ಬ್ರೇಕಿಂಗ್ ನ್ಯೂಸ್
27-04-24 02:20 pm HK News Desk ದೇಶ - ವಿದೇಶ
ನವದೆಹಲಿ, ಎ.27: ನ್ಯಾಯಾಂಗ ಬಂಧನಕ್ಕೀಡಾಗಿ ಜೈಲಿನಲ್ಲಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದೆ ಅರವಿಂದ್ ಕೇಜ್ರಿವಾಲ್ ಅಧಿಕಾರಕ್ಕೆ ಅಂಟಿಕೊಂಡಿದ್ದಾರೆ. ಅವರಿಗೆ ರಾಷ್ಟ್ರೀಯ, ಜನಹಿತಕ್ಕಿಂತ ವೈಯಕ್ತಿಕ ಹಿತಾಸಕ್ತಿಯೇ ಮುಖ್ಯವಾಗಿದೆ ಎಂದು ಅವರನ್ನು ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಶಾಲೆಗಳಲ್ಲಿ ಪಠ್ಯಪುಸ್ತಕ ಮತ್ತು ಸಮವಸ್ತ್ರ ಲಭ್ಯತೆಯಿಲ್ಲದ ವಿಚಾರದಲ್ಲಿ ಸಲ್ಲಿಸಿದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ದೆಹಲಿ ಹೈಕೋರ್ಟ್ ಕೇಜ್ರಿವಾಲ್ ಸರಕಾರವನ್ನು ತರಾಟೆಗೆತ್ತಿಕೊಂಡಿದೆ. ದೆಹಲಿ ನಗರಾಭಿವೃದ್ಧಿ ಸಚಿವ ಸೌರಭ್ ಭಾರದ್ವಾಜ್ ವಿದ್ಯಾರ್ಥಿಗಳ ಕಷ್ಟ ನೋಡಿ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ, ಕೇಜ್ರಿವಾಲ್ ನ್ಯಾಯಾಂಗ ಬಂಧನದಲ್ಲಿದ್ದು ಆಡಳಿತ ನಡೆಸುತ್ತಿರುವುದರಿಂದ ದೆಹಲಿಯ ವಿದ್ಯಾರ್ಥಿಗಳು ಮತ್ತು ಜನರು ತೊಂದರೆ ಎದುರಿಸುತ್ತಿದ್ದಾರೆ ಎಂದು ಕೋರ್ಟ್ ಛೀಮಾರಿ ಹಾಕಿದೆ.

5 ಕೋಟಿಗೂ ಹೆಚ್ಚು ಮೌಲ್ಯದ ಸರ್ಕಾರಿ ಗುತ್ತಿಗೆಗಳನ್ನು ಹಂಚಿಕೆ ಮಾಡಲು ದೆಹಲಿ ಸರ್ಕಾರದ ಸ್ಥಾಯಿ ಸಮಿತಿಯ ಅನುಮೋದನೆ ಅಗತ್ಯವಿದೆ. ಆದರೆ ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿರುವ ಕಾರಣ ಈ ಸಮಿತಿ ಸಕ್ರಿಯವಾಗಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳ ಸಮವಸ್ತ್ರ, ಪುಸ್ತಕ, ಶಾಲಾ ಬ್ಯಾಗ್, ಲೇಖನ ಸಾಮಗ್ರಿಗಳಿಗೆ ಸಂಬಂಧಿಸಿದ ಗುತ್ತಿಗೆ ಹಂಚಿಕೆ ಸಾಧ್ಯವಾಗುತ್ತಿಲ್ಲ ಎಂದು ಅರ್ಜಿದಾರರ ಪರ ವಕೀಲರು ಕೋರ್ಟ್ ಗಮನಕ್ಕೆ ತಂದಿದ್ದಾರೆ. ದೆಹಲಿ ಸರ್ಕಾರಕ್ಕೆ ಸೇರಿದ ಈ ವಿಚಾರದಲ್ಲಿ ನೇರವಾಗಿ ಮಧ್ಯಪ್ರವೇಶ ಮಾಡುವ ಅಧಿಕಾರ ಕೋರ್ಟಿಗಿಲ್ಲ. ಸರ್ಕಾರ ಮಾಡಬೇಕಾದ್ದನ್ನು ಮಾಡಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.
The Delhi High Court on Friday came down heavily on Arvind Kejriwal for not resigning as the Chief Minister. The court said that Arvind Kejriwal put personal interest over national interest by not resigning as Chief Minister after his arrest.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm