ಬ್ರೇಕಿಂಗ್ ನ್ಯೂಸ್
01-04-24 11:19 am HK News Desk ದೇಶ - ವಿದೇಶ
ಕೋಲ್ಕತಾ, ಏ 01 : ಪಶ್ಚಿಮ ಬಂಗಾಳದಲ್ಲಿ ಚಂಡಮಾರುತ ಅಪ್ಪಳಿಸಿದ್ದು, ಈ ವೇಳೆ 4 ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಉತ್ತರ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾನುವಾರ ಚಂಡಮಾರುತ ಭಾರಿ ಹಾನಿಯನ್ನುಂಟುಮಾಡಿದ್ದು, ಘಟನೆಯಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 70 ಜನರು ಗಾಯಗೊಂಡಿದ್ದಾರೆ.




ಮೃತರನ್ನು ಸೆಂಪಾರಾದ ದಿಜೇಂದ್ರ ನಾರಾಯಣ ಸರ್ಕಾರ್ (52), ಪಹರ್‌ಪುರದ ಅನಿಮಾ ಬರ್ಮನ್ (45), ಪುತಿಮಾರಿಯ ಜಗನ್ ರಾಯ್ (72) ಮತ್ತು ರಾಜರ್‌ಹತ್‌ನ ಸಮರ್ ರಾಯ್ (64) ಎಂದು ಗುರುತಿಸಲಾಗಿದೆ.
ಚಂಡಮಾರುತ ಪರಿಣಾಮ ಜಿಲ್ಲಾ ಕೇಂದ್ರ ಪಟ್ಟಣ ಜಲ್ಪೈಗುರಿಯ ಹೆಚ್ಚಿನ ಭಾಗಗಳು ಮತ್ತು ನೆರೆಯ ಮೈನಾಗೂರಿನ ಅನೇಕ ಪ್ರದೇಶಗಳನ್ನು ಧ್ವಂಸಗೊಳಿಸಿವೆ. ಅಲ್ಲದೆ ಹಲವಾರು ಮನೆಗಳಿಗೆ ಹಾನಿಯಾಗಿದೆ. ಮರಗಳು ಉರುಳಿಬಿದ್ದಿದ್ದು, ವಿದ್ಯುತ್ ಕಂಬಗಳು ಧರೆಗುರುಳಿವೆ. ರಾಜರಹತ್, ಬರ್ನಿಶ್, ಬಕಾಲಿ, ಜೋರ್ಪಕ್ಡಿ, ಮಧಬ್ದಂಗ ಮತ್ತು ಸಪ್ತಿಬಾರಿ ಪ್ರದೇಶಗಳು ಹೆಚ್ಚು ಹಾನಿಗೊಳಗಾದ ಪ್ರದೇಶಗಳಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಹಲವಾರು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೋದಿ ಸಂತಾಪ ;
ಚಂಡಮಾರುತದಿಂದ ಸಂತ್ರಸ್ತರಾದ ಪಶ್ಚಿಮ ಬಂಗಾಳದ ಜಲಪೈಗುರಿ-ಮೈನಗುರಿ ಪ್ರದೇಶದ ಜನರೊಂದಿಗೆ ನಾವಿದ್ದೇವೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು' ಎಂದು ಮೋದಿ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಅಲ್ಲದೇ ಸಂತ್ರಸ್ತರಿಗೆ ಸಹಾಯ ಮಾಡುವಂತೆ ನಾನು ಬಂಗಾಳದ ಎಲ್ಲಾ ಬಿಜೆಪಿ ಕಾರ್ಯಕರ್ತರಲ್ಲಿ ಮನವಿ ಮಾಡುತ್ತೇನೆ ಎಂದು ಪ್ರಧಾನಿ ತಿಳಿಸಿದ್ದಾರೆ.
ಆಲಿಕಲ್ಲು ಮಳೆ ಹಾಗೂ ಬಿರುಗಾಳಿಗೆ ಜಲಪೈಗುರಿ ನಗರ ಹಾಗೂ ಪಕ್ಕದ ಮೈನಗುರಿ ಜಿಲ್ಲೆಯಲ್ಲಿ ಹಲವು ಮನೆಗಳು ಕುಸಿದಿವೆ. ಮರಗಳು ಹಾಗೂ ವಿದ್ಯುತ್ ಕಂಬಗಳು ಬುಡಮೇಲಾಗಿವೆ. ಜಲಪೈಗುರಿ ಜಿಲ್ಲೆಯ ರಾಜರ್‌ಹಾಟ್, ಬರ್ನಿಷ್, ಬಾಕಲಿ, ಜೋರ್‌ಪಕಡಿ, ಮಾಧಬ್‌ಡಾಂಗಾ, ಸಪ್ತಿಬಾರಿ ಪ್ರದೇಶಗಳಲ್ಲಿ ಹೆಚ್ಚು ಹಾನಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
‘ರಕ್ಷಣಾ ಕಾರ್ಯಕ್ಕಾಗಿ ಸಿಬ್ಬಂದಿ ನಿಯೋಜಿಸಲಾಗಿದೆ. ಮೃತರ ಕುಟುಂಬಕ್ಕೆ ಪರಿಹಾರ ನೀಡಲಾಗುವುದು’ ಎಂದು ಸಿ.ಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ರಾಜ್ಯಪಾಲ ಸಿ.ವಿ. ಆನಂದ ಬೋಸ್ ಸೋಮವಾರ ಜಲಪೈಗುರಿಗೆ ಭೇಟಿ ನೀಡಲಿದ್ದಾರೆ ಎಂದು ರಾಜಭವನದ ಅಧಿಕಾರಿಗಳು ತಿಳಿಸಿದ್ದಾರೆ.
Four persons were killed and at least 70 people were injured after a cyclonic storm hit parts of West Bengal’s Jalpaiguri district on Sunday. The severe weather conditions have also taken a toll on Assam where a portion of the ceiling at Guwahati’s Lokpriya Gopinath Bordoloi International Airport collapsed due to heavy rainfall.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am