ಬ್ರೇಕಿಂಗ್ ನ್ಯೂಸ್
16-04-24 07:50 pm HK News Desk ದೇಶ - ವಿದೇಶ
ನವದೆಹಲಿ, ಎ.16: ಛತ್ತೀಸ್ಗಢ ರಾಜ್ಯದ ಕಂಕೇರ್ ಜಿಲ್ಲೆಯಲ್ಲಿ 18 ಮಂದಿ ನಕ್ಸಲರನ್ನು ಬಿಎಸ್ಎಫ್ ಭದ್ರತಾ ಪಡೆಗಳು ಗುಂಡಿಟ್ಟು ಹತ್ಯೆಗೈದ ಘಟನೆ ನಡೆದಿದೆ. ಮೂವರು ಭದ್ರತಾ ಸಿಬಂದಿ ಗಾಯಗೊಂಡಿದ್ದು, ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.
ಮೃತರಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ಶಂಕರ್ ರಾವ್ ಸೇರಿದ್ದಾನೆ. ಆತನ ತಲೆಗೆ ಛತ್ತೀಸ್ಗಢ ರಾಜ್ಯ ಸರಕಾರ 25 ಲಕ್ಷ ಬಹುಮಾನ ಘೋಷಿಸಿತ್ತು. ಬೈನಗೊಂಡ ಮತ್ತು ಕೊರೊನಾರ್ ಗ್ರಾಮದ ಹಪತೋಲ ಅರಣ್ಯ ಪ್ರದೇಶದಲ್ಲಿ ಮಧ್ಯಾಹ್ನ 2 ಗಂಟೆ ವೇಳೆಗೆ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಬಿಎಸ್ಎಫ್ ಯೋಧರು ಮತ್ತು ಜಿಲ್ಲಾ ಸಶಸ್ತ್ರ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ. ಬಿಎಸ್ಎಫ್ ಪಡೆಯನ್ನು ನಕ್ಸಲ್ ಪೀಡಿತ ಕಂಕೇರ್ ಜಿಲ್ಲೆಯಾದ್ಯಂತ ನಿಯೋಜನೆ ಮಾಡಲಾಗಿದೆ.
ಎನ್ಕೌಂಟರ್ ನಡೆದ ಸ್ಥಳದಲ್ಲಿ 18 ಮಂದಿ ಮಾವೋವಾದಿ ನಕ್ಸಲರ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಏಳು ಎಕೆ -47 ರೈಫಲ್ ಮತ್ತು ಮೂರು ಮೆಶಿನ್ ಗನ್ ವಶಕ್ಕೆ ಪಡೆಯಲಾಗಿದೆ. ಒಬ್ಬರು ಬಿಎಸ್ಎಫ್ ಯೋಧರ ಕಾಲಿಗೆ ಗುಂಡೇಟು ತಗಲಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಬಿಎಸ್ಎಫ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಕಂಕೇರ್ ಜಿಲ್ಲೆಯಲ್ಲಿ ಎ.26ರಂದು ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಕ್ಸಲರು ಅಲರ್ಟ್ ಆಗಿದ್ದರು. ಜನರಲ್ಲಿ ಭಯ ಹುಟ್ಟಿಸಿ ಚುನಾವಣೆಯಲ್ಲಿ ಸಕ್ರಿಯವಾಗದಂತೆ ಯತ್ನ ಮಾಡಿದ್ದರು. ಹೀಗಾಗಿ ರಾಜ್ಯ ಪೊಲೀಸರು ಮತ್ತು ಬಿಎಸ್ಎಫ್ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದವು. ಸ್ಥಳದಲ್ಲಿ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದೆ.
At least twenty-nine Naxalites were killed in an encounter with the police in Chhattisgarh's Kanker district on Tuesday, the Border Security Force said.
07-10-25 07:32 pm
Bangalore Correspondent
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm