ಬ್ರೇಕಿಂಗ್ ನ್ಯೂಸ್
11-03-24 07:15 pm HK News Desk ದೇಶ - ವಿದೇಶ
ನವದೆಹಲಿ, ಮಾ.11: 2019ರಲ್ಲಿ ಭಾರೀ ವಿವಾದಕ್ಕೆ ತುತ್ತಾಗಿದ್ದ ಪೌರತ್ವ ತಿದ್ದುಪಡಿ (ಸಿಎಎ) ಕಾಯ್ದೆಯನ್ನು ದೇಶಾದ್ಯಂತ ಜಾರಿಗೊಳಿಸಲು ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿದೆ.
ಕೇಂದ್ರ ಗೃಹ ಇಲಾಖೆಯಿಂದ ಈ ಬಗ್ಗೆ ಮಾರ್ಚ್ 11ರಿಂದ ಸಿಎಎ ಕಾಯ್ದೆ ಜಾರಿಗೆ ಬರಲಿದೆ ಎಂದು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಇದರಂತೆ, 2014ರ ಡಿಸೆಂಬರ್ 31ಕ್ಕೆ ಮುನ್ನ ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ದೇಶಕ್ಕೆ ವಲಸೆ ಬಂದಿರುವ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ಸಿಗಲಿದೆ. ಅಂದರೆ, ಆ ದೇಶಗಳ ಮುಸ್ಲಿಮೇತರರಿಗೆ ಪೌರತ್ವ ಕಾಯ್ದೆಯ ಲಾಭ ಸಿಗಲಿದೆ. ಭಾರತಕ್ಕೆ ವಲಸೆ ಬಂದು ನೆಲೆಸಿರುವ ಹಿಂದು, ಸಿಖ್, ಜೈನ್, ಬುದ್ಧರು, ಪಾರ್ಸಿ ಮತ್ತು ಕ್ರೈಸ್ತರು ಭಾರತದ ಪೌರತ್ವಕ್ಕಾಗಿ ಅರ್ಜಿ ಹಾಕಿದ್ದರೆ, ಅಂಥವರಿಗೆ ದೇಶದ ಪೌರತ್ವ ಸಿಗಲಿದೆ.
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವುದಾಗಿ 2019ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೀಡಿದ್ದ ಪ್ರಣಾಳಿಕೆಯಲ್ಲಿಯೇ ಹೇಳಲಾಗಿತ್ತು. ಮೋದಿ ಎರಡನೇ ಬಾರಿಗೆ ಅಧಿಕಾರಕ್ಕೆ ಏರಿದ ಬೆನ್ನಲ್ಲೇ ಸಿಎಎ ಕಾಯ್ದೆಯನ್ನು ತಿದ್ದುಪಡಿಗೊಳಿಸಿ ಸಂಸತ್ತಿನ ಎರಡೂ ಸದನಗಳಲ್ಲಿ ಮಂಡನೆ ಮಾಡಿದ್ದರು. ಆದರೆ, ಈ ಮಸೂದೆ ಜಾರಿಗೊಳಿಸುವುದಕ್ಕೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ದೇಶಾದ್ಯಂತ ಮುಸ್ಲಿಂ ಸಂಘಟನೆಗಳು ಇದೇ ವಿಚಾರವನ್ನು ಮುಂದಿಟ್ಟು ಬೀದಿಗಿಳಿದಿದ್ದಲ್ಲದೆ ಹಿಂಸಾಚಾರವನ್ನೂ ನಡೆಸಿದ್ದವು. ಹಿಂಸೆಯ ಕಾರಣಕ್ಕೆ ದೇಶದಲ್ಲಿ 100ಕ್ಕೂ ಹೆಚ್ಚು ಮಂದಿ ಪ್ರಾಣ ಕಳಕೊಂಡಿದ್ದರು. ಹಾಗಾಗಿ, ಕಾಯ್ದೆ ಜಾರಿಯನ್ನು ತಡೆ ಹಿಡಿಯಲಾಗಿತ್ತು.
ಕಾಯ್ದೆ ತಿದ್ದುಪಡಿ ಬಗ್ಗೆ ಸಂಸತ್ತಿನಲ್ಲಿ ಹೇಳಿದ್ದರೂ, ಅದು ಯಾವ ಸ್ವರೂಪದಲ್ಲಿರುತ್ತೆ ಎನ್ನುವ ಬಗ್ಗೆ ಪೂರ್ತಿ ಮಾಹಿತಿ ಇರಲಿಲ್ಲ. ಕಾಯ್ದೆ ಸ್ವರೂಪದ ಬಗ್ಗೆ ಮಾಹಿತಿ ನೀಡುವುದಕ್ಕೆ 2020ರಲ್ಲಿ ರಾಷ್ಟ್ರಪತಿ ಬಳಿ ಗೃಹ ಇಲಾಖೆ ಸಮಯಾವಕಾಶ ಕೇಳಿತ್ತು. ಒಂಬತ್ತು ಬಾರಿ ಮುಂದೂಡಿಕೆ ಆಗುತ್ತಾ ಬಂದ ಕಾಯ್ದೆಯನ್ನು ಇದೀಗ ಅಧಿಸೂಚನೆ ಮೂಲಕ ನೇರವಾಗಿ ಜಾರಿಗೆ ತರಲಾಗಿದೆ. 2024ರ ಲೋಕಸಭೆ ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಇರುವಾಗ ಮಸೂದೆಯನ್ನು ಅಧಿಸೂಚನೆ ಹೊರಡಿಸಲಾಗಿದೆ. ಲೋಕಸಭೆ ಚುನಾವಣೆಗೂ ಮೊದಲು ಸಿಎಎ ಕಾಯ್ದೆ ಜಾರಿಗೊಳಿಸುತ್ತೇವೆಂದು ಇತ್ತೀಚೆಗೆ ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಗೃಹ ಸಚಿವ ಅಮಿತ್ ಷಾ ಹೇಳಿದ್ದರು. ಸಿಎಎ ಕಾಯ್ದೆ ಜಾರಿ ವಿಚಾರ ಈಶಾನ್ಯ ರಾಜ್ಯಗಳಲ್ಲಿ ಚುನಾವಣೆಯ ಅಸ್ತ್ರವೂ ಆಗಿದೆ.
The rules for implementing of the contentious Citizenship (Amendment) Act, 2019 (CAA) will be notified today, the Ministry of Home Affairs has announced. These rules, called the Citizenship (Amendment) Rules, 2024 will enable the persons eligible under CAA-2019 to apply for grant of Indian citizenship. The applications will be submitted in a completely online mode for which a web portal has been provided, the MHA posts on X. The CAA will facilitate the granting of citizenship to undocumented non-Muslim migrants from Pakistan, Bangladesh and Afghanistan.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am