ಬ್ರೇಕಿಂಗ್ ನ್ಯೂಸ್
27-04-24 05:46 pm HK News Desk ದೇಶ - ವಿದೇಶ
ನವದೆಹಲಿ, ಎ.27: ಸುಪ್ರೀಂ ಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ, ಕರ್ನಾಟಕ ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.
ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಎ.26ರ ಶುಕ್ರವಾರ ಮತದಾನ ನಡೆದಿತ್ತು. ತಿಂಗಳ ಹಿಂದೆಯೇ ರಾಜ್ಯದ ಕಾಂಗ್ರೆಸ್ ಸರ್ಕಾರ, ಬರ ಪರಿಹಾರಕ್ಕಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ್ದ ಕೋರ್ಟ್, ಬರ ಪರಿಹಾರ ವಿಚಾರದಲ್ಲಿ ವಿಳಂಬ ತೋರಿದ್ದಕ್ಕೆ ಛೀಮಾರಿ ಹಾಕಿತ್ತು. ಕರ್ನಾಟಕದಲ್ಲಿ ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು ತೀವ್ರ ಬರಗಾಲ ಉಂಟಾಗಿದ್ದರಿಂದ 2023ರ ಸೆಪ್ಟೆಂಬರ್ನಲ್ಲಿ ರಾಜ್ಯ ಸರ್ಕಾರ ಬರ ಪರಿಹಾರಕ್ಕಾಗಿ 18,172 ಕೋಟಿ ಹಣದ ಬೇಡಿಕೆ ಇಟ್ಟಿತ್ತು. ಬೇಡಿಕೆ ಇಟ್ಟು ತಿಂಗಳು ಕಳೆದರೂ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುತ್ತಿಲ್ಲ ಎಂದು ರಾಜ್ಯದ ಸಿಎಂ ಸಿದ್ದರಾಮಯ್ಯ ಟೀಕಾ ಪ್ರಹಾರ ನಡೆಸುತ್ತಿದ್ದರು.
ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿಧಿಯಿಂದ ಕರ್ನಾಟಕಕ್ಕೆ ತಕ್ಷಣ ಹಣ ಬಿಡುಗಡೆ ಮಾಡುವಂತೆ ಆದೇಶ ಮಾಡಲಾಗಿತ್ತು. ಕಳೆದ ವಾರ ಕೇಂದ್ರ ಸರ್ಕಾರದ ಪರ ವಕೀಲರು ಪರಿಹಾರ ಬಿಡುಗಡೆ ಮಾಡುವುದಾಗಿ ಕೋರ್ಟ್ನಲ್ಲಿ ಒಪ್ಪಿಕೊಂಡಿದ್ದರು. ಅದರಂತೆ ಕೇಂದ್ರ ಸರ್ಕಾರ ಚುನಾವಣೆ ನಡುವಲ್ಲೇ ಬರ ಪರಿಹಾರ ಘೋಷಣೆ ಮಾಡಿದೆ. ನೆರೆ ಪರಿಹಾರವೆಂದು ತಮಿಳುನಾಡಿಗೆ 275 ಕೋಟಿ ರೂ. ಪರಿಹಾರವನ್ನು ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಘೋಷಿಸಿದೆ.
The Centre has released Rs 3,454 crore to Karnataka to take up its drought relief works.
07-05-25 04:07 pm
Bangalore Correspondent
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
07-05-25 06:14 pm
HK News Desk
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
07-05-25 03:36 pm
Mangalore Correspondent
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm