ಬ್ರೇಕಿಂಗ್ ನ್ಯೂಸ್
20-02-24 06:34 pm HK News Desk ದೇಶ - ವಿದೇಶ
ಮುಂಬೈ, ಫೆ.20: 71ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆ ಈ ಬಾರಿ ಮುಂಬೈನಲ್ಲಿ ನಡೆಯಲಿದ್ದು ಉಡುಪಿ ಮೂಲದ ಕನ್ನಡತಿ ಸಿನಿ ಶೆಟ್ಟಿ (21) ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.
30 ವರ್ಷಗಳ ಬಳಿಕ ವಿಶ್ವ ಸುಂದರಿ ಸ್ಪರ್ಧೆಯನ್ನು ಭಾರತದಲ್ಲಿ ಆಯೋಜಿಸಲಾಗಿದೆ. 28 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಸ್ಪರ್ಧೆ ನಡೆದಿತ್ತು. ಈ ವರ್ಷ ಮಿಸ್ ವರ್ಲ್ಡ್ ಗ್ರ್ಯಾಂಡ್ ಫಿನಾಲೆ ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಮಾರ್ಚ್ 9 ರಂದು ಮುಕ್ತಾಯಗೊಳ್ಳಲಿದೆ.
71ನೇ ವಿಶ್ವ ಸುಂದರಿ ಸ್ಪರ್ಧೆ ಈಗಾಗಲೇ ಆರಂಭಗೊಂಡಿದ್ದು ಫೆಬ್ರವರಿ 18 ರಿಂದ ಮಾರ್ಚ್ 9ರ ವರೆಗೆ ದೆಹಲಿ, ಮುಂಬೈಯಲ್ಲಿ ಈವೆಂಟ್ ನಡೆಯಲಿದೆ. ಫ್ಯಾಷನ್ ಡಿಸೈನರ್ ಅರ್ಚನಾ ಕೊಚ್ಚಾರ್ ಅವರು 71ನೇ ವಿಶ್ವ ಸುಂದರಿ ಸ್ಪರ್ಧೆಯ ಅಧಿಕೃತ ಫ್ಯಾಷನ್ ಡಿಸೈನರ್ ಆಗಿದ್ದಾರೆ.
ಕರ್ನಾಟಕದ ಉಡುಪಿ ಮೂಲದ ಸಿನಿ ಶೆಟ್ಟಿ ಈ ಹಿಂದೆ ಮುಂಬೈನಲ್ಲಿ ನಡೆದ 'ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್-2022' ಮತ್ತು 'ಮಿಸ್ ಇಂಡಿಯಾ' ಕಿರೀಟ ಮುಡಿಗೇರಿಸಿಕೊಂಡಿದ್ದರು. ಸಿನಿ ಶೆಟ್ಟಿ ಅಕೌಂಟಿಂಗ್ ಮತ್ತು ಫೈನಾನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. ಭರತನಾಟ್ಯ, ನೃತ್ಯದಲ್ಲಿಯೂ ತರಬೇತಿ ಪಡೆದಿದ್ದಾರೆ. ಇದುವರೆಗೆ ಭಾರತದ ಆರು ಮಂದಿ ವಿಶ್ವ ಸುಂದರಿ ಕಿರೀಟವನ್ನು ಗೆದ್ದಿದ್ದಾರೆ. ರೀಟಾ ಫರಿಯಾ 1966 ರಲ್ಲಿ ಮೊದಲ ಬಾರಿಗೆ ಪ್ರತಿಷ್ಠಿತ ವಿಶ್ವ ಸುಂದರಿ ಪ್ರಶಸ್ತಿಯನ್ನು ಭಾರತಕ್ಕೆ ತಂದಿದ್ದರು. 1994ರಲ್ಲಿ ಐಶ್ವರ್ಯಾ ರೈ, 1997 ರಲ್ಲಿ ಡಯಾನಾ ಹೇಡನ್, 1999 ರಲ್ಲಿ ಯುಕ್ತಾಮುಖಿ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿದ್ದರು. 2006ರಲ್ಲಿ ಪ್ರಿಯಾಂಕಾ ಚೋಪ್ರಾ ಮತ್ತು 2017ರಲ್ಲಿ ಮಾನುಷಿ ಚಿಲ್ಲರ್ ಈ ಸಾಧನೆ ಮಾಡಿದ್ದರು.
Sini Shetty, who was the winner of the Femina Miss India 2022 title, will be representing India at the upcoming Miss World pageant. Speaking about it, she expressed happiness about the opportunity.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm