ಬ್ರೇಕಿಂಗ್ ನ್ಯೂಸ್
25-11-20 01:52 pm Headline Karnataka News Network ದೇಶ - ವಿದೇಶ
ಕೋಲ್ಕತಾ, ನ. 25: ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಗೂಂಡಾರಾಜ್ ಹತ್ತಿಕ್ಕುವ ಬದಲು ಬೆಂಬಲ ನೀಡುತ್ತಿರುವ ಪೊಲೀಸ್ ಇಲಾಖೆಗೆ ತಕ್ಕಶಾಸ್ತಿ ಮಾಡಲು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕಿದೆ ಎಂದರು. ದುರ್ಗಾಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ರಾಜು ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ಈ ದಿನಗಳಲ್ಲಿ ಏನೇನು ನಡೆಯುತ್ತಿದೆ ಎಂಬುದು ನೋಡಿ, ರಾಜ್ಯದಲ್ಲೆಡೆ ಗೂಂಡಾರಾಜ್ ಇದ್ದರೂ ಪೊಲೀಸರು ಜನ ಸಾಮಾನ್ಯರಿಗೆ ಯಾವುದೇ ನೆರವು ನೀಡುತ್ತಿಲ್ಲ.
ಗೂಂಡಾ ರಾಜ್ ಬೆಂಬಲಿಸುವ ಅಸಮರ್ಥ ಪೊಲೀಸರಿಗೆ ಏನು ಮಾಡಬೇಕು, ನಾವಾದರೆ ಅವರಿಗೆ ಬೂಟು ನೆಕ್ಕುವಂತೆ ಮಾಡುತ್ತೇವೆ. ತಲೆ ತಗ್ಗಿಸಿ ಕರ್ತವ್ಯ ನಿಭಾಯಿಸುವ ಪಾಠ ಕಲಿಸುತ್ತೇವೆ ಎಂದಿದ್ದಾರೆ.

ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲದ್ದಂತಾಗಿದೆ. ಪೊಲೀಸ್ ಇಲಾಖೆ ಇದ್ದು ಸತ್ತಹಾಗೆ ವರ್ತಿಸುತ್ತಿದೆ. ಅರಾಜಕತೆ ತಾಂಡವವಾಡುತ್ತಿದೆ. ಕಾನೂನು ಸುವವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗಿಯಾ ಕೂಡಾ ಛಾಟಿ ಬೀಸಿದರು.
ಬೆಂಗಾಳದ ಉಸ್ತುವಾರಿಯಾಗಿರುವ ವಿಜಯ್ ವರ್ಗಿಯಾ ಅವರು ಮಾತನಾಡಿ, ದೇಶಕ್ಕೆ ಒಂದು ಕಾನೂನು ಅನ್ವಯವಾದರೆ, ಇಲ್ಲಿ ಟಿಎಂಸಿ ಕಾನೂನು ಮಾತ್ರ ಜಾರಿಯಲ್ಲಿದೆ. ಮಹಿಳಾ ಸಿಎಂ ಹೊಂದಿದ್ದರೂ ಮಹಿಳೆಯರಿಗೆ ಯಾವುದೇ ಭದ್ರತೆ ಒದಗಿಸುತ್ತಿಲ್ಲ ಎಂಬುದು ದುರಂತ ಎಂದರು. ಇತರೆ ರಾಜ್ಯಗಳಿಗೆ ಹೋಲಿಸಿದರೆ ಮಹಿಳೆಯರ ವಿರುದ್ಧ ದೌರ್ಜನ್ಯದಲ್ಲಿ ಬೆಂಗಾಳ ಮುಂದಿದೆ, ಕಾನೂನು ಮತ್ತು ಸುವ್ಯವಸ್ಥೆ ಬದಲಾಗಬೇಕಾದರೆ, ಸರ್ಕಾರ ಮೊದಲಿಗೆ ಬದಲಾಗಬೇಕು ಎಂದು ಹೇಳಿದರು.
West Bengal BJP leader Raju Banerjee in his attack on the Bengal government said the police force in the state does not extend any help to check the ‘Gunda Raj’ and if BJP comes to power, the party will make the police lick boots.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm