮನೆಯ ವಸ್ತುಗಳು ಸುಟ್ಟು ಕರಕಲಾಗಿವೆ. ಅಷ್ಟೇ ಅಲ್ಲ ಏಳು ಜನ ಮೃತಪಟ್ಟಿದ್ದು, ಮೃತದೇಹಗಳು ರಸ್ತೆಯ ಮೇಲೆ ಛಿದ್ರವಾಗಿ ಬಿದ್ದಿದ್ದವು ಎಂದು ಪ್ರತ್ಯೇಕ್ಷ ದರ್ಶಿಗಳ ಮಾತಾಗಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಬೆಂಕಿ ಹಬ್ಬಿರುವ ಪ್ರದೇಶದಲ್ಲಿ ಕೆಲವರು ಶವಗಳನ್ನು ಸಹ ನೋಡಿದ್ದಾರಂತೆ. ರಕ್ಷಣಾ ಕಾರ್ಯ ಇನ್ನೂ ನಡೆಯುತ್ತಿದೆ. ಎಲ್ಲ ಗಾಯಾಳುಗಳನ್ನು ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುತ್ತಮುತ್ತಲಿನ ಜನರಿಗೆ ಮನೆ ಖಾಲಿ ಮಾಡುವಂತೆ ಸೂಚನೆ ನೀಡಲಾಗಿದೆ.
7 ಜಿಲ್ಲೆಗಳಿಂದ ದೌಡಾಯಿಸಿದ ಅಗ್ನಿಶಾಮಕ ವಾಹನಗಳು:
ಈ ಕಾರ್ಖಾನೆಯಲ್ಲಿ ಗನ್ ಪೌಡರ್ ಮತ್ತು ಪಟಾಕಿಗಳಲ್ಲಿ ಬಳಸುವ ಸ್ಫೋಟಕ ವಸ್ತುಗಳನ್ನು ಇಡಲಾಗಿತ್ತು. ಬೆಂಕಿಯ ಸುದ್ದಿ ತಿಳಿಯುತ್ತಿದ್ದಂತೆ ಸುಮಾರು 7 ವಿವಿಧ ಜಿಲ್ಲೆಗಳಿಂದ ಅಗ್ನಿಶಾಮಕ ದಳದ ತಂಡಗಳನ್ನು ಸ್ಥಳಕ್ಕೆ ಕರೆಸಲಾಗಿದ್ದು, ಸುಮಾರು 40 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ತಲುಪಿವೆ ಎಂದು ತಿಳಿದು ಬಂದಿದೆ.
Six people have been killed and 60 other injured after a fire broke out inside a firecracker factory in Madhya Pradesh's Harda. The flames triggered several explosions, sparking panic in the nearby areas.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
09-05-25 03:24 pm
Mangalore Correspondent
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm