ಬ್ರೇಕಿಂಗ್ ನ್ಯೂಸ್
27-02-24 04:32 pm HK News Desk ದೇಶ - ವಿದೇಶ
ಚಂಡೀಗಢ, ಫೆ 27: ಮಗನನ್ನು ಕಳೆದುಕೊಂಡು ದುಃಖದಲ್ಲಿದ್ದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಮನೆಯಲ್ಲಿ ಮತ್ತೆ ಸಂತಸ ಮನೆ ಮಾಡಿದೆ. ಅದಕ್ಕೆ ಕಾರಣ ಸಿಧು ಮೂಸೆವಾಲಾ ಅವರ ತಾಯಿ ಗರ್ಭಿಣಿ ಎಂಬ ವಿಚಾರ.
ಹೌದು. ಸಿಧು ಮೂಸೆವಾಲಾ ಅವರ ಪೋಷಕರು ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಮೂಸೆವಾಲಾ ಅವರ 58 ವರ್ಷದ ತಾಯಿ ಚರಣ್ ಕೌರ್ ಅವರು ಬರುವ ಮಾರ್ಚ್ ತಿಂಗಳಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ. ಈ ಮೂಲಕ ಬಲ್ಕೌರ್ ಸಿಂಗ್ 60ನೇ ವಯಸ್ಸಿನಲ್ಲಿ ಮತ್ತೆ ತಂದೆಯಾಗಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ತಂದೆ-ತಾಯಿಗೆ ಸಿಧು ಮೂಸೆವಾಲಾ ಒಬ್ಬನೇ ಮಗನಾಗಿದ್ದರು.
ಹೌದು. ಸಿಧು ಮೂಸೆವಾಲಾ ಅವರ ಪೋಷಕರು ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಮೂಸೆವಾಲಾ ಅವರ 58 ವರ್ಷದ ತಾಯಿ ಚರಣ್ ಕೌರ್ ಅವರು ಬರುವ ಮಾರ್ಚ್ ತಿಂಗಳಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ. ಈ ಮೂಲಕ ಬಲ್ಕೌರ್ ಸಿಂಗ್ 60ನೇ ವಯಸ್ಸಿನಲ್ಲಿ ಮತ್ತೆ ತಂದೆಯಾಗಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ತಂದೆ-ತಾಯಿಗೆ ಸಿಧು ಮೂಸೆವಾಲಾ ಒಬ್ಬನೇ ಮಗನಾಗಿದ್ದರು.
ಸಿಧು ಮೂಸೆವಾಲಾ ಹತ್ಯೆ
ಸಿಧು ಮೂಸೆ ವಾಲಾ ಅವರು ಪಂಜಾಬ್‌ನ ಮಾನ್ಸಾ ಜಿಲ್ಲೆಯ ಜವಾಹರ್ಕೆ ಗ್ರಾಮದಲ್ಲಿ 2022ರ ಮೇ 29ರಂದು ತಮ್ಮ ಕಾರಿನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳ ಗುಂಪು ಮನಬಂದಂತೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆ ನೀಡುವ ಮುನ್ನವೇ ಮೃತಪಟ್ಟಿದ್ದರು. ಅದೇ ವರ್ಷದ ನಡೆದ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಮಾನ್ಸಾದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿಧು, ಸೋಲು ಅನುಭವಿಸಿದ್ದರು.
ತಮ್ಮದೇ ಸಂಗೀತ ಸಂಯೋಜನೆ ಹಾಗೂ ನಿರ್ಮಾಣದ ಹಾಡುಗಳ ಮೂಲಕ ಸಿಧು ಖ್ಯಾತಿ ಗಳಿಸಿದ್ದರು. ಅವರ ಸಾವಿನ ಬಳಿಕವೂ ಕೆಲವು ಹಾಡುಗಳು ಬಿಡುಗಡೆಯಾಗಿದ್ದು, ಲಕ್ಷಾಂತರ ವ್ಯೂವ್ಸ್ ಪಡೆದಿವೆ. 'ಜಸ್ಟೀಸ್ ಫಾರ್ ಸಿಧು ಮೂಸೆವಾಲಾ' ಎಂಬ ಬರಹದೊಂದಿಗೆ ಮ್ಯೂಸಿಕ್ ವಿಡಿಯೋ ವಿಡುಗಡೆಯಾಗಿತ್ತು. ಅವರ ಪೋಷಕರು ಮಗನ ಸಾವಿಗೆ ನ್ಯಾಯ ಸಿಗಬೇಕು ಎಂಬ ಹೋರಾಟ ನಡೆಸಿದ್ದರು.
ಕೆನಡಾದಲ್ಲಿ ನೆಲೆಸಿರುವ ಗ್ಯಾಂಗ್‌ಸ್ಟರ್ ಸತಿಂದರ್ ಸಿಂಗ್ ಅಲಿಯಾಸ್ ಗೋಲ್ಡಿ ಬ್ರಾರ್, ಸಿಧು ಹತ್ಯೆಯ ಹೊಣೆ ಹೊತ್ತುಕೊಂಡಿದ್ದ.
ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಓದಿದ್ದ ಸಿಧು, 2017ರಲ್ಲಿ 'ಜಿ ವ್ಯಾಗನ್' ಎಂಬ ಮೊದಲ ಹಾಡನ್ನು ಬಿಡುಗಡೆ ಮಾಡಿದ್ದರು. ಅವರ 'ಸೋ ಹೈ' ಎಂಬ ರಾಪ್ ಹಾಡು ಬ್ರಿಟ್ ಏಷ್ಯಾ ಟಿವಿ ಮ್ಯೂಸಿಕ್ ಅವಾರ್ಡ್ಸ್‌ನಲ್ಲಿ 2017ರ ಅತ್ಯುತ್ತಮ ಸಾಹಿತ್ಯ ಪ್ರಶಸ್ತಿ ಪಡೆದಿತ್ತು. ಇದರ ನಂತರ ಅವರು ಅನೇಕ ಜನಪ್ರಿಯ ಮ್ಯೂಸಿಕ್ ಆಲ್ಬಮ್‌ಗಳನ್ನು ಬಿಡುಗಡೆ ಮಾಡಿದ್ದರು. ಪಂಜಾಬಿ ಸಿನಿಮಾಗಳಲ್ಲಿ ಕೂಡ ನಟಿಸಿದ್ದರು.
ಹತ್ಯೆ ಸಂದರ್ಭದಲ್ಲಿ ಸಿಧು ವಿರುದ್ಧ ಗನ್ ಸಂಸ್ಕೃತಿ ಹಾಗೂ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಅಪರಾಧ ಪ್ರಕರಣಗಳು ದಾಖಲಾಗಿದ್ದವು.
The parents of slain Punjabi singer Shubhdeep Singh Sidhu, popularly known as Sidhu Moosewala, are set to welcome a new member to their family soon. Moosewala’s mother Charan Kaur is pregnant and will be delivering a baby soon, family sources confirmed.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm