ಬ್ರೇಕಿಂಗ್ ನ್ಯೂಸ್
15-04-24 11:41 am HK News Desk ದೇಶ - ವಿದೇಶ
ರಾಜಸ್ಥಾನ, ಏ.15: ವೇಗವಾಗಿ ಬಂದ ಕಾರು ಟ್ರಕ್ ಗೆ ಡಿಕ್ಕಿಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಇಬ್ಬರು ಮಕ್ಕಳು, ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ಸಜೀವವಾಗಿ ದಹನವಾಗಿರುವ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ.
ಎಲ್ಲಾ ಪ್ರಯಾಣಿಕರು ಉತ್ತರಪ್ರದೇಶದ ಮೀರತ್ ನಿವಾಸಿಗಳು ಎಂದು ಗುರುತಿಸಲಾಗಿದ್ದು, ರಾಜಸ್ಥಾನದ ಸಲ್ಸಾರ್ ಬಾಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಕಾರು ಚಾಲಕ ಟ್ರಕ್ ಅನ್ನು ಓವರ್ ಟೇಕ್ ಮಾಡಿದ ಸಂದರ್ಭದಲ್ಲಿ ಮತ್ತೊಂದು ವಾಹನ ಮುಂಭಾಗದಿಂದ ಬಂದಾಗ ನಿಯಂತ್ರಣ ತಪ್ಪಿ ಟ್ರಕ್ ಗೆ ಡಿಕ್ಕಿ ಹೊಡೆದಿದ್ದು, ತಕ್ಷಣವೇ ಕಾರಿಗೆ ಬೆಂಕಿ ಹೊತ್ತುಕೊಂಡಿದ್ದೆ.
ಸ್ಥಳೀಯರು ಕಾರಿನೊಳಗಿದ್ದ ಜನರ ಪ್ರಾಣ ಉಳಿಸಲು ಸಾಕಷ್ಟು ಪ್ರಯತ್ನಪಟ್ಟರೂ ಸಾಧ್ಯವಾಗದೇ, ಏಳು ಮಂದಿ ಸಜೀವವಾಗಿ ದಹನವಾಗಿದ್ದಾರೆ. ಕಾರಿನೊಳಗಿದ್ದ ಪ್ರಯಾಣಿಕರು ಪ್ರಾಣ ಉಳಿಸಲು ಅಂಗಲಾಚುತ್ತಿದ್ದರು ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದರೂ ಕೂಡಾ ಅಷ್ಟರಲ್ಲಿಯೇ ಬೆಂಕಿ ಕೆನ್ನಾಲೆಗೆ ಸಿಲುಕಿ ಪ್ರಯಾಣಿಕರು ಕೊನೆಯುಸಿರೆಳೆದಿದ್ದರು. ಮೃತರನ್ನು ನೀಲಂ ಗೋಯಲ್ (55), ಆಕೆಯ ಮಗ ಅಶುತೋಷ್ ಗೋಯಲ್ (35), ಮಂಜು ಬಿಂದಾಲ್ (58), ಆಕೆಯ ಮಗ ಹಾರ್ದಿಕ್ ಬಿಂದಾಲ್ (37ವರ್ಷ), ಆತನ ಪತ್ನಿ ಸ್ವಾತಿ ಬಿಂದಾಲ್ (32), ದಂಪತಿಯ ಇಬ್ಬರು ಮಕ್ಕಳು ದುರಂತದಲ್ಲಿ ಸಾವನ್ನಪ್ಪಿದ್ದು, ಟ್ರಕ್ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
In a tragic incident, six people were charred to death after a car they were travelling in rammed into a truck from behind on the Churu-Salasar Highway in Rajasthan, the police said on Sunday (April 14). The incident took place at around 2.30 pm in Fatehpur, Sikar when a speeding car collided with a truck on the highway, which ignited the fire in both car and the truck which carried cotton. The car passengers, all residents of Uttar Pradesh’s Meerut, were going to Hisar from Salasar Balaji Temple when the accident occurred, they said.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am