ಬ್ರೇಕಿಂಗ್ ನ್ಯೂಸ್
02-05-24 10:07 pm HK News Desk ದೇಶ - ವಿದೇಶ
ಅಹ್ಮದಾಬಾದ್, ಮೇ.2: ಪಾಕಿಸ್ತಾನದ ಮಾಜಿ ಸಚಿವ ಫವಾದ್ ಚೌಧರಿ ಭಾರತದ ರಾಹುಲ್ ಗಾಂಧಿ ಅವರನ್ನು ಪ್ರಶಂಸಿಸಿ ಹೇಳಿಕೆ ನೀಡಿರುವುದನ್ನು ಚುನಾವಣಾ ಪ್ರಚಾರ ಭಾಷಣದಲ್ಲಿ ಅಣಕಿಸಿದ ಪ್ರಧಾನಿ ಮೋದಿ, ಈ ಮೂಲಕ ಕಾಂಗ್ರೆಸ್ ಮತ್ತು ಪಾಕಿಸ್ತಾನದ ನಡುವಿನ ನಂಟು ಹೊಂದಿರುವುದನ್ನು ಜಗತ್ತಿಗೆ ತೋರಿಸಿದೆ. ಕಾಂಗ್ರೆಸ್ ಇಲ್ಲಿ ದುರ್ಬಲವಾಗುತ್ತಿದ್ದರೆ, ಪಾಕಿಸ್ಥಾನ ರಾಹುಲ್ ಗಾಂಧಿ ಪ್ರಧಾನಿಯಾಗಲು ಬಯಸುತ್ತಿದೆ ಎಂದು ಕುಟುಕಿದ್ದಾರೆ.
ಕಾಕತಾಳೀಯ ನೋಡಿ, ಭಾರತದಲ್ಲಿ ಕಾಂಗ್ರೆಸ್ ದುರ್ಬಲವಾಗುತ್ತಿದೆ. ತಮಾಷೆ ಏನಂದ್ರೆ, ಇಲ್ಲಿ ಕಾಂಗ್ರೆಸ್ ಸಾಯುತ್ತಿದ್ದರೆ, ಅಲ್ಲಿ ಪಾಕಿಸ್ತಾನ ಅಳುತ್ತಾ ಇದೆ. ಈಗ ಪಾಕಿಸ್ತಾನದ ನಾಯಕರು ಕಾಂಗ್ರೆಸಿಗಾಗಿ ಪ್ರಾರ್ಥಿಸುತ್ತಿದ್ದಾರೆ. ಕಾಂಗ್ರೆಸಿನ ಯುವರಾಜನನ್ನು ಪ್ರಧಾನಿಯಾಗಿ ಕಾಣಲು ಪಾಕಿಸ್ತಾನಿ ನಾಯಕರು ಹಂಬಲಿಸುತ್ತಿದ್ದಾರೆ. ಪಾಕಿಸ್ತಾನ ಮತ್ತು ಕಾಂಗ್ರೆಸಿನ ನಂಟನ್ನು ನಾವು ಮೊದಲೇ ಅರಿತಿದ್ದೆವು. ಇವರ ಹೇಳಿಕೆಯಿಂದಾಗಿ ಇವರೊಳಗಿನ ಬಾಂಧವ್ಯ ಹೊರಜಗತ್ತಿಗೆ ತಿಳಿಯುವಂತಾಯಿತು ಎಂದು ಗುಜರಾತಿನ ಆನಂದ್ ನಲ್ಲಿ ಮೋದಿ ಪ್ರಚಾರ ಭಾಷಣದಲ್ಲಿ ಹೇಳಿದ್ದಾರೆ.
ದುರ್ಬಲ ಕಾಂಗ್ರೆಸ್ ಸರಕಾರ ಇದ್ದಾಗ ಉಗ್ರವಾದಿಗಳ ಬಗ್ಗೆ ಮೃದು ಧೋರಣೆ ತಾಳಿತ್ತು. ಆದರೆ ಬಲಿಷ್ಠ ಮೋದಿ ಸರಕಾರ ಬಂದ ಬಳಿಕ ಉಗ್ರರನ್ನು ಅದೇ ನೆಲದಲ್ಲಿ ಕೊಲ್ಲುತ್ತಾ ಬಂದಿದೆ ಎಂದು ಮೋದಿ ಹೇಳಿದ್ದಾರೆ. ಪಾಕಿಸ್ತಾನದ ಮಾಜಿ ಸಚಿವ ಫವಾದ್ ಚೌಧರಿ, ರಾಹುಲ್ ಗಾಂಧಿ ಮೋದಿ ಕುರಿತಾಗಿ ಮಾಡಿದ್ದ ಭಾಷಣವನ್ನು ಕೊಂಡಾಡಿದ್ದರು. ಭಾರತದ ಪ್ರಸಕ್ತ ಸ್ಥಿತಿಯನ್ನು ರಾಹುಲ್ ಗಾಂಧಿ ತೋರಿಸಿದ್ದಾರೆ ಎಂದಿದ್ದರು. ಈ ಬಗ್ಗೆ ನೀವು ರಾಹುಲ್ ಗಾಂಧಿಯನ್ನು ಬೆಂಬಲಿಸುತ್ತೀರಾ ಎಂಬ ಪ್ರಶ್ನೆಗೆ, ನಾವು ಎಲ್ಲರನ್ನೂ ಬೆಂಬಲಿಸುತ್ತೇವೆ, ಆದರೆ ಸರಿಯಾದ ವಿಚಾರ ಇರಬೇಕು ಅಷ್ಟೇ ಎಂದಿದ್ದರು.
Prime Minister Narendra Modi on Thursday reacted to former Pakistan minister Fawad Chaudhry’s words of praise for Congress leader Rahul Gandhi said that this has exposed “partnership” between Pakistan and Congress. Addressing a public rally in Gujarat’s Anand, Modi said Pakistani leaders are praying for Congress when the party is getting weak in India and they want to make Rahul Gandhi the prime minister.
07-10-25 05:23 pm
Bangalore Correspondent
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm