ಬ್ರೇಕಿಂಗ್ ನ್ಯೂಸ್
30-04-24 05:27 pm HK News Desk ದೇಶ - ವಿದೇಶ
ಗುವಾಹಟಿ, ಏ.30: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ರಾಜ್ಯ ಮಾತ್ರವಲ್ಲದೇ ದೇಶದಲ್ಲೂ ಬಹಳ ಸದ್ದು ಮಾಡುತ್ತಿದೆ. ಈಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು, ನಮ್ಮ ನಿಲುವು ಸ್ಪಷ್ಟವಾಗಿದೆ, ಬಿಜೆಪಿ ಯಾವತ್ತಿಗೂ ಈ ದೇಶದ ಮಾತೃ ಶಕ್ತಿ ಜೊತೆ ನಿಂತಿದೆ, ನಿಲ್ಲಲಿದೆ ಎಂದು ಹೇಳಿದ್ದಾರೆ.
ಅಸ್ಸಾಂನ ಗುವಾಹಟಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಲು ಇಷ್ಟಪಡುತ್ತೇನೆ. ಕರ್ನಾಟಕದಲ್ಲಿ ಯಾವ ಸರ್ಕಾರ ಇರೋದು, ಅಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವಿದೆ. ಇದುವರೆಗೂ ಅವರು ಯಾಕೆ ಕ್ರಮವನ್ನು ತೆಗೆದುಕೊಂಡಿಲ್ಲ, ಅದು ರಾಜ್ಯ ಸರ್ಕಾರದ ಕಾನೂನು ಮತ್ತು ಸುವ್ಯವಸ್ಥೆಯ ವಿಷಯವಾಗಿರುವುದರಿಂದ ನಾವು ಕ್ರಮ ತೆಗೆದುಕೊಂಡಿಲ್ಲ ಎಂದು ಹೇಳಿದರು.
)
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ನಾವು ರಾಜ್ಯ ಸರ್ಕಾರದ ತನಿಖೆಯ ಪರ ಇದ್ದೇವೆ. ನಮ್ಮ ಮಿತ್ರ ಪಕ್ಷ ಜೆಡಿಎಸ್ ಕೂಡ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಈಗಾಗಲೇ ಹೇಳಿದೆ. ಇವತ್ತು ಜೆಡಿಎಸ್ ಕೋರ್ ಕಮಿಟಿ ಸಭೆ ಇದ್ದು, ಅದರಲ್ಲಿ ಅವರು ಕ್ರಮವನ್ನು ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು. ಈ ಮೂಲಕ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.
ಇನ್ನು, ಬಿಜೆಪಿ 400 ಸ್ಥಾನಗಳನ್ನು ಗೆದ್ದರೆ ಬಿಜೆಪಿ ಮೀಸಲಾತಿ ವ್ಯವಸ್ಥೆಯನ್ನು ರದ್ದು ಮಾಡುತ್ತದೆ ಎಂದು ಹೇಳಿ ಜನರನ್ನು ದಾರಿತಪ್ಪಿಸುತ್ತಿದೆ. ಈ ಅಂಶಗಳೆಲ್ಲಾ ಆಧಾರ ರಹಿತ ಹಾಗೂ ಸುಳ್ಳುಗಳಾಗಿವೆ. ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಯ ಮೀಸಲಾತಿಗೆ ಯಾವಾಗಲೂ ಬಿಜೆಪಿ ಬೆಂಬಲವಾಗಿ ನಿಲ್ಲುತ್ತದೆ. ಜೊತೆಗೆ ಮೀಸಲಾತಿ ವ್ಯವಸ್ಥೆಯ ರಕ್ಷಕನಾಗಿ ಬಿಜೆಪಿ ಕೆಲಸ ಮಾಡುತ್ತದೆ ಎಂಬುದನ್ನು ಈ ಸಂದರ್ಭದಲ್ಲಿ ನಾನು ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದರು.
Prajwal Revanna Hassan sex scandal, BJP will not tolerate any insult to women, says Amit Shah. Union Home Minister Amit Shah on Tuesday condemned the alleged sexual abuse of women involving Lok Sabha MP Prajwal Revanna, asserting that the BJP will not tolerate any insult to women.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm