ಬ್ರೇಕಿಂಗ್ ನ್ಯೂಸ್
16-03-24 04:24 pm HK News Desk ದೇಶ - ವಿದೇಶ
ನವದೆಹಲಿ, ಮಾ.16: ದೇಶದ ಮುಂದಿನ ದಿಕ್ಕನ್ನು ನಿರ್ಧರಿಸುವ ಲೋಕಸಭೆ ಸಮರಕ್ಕೆ ಚುನಾವಣಾ ಆಯೋಗ ಮುಹೂರ್ತ ಘೋಷಿಸಿದೆ. ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಟಿ ಕರೆದು ಚುನಾವಣೆ ದಿನಾಂಕಗಳನ್ನು ಘೋಷಣೆ ಮಾಡಿದ್ದಾರೆ. ಎಪ್ರಿಲ್ 19ರಿಂದ ತೊಡಗಿ ಒಟ್ಟು ಏಳು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಜೂನ್ 4ರಂದು ಒಂದೇ ದಿನ ಮತ ಎಣಿಕೆ ನಡೆಯಲಿದೆ.
ಮೊದಲ ಹಂತ ಎಪ್ರಿಲ್ 19ರಂದು(102 ಕ್ಷೇತ್ರ), 2ನೇ ಹಂತ ಎಪ್ರಿಲ್ 26(89), 3ನೇ ಹಂತ ಮೇ 7(94), ನಾಲ್ಕನೇ ಹಂತ ಮೇ 13(96), ಐದನೇ ಹಂತ ಮೇ 20(49), ಆರನೇ ಹಂತ 25 ಮೇ(57), ಜೂನ್ 1ರಂದು ಏಳನೇ ಹಂತದಲ್ಲಿ 57 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಎಪ್ರಿಲ್ 26 ಮತ್ತು ಮೇ 7ರಂದು ಮತದಾನಕ್ಕೆ ದಿನಾಂಕ ಘೋಷಣೆ ಮಾಡಲಾಗಿದೆ. ದಕ್ಷಿಣ ಕರ್ನಾಟಕದಲ್ಲಿ ಎಪ್ರಿಲ್ 26ರಂದು ಚುನಾವಣೆ ನಡೆಯಲಿದ್ದರೆ, ಉತ್ತರ ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 7ರಂದು ಗುಜರಾತ್, ಮಹಾರಾಷ್ಟ್ರ, ಕೇರಳದ 94 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 4ನೇ ಹಂತದಲ್ಲಿ ಮೇ 13ರಂದು ಮತದಾನ ಆಂಧ್ರಪ್ರದೇಶ, ತೆಲಂಗಾಣ, ಒರಿಸ್ಸಾದಲ್ಲಿ ಚುನಾವಣೆ ಆಗಲಿದೆ.
ಎಪ್ರಿಲ್ 26ರಂದು ದಕ್ಷಿಣ ಕರ್ನಾಟಕ ಮತದಾನ
ಎಪ್ರಿಲ್ 26ರಂದು ದಕ್ಷಿಣ ಕರ್ನಾಟಕದ 14 ಕ್ಷೇತ್ರಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಂಡ್ಯ, ಚಾಮರಾಜನಗರ, ಬೆಂಗಳೂರಿನ ನಾಲ್ಕು ಕ್ಷೇತ್ರ, ಉಡುಪಿ, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ತುಮಕೂರು ಕ್ಷೇತ್ರದಲ್ಲಿ ಚುನಾವಣೆ ನಡೆದರೆ, ಮೇ 7ರಂದು ಶಿವಮೊಗ್ಗ, ಬಿಜಾಪುರ, ಬಾಗಲಕೋಟ, ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಚಿಕ್ಕೋಡಿ, ಗುಲ್ಬರ್ಗ, ಬೀದರ್, ಯಾದಗಿರಿ, ಚಿತ್ರದುರ್ಗ ರಾಯಚೂರು, ಬಳ್ಳಾರಿ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿರುವ ಭಾರತದಲ್ಲಿ 543 ಲೋಕಸಭಾ ಕ್ಷೇತ್ರಗಳಿಗೆ ಒಂದೇ ಬಾರಿಗೆ ಚುನಾವಣೆ ನಡೆಯುತ್ತಿರುವುದು ವಿಶೇಷ. ದೇಶದಲ್ಲಿ ಒಟ್ಟು 96.7 ಕೋಟಿ ಮತದಾರರಿದ್ದು, ಈ ಪೈಕಿ 1.85 ಕೋಟಿ ಮಂದಿ ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. ದೇಶಾದ್ಯಂತ ಚುನಾವಣೆಗಾಗಿ 10.5 ಲಕ್ಷ ಮತಗಟ್ಟೆಗಳನ್ನು ರಚಿಸಲಾಗಿದೆ. ಮತದಾನಕ್ಕೆ ಒಟ್ಟು 55 ಲಕ್ಷ ಮತಯಂತ್ರಗಳನ್ನು ರೆಡಿ ಮಾಡಲಾಗಿದೆ. 49.7 ಕೋಟಿ ಪುರುಷರು, 47.1 ಕೋಟಿ ಮಹಿಳಾ ಮತದಾರರು ಇದ್ದಾರೆ. ಈ ಬಾರಿ 85 ವರ್ಷ ಮೇಲ್ಪಟ್ಟ 85 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ. ಇದಲ್ಲದೆ, 2.18 ಲಕ್ಷ ಶತಾಯುಷಿ ಮತದಾರರು ದೇಶದಲ್ಲಿದ್ದಾರೆ. ಅವರನ್ನು ಮತಗಟ್ಟೆಗೆ ಕರೆತರಲು ವೀಲ್ ಚೇರ್ ವ್ಯವಸ್ಥೆ ಮಾಡಲಾಗಿದೆ.
19.74 ಕೋಟಿ ಯುವ ಮತದಾರರು ಈ ಬಾರಿ ಮತ ಚಲಾವಣೆ ಮಾಡಲಿದ್ದಾರೆ. 48 ಸಾವಿರ ತೃತೀಯ ಲಿಂಗಿ ಮತದಾರರಿದ್ದಾರೆ. 12 ರಾಜ್ಯಗಳಲ್ಲಿ ಮಹಿಳಾ ಮತದಾರರೇ ಹೆಚ್ಚಿದ್ದಾರೆ. ಒಟ್ಟು ಒಂದೂವರೆ ಕೋಟಿ ಭದ್ರತಾ ಸಿಬಂದಿ ಮತ್ತು ಅಧಿಕಾರಿಗಳು ಚುನಾವಣಾ ಕರ್ತವ್ಯ ನಿರ್ವಹಿಸಲಿದ್ದಾರೆ. ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆಯ ಬಗ್ಗೆ ಅಫಿಡವಿಟ್ ನಲ್ಲಿ ಮತ್ತು ಪತ್ರಿಕೆಯಲ್ಲಿ ಪ್ರಕಟಣೆ ನೀಡಬೇಕಾಗುತ್ತದೆ ಎಂದು ಚುನಾವಣಾ ಆಯುಕ್ತ ರಾಜೀವ ಕುಮಾರ್ ತಿಳಿಸಿದ್ದಾರೆ.
ಮತದಾರರಿಗೆ ದುಡ್ಡು ಹಂಚುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ನಗದು ಹಣವನ್ನು ಒಯ್ಯುವುದು ಪತ್ತೆಯಾದಲ್ಲಿ ಕ್ರಮ ಜರುಗಿಸುತ್ತೇವೆ. ಸೋಶಿಯಲ್ ಮೀಡಿಯಾ ಇನ್ನಿತರ ಯಾವುದೇ ಮಾದರಿಯಲ್ಲಿ ನಕಲಿ ಸುದ್ದಿ ಹರಡುವುದು, ಆಮಿಷ ಒಡ್ಡುವ ರೀತಿಯ ಪ್ರಕಟಣೆಯಾದಲ್ಲಿ ಕಠಿಣ ಕ್ರಮ ಜರುಗಿಸುತ್ತೇವೆ. ಯಾವುದೇ ವಿಚಾರದ ಬಗ್ಗೆ ಟೀಕೆ ಮಾಡುವುದಕ್ಕೆ ತೊಂದರೆ ಇಲ್ಲ. ಆದರೆ, ಅದರಿಂದ ಸಮಾಜದ ಶಾಂತಿ ಕದಡುವುದಕ್ಕೆ ಕಾರಣ ಆಗಬಾರದು. ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲಾಗುವುದು. ಮತದಾರರನ್ನು ಪ್ರಚೋದಿಸುವ, ದ್ವೇಷ ಹಬ್ಬಿಸುವ ಭಾಷಣ ಮಾಡುವ ಹಾಗಿಲ್ಲ. ಮಕ್ಕಳನ್ನು ಚುನಾವಣಾ ಪ್ರಚಾರಕ್ಕೆ ಬಳಸುವಂತಿಲ್ಲ. ಚುನಾವಣೆ ಹಿನ್ನೆಲೆಯಲ್ಲಿ ಒಟ್ಟು 2100 ವೀಕ್ಷಕರ ನೇಮಕ ಮಾಡಲಾಗುವುದು. ಬಿಹಾರ, ತ್ರಿಪುರಾ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಸೇರಿ ಆರು ರಾಜ್ಯಗಳಲ್ಲಿ ಖಾಲಿ ಇರುವ 26 ಅಸೆಂಬ್ಲಿ ಕ್ಷೇತ್ರಗಳಿಗೆ ಉಪ ಚುನಾವಣೆಯೂ ಜೊತೆಗೆ ನಡೆಯಲಿದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.
The 2024 Lok Sabha election process was set rolling on Saturday with the Election Commission announcing dates for polls. Voting will be held in 7 phases starting from April 19. The results will be announced on June 4. With the announcement of election dates, the model code of conduct comes into immediate effect.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm