ಬ್ರೇಕಿಂಗ್ ನ್ಯೂಸ್
05-04-24 12:54 pm HK News Desk ದೇಶ - ವಿದೇಶ
ನವದೆಹಲಿ, ಎ.5: ವಿಭಿನ್ನ ಧರ್ಮದ ವಿದ್ಯಾರ್ಥಿಗಳ ನಡುವೆ ಧಾರ್ಮಿಕ ನಂಬಿಕೆಗಳಿಗೆ ಘಾಸಿ ಆಗದಂತೆ ನೋಡಿಕೊಳ್ಳಲು ವಿಭಿನ್ನ ನಂಬಿಕೆಗಳನ್ನು ಗೌರವಿಸುವುದು ಮತ್ತು ಸಮಗ್ರ ಶಿಕ್ಷಣವನ್ನು ಒದಗಿಸುವ ಗುರಿಯೊಂದಿಗೆ ಕ್ಯಾಥೋಲಿಕ್ ಶಿಕ್ಷಣ ಸಂಸ್ಥೆಯ ಶಾಲೆಗಳಿಗೆ ಬಿಷಪ್ ಸಮ್ಮೇಳನ ಸಮಗ್ರ ಮಾರ್ಗಸೂಚಿಗಳನ್ನು ನೀಡಿದೆ.
ಸರ್ವಧರ್ಮೀಯ ವಿದ್ಯಾರ್ಥಿಗಳು ಎಲ್ಲಾ ನಂಬಿಕೆಗಳು ಹಾಗೂ ಸಂಪ್ರದಾಯಗಳನ್ನು ಗೌರವಿಸಬೇಕು. ಪ್ರತಿದಿನವೂ ಸಂವಿಧಾನದ ಪ್ರಸ್ತಾವನೆಯನ್ನು ಓದಬೇಕು, ಹಾಗೂ ಇತರೆ ಧರ್ಮೀಯ ವಿದ್ಯಾರ್ಥಿಗಳ ಮೇಲೆ ಕ್ರೈಸ್ತ ಸಂಪ್ರದಾಯಗಳನ್ನು ಹೇರಬಾರದು ಎಂದು ಭಾರತೀಯ ಕ್ಯಾಥೋಲಿಕ್ ಬಿಷಪ್ಸ್ ಸಮ್ಮೇಳನ (ಸಿಬಿಸಿಐ) ಮಾರ್ಗಸೂಚಿಗಳನ್ನು ಹೊರಡಿಸಿದೆ.
ದೇಶದಲ್ಲಿ ಪ್ರಸ್ತುತದ ಸಮಾಜೋ- ಸಾಂಸ್ಕೃತಿಕ ಸನ್ನಿವೇಶಕ್ಕೆ ಚರ್ಚ್‌ನ ಪ್ರತಿಕ್ರಿಯೆಯ ಬಗ್ಗೆ ಚರ್ಚೆ ನಡೆಸಲು ಕರೆಯಲಾಗಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕ್ರೈಸ್ತ ಸಮುದಾಯ ನಡೆಸುವ ಶಿಕ್ಷಣ ಸಂಸ್ಥೆಗಳಲ್ಲಿ ಸಿಬ್ಬಂದಿ ವಿರುದ್ಧದ ದಾಳಿಗಳು ಮತ್ತು ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಈ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ.
ತ್ರಿಪುರಾದ ಅಗರ್ತಲಾದಲ್ಲಿ ಧಾರ್ಮಿಕ ಸಂಕೇತವುಳ್ಳ ದಾರವನ್ನು ಕೈಗೆ ಕಟ್ಟಿಕೊಂಡು ಬಂದಿದ್ದ ವಿದ್ಯಾರ್ಥಿಯನ್ನು ಖಾಸಗಿ ಕ್ರೈಸ್ತ ಮಿಷನರಿ ಶಾಲೆಯಲ್ಲಿ ಶಿಕ್ಷಕರು ತರಗತಿಯಿಂದ ಹೊರಹಾಕಿದ ಘಟನೆ ವಿರುದ್ಧ ಕಳೆದ ಫೆಬ್ರವರಿ ತಿಂಗಳಲ್ಲಿ ಬಜರಂಗದಳದ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಅದೇ ತಿಂಗಳಲ್ಲಿ ಅಸ್ಸಾಂನಲ್ಲಿ ಕ್ರೈಸ್ತ ಶಾಲೆಗಳಿಗೆ 15 ದಿನಗಳ ಎಚ್ಚರಿಕೆ ನೀಡಿದ್ದ ಹಿಂದೂ ಸಂಘಟನೆಗಳು, ತಮ್ಮ ಶಿಕ್ಷಣ ಸಂಸ್ಥೆಯ ಆವರಣಗಳಲ್ಲಿ ಪಾದ್ರಿಗಳು, ಕ್ರೈಸ್ತ ಸನ್ಯಾಸಿನಿಯರು ಮತ್ತು ಇತರರು ಕ್ರೈಸ್ತ ಧರ್ಮದ ಸಂಕೇತ ಹಾಗೂ ಧಾರ್ಮಿಕ ಹವ್ಯಾಸಗಳನ್ನು ಕಿತ್ತು ಹಾಕುವಂತೆ ಸೂಚನೆ ನೀಡಿದ್ದವು. ಇದರಿಂದ ಎಚ್ಚೆತ್ತುಕೊಂಡಿರುವ ಸಿಬಿಸಿಐ, ಕ್ಯಾಥೋಲಿಕ್ ಶಿಕ್ಷಣ ಸಂಸ್ಥೆಗಳಿಗೆ 13 ಪುಟಗಳ ಮಾರ್ಗಸೂಚಿ ನೀಡಿದ್ದು ಧಾರ್ಮಿಕ ಸಹಿಷ್ಣುತೆ ಬಗ್ಗೆ ಪಾಠ ಹೇಳಿದೆ.
The Catholic Bishops’ Conference of India (CBCI) recent guidelines to schools under its fold to “face the emerging challenges due to the current socio-cultural, religious, and political situation in the country” have been welcomed by the Guwahati-based right-wing group Kutumba Surakshya Parishad (KSP).
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
07-10-26 11:12 am
HK News Staffer
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm