ದೇವಸ್ಥಾನದ ಪ್ರಸಾದ ಸೇವಿಸಿ 75 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ, ಆರು ಮಂದಿ ಸ್ಥಿತಿ ಗಂಭೀರ, ಓರ್ವ ಸಾವು 

15-04-24 12:40 pm       HK News Desk   ದೇಶ - ವಿದೇಶ

ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ಮಜ್ರಿ ಕೊಲ್ಲಿರಿ ಪ್ರದೇಶದಲ್ಲಿ ಭಾನುವಾರ ದೇವಸ್ಥಾನದ ಪ್ರಸಾದ ಸೇವಿಸಿ ಅಸ್ವಸ್ಥಗೊಂಡ ಪರಿಣಾಮ ಓರ್ವ ಮೃತಪಟ್ಟರೆ 75 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚಂದ್ರಾಪುರ, ಏ.15: ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ಮಜ್ರಿ ಕೊಲ್ಲಿರಿ ಪ್ರದೇಶದಲ್ಲಿ ಭಾನುವಾರ ದೇವಸ್ಥಾನದ ಪ್ರಸಾದ ಸೇವಿಸಿ ಅಸ್ವಸ್ಥಗೊಂಡ ಪರಿಣಾಮ ಓರ್ವ ಮೃತಪಟ್ಟರೆ 75 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚೈತ್ರ ನವರಾತ್ರಿ ಹಬ್ಬದ ಹಿಂದಿನ ದಿನವಾದ ಕಾಳಿ ದೇವಸ್ಥಾನದಲ್ಲಿ ಶನಿವಾರ ಸಂಜೆ ನಡೆದ ಧಾರ್ಮಿಕ ಕಾರ್ಯಕ್ರಮದ ವೇಳೆ 400 ಕ್ಕೂ ಹೆಚ್ಚು ಜನರು ಪ್ರಸಾದ ಸೇವಿಸಿದ್ದಾರೆ ಇದಾದ ಬಳಿಕ ಕೆಲ ಮಂದಿ ಅಸ್ವಸ್ಥಗೊಂಡು ಈ ಘಟನೆ ಸಂಭವಿಸಿದೆ.

ದೇವಸ್ಥಾನದ ಪ್ರಸಾದ ಸೇವಿಸಿ ಮನೆಗೆ ತೆರಳಿದ ಕೆಲ ಮಂದಿ ಅಸ್ವಸ್ಥಗೊಂಡಿದ್ದಾರೆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಈ ವೇಳೆ ಓರ್ವ ಚಿಕಿತ್ಸೆಗೆ ಸ್ಪಂಧಿಸದೆ ಓರ್ವ ಮೃತಪಟ್ಟಿದ್ದಾರೆ, ಅಲ್ಲದೆ ಘಟನೆಗೆ ಸಂಬಂಧಿಸಿ ಸುಮಾರು 79 ಮಂದಿ ವರೋರಾ ಆಸ್ಪತ್ರೆಗೆ ದಾಖಲಾಗಿದ್ದು ಇದರಲ್ಲಿ ಆರು ಮಂದಿಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ಚಂದ್ರಾಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಇತರ ರೋಗಿಗಳ ಸ್ಥಿತಿ ಸ್ಥಿರವಾಗಿದೆ ಮತ್ತು ಅವರ ಚಿಕಿತ್ಸೆ ಮುಂದುವರೆದಿದೆ ಎಂದು ಹೇಳಲಾಗಿದೆ.

80 devotees suffered food poisoning after consuming 80 devotees suffered food poisoning after consuming affected.