ಬ್ರೇಕಿಂಗ್ ನ್ಯೂಸ್
03-05-24 10:28 am HK News Desk ದೇಶ - ವಿದೇಶ
ಮುಂಬೈ, ಮೇ.03: ಮುಂಬೈನ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಮೂಲ ಸೌಕರ್ಯವಿಲ್ಲದೆ, ಮೊಬೈಲ್ ಟಾರ್ಚ್ ಬಳಸಿ ಮಹಿಳೆಯ ಹೆರಿಗೆ ಮಾಡಿದ್ದಾರೆ. ಹೆರಿಗೆ ಬಳಿಕ ತಾಯಿ ಹಾಗೂ ಮಗು ಮೃತಪಟ್ಟಿದ್ದು, ಮನ ಕಲಕುವ ಘಟನೆಯು ಜನರ ಆಕ್ರೋಶ ಕೆರಳಿಸಿದೆ.
ಹೌದು, ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ವ್ಯಾಪ್ತಿಯ ಸುಷ್ಮಾ ಸ್ವರಾಜ್ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದ ಕಾರಣ ಆಸ್ಪತ್ರೆ ಸಿಬ್ಬಂದಿಯು ಸಹಿದುನ್ ಎಂಬ ಮಹಿಳೆಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಿದ್ದಾರೆ. ಸರಿಯಾದ ಮೂಲ ಸೌಕರ್ಯ, ಚಿಕಿತ್ಸೆ ಸಿಗದೆ, ಹೆರಿಗೆ ಬಳಿಕ ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆ. ಖುಸ್ರುದ್ದೀನ್ ಅನ್ಸಾರಿ ಅವರು 11 ತಿಂಗಳ ಹಿಂದಷ್ಟೇ ಸಹಿದುನ್ ಅವರನ್ನು ಮದುವೆಯಾಗಿದ್ದರು. ಮದುವೆಯಾದ ಕೆಲವೇ ತಿಂಗಳಿಗೆ ಸಹಿದುನ್ ಗರ್ಭಿಣಿಯಾಗಿದ್ದರು. ಕೆಲ ದಿನಗಳ ಹಿಂದಷ್ಟೇ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಈಗ ಮೂಲ ಸೌಕರ್ಯ, ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ತಾಯಿ ಮತ್ತು ಮಗು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಹೆರಿಗೆ ಮಾಡಿಸುವ ಕೋಣೆಯಲ್ಲಿ ವಿದ್ಯುತ್ ಕಡಿತವಾಗಿದೆ. ಸಿಸೇರಿಯನ್ ಮಾಡುವಾಗಲೇ ವಿದ್ಯುತ್ ಕೈಕೊಟ್ಟ ಕಾರಣ ಆಪರೇಷನ್ಗೆ ತೊಂದರೆಯಾಗಿದೆ. ಇನ್ನು ಮೂರು ಗಂಟೆಯಿಂದ ಜನರೇಟರ್ ಆನ್ ಆಗಿಲ್ಲ. ಇದಾದ ಬಳಿಕ ವೈದ್ಯರು ಮೊಬೈಲ್ ಬ್ಯಾಟರಿ ಬಳಸಿ ಆಪರೇಷನ್ ಮಾಡಿದ್ದಾರೆ. ಇದರಿಂದಾಗಿ ನನ್ನ ಪತ್ನಿ ಹಾಗೂ ಮಗುವನ್ನು ಕಳೆದುಕೊಳ್ಳಬೇಕಾಯಿತು ಎಂದು ಮಹಿಳೆಯ ಕುಟುಂಬಸ್ಥರು ದೂರಿದ್ದಾರೆ. ಅಷ್ಟೇ ಅಲ್ಲ, ಆಸ್ಪತ್ರೆ ಹೊರಗೆ ತೀವ್ರವಾಗಿ ಪ್ರತಿಭಟನೆ ನಡೆಸಿದ್ದಾರೆ. ಪ್ರಕರಣವನ್ನು ಬಿಎಂಸಿಯು ತನಿಖೆಗೆ ಆದೇಶಿಸಿದೆ.
ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ನ ವಾರ್ಷಿಕ ಬಜೆಟ್ 52 ಸಾವಿರ ಕೋಟಿ ರೂ. ಆಗಿದೆ. ಆರೋಗ್ಯ ಕ್ಷೇತ್ರಕ್ಕಾಗಿಯೇ ಆಸ್ಪತ್ರೆಯು 6,250 ಕೋಟಿ ರೂ. ಮೀಸಲಿರಿಸಿದೆ. ಇಷ್ಟಿದ್ದರೂ, ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಮೂಲ ಸೌಕರ್ಯಗಳು, ವೈದ್ಯಕೀಯ ಉಪಕರಣಗಳು ಬಿಡಿ, ಕನಿಷ್ಠ ಸಮರ್ಪಕ ವಿದ್ಯುತ್, ವಿದ್ಯುತ್ ಕೈಕೊಟ್ಟರೆ ಇನ್ವರ್ಟರ್ ಸೇರಿ ಯಾವುದೇ ಸೌಕರ್ಯಗಳು ಇಲ್ಲದಿರುವುದು ಸಾಮಾನ್ಯ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಖಾಸಗಿ ಆಸ್ಪತ್ರೆಗೆ ಹೋದರೆ ಲಕ್ಷಾಂತರ ರೂ. ಕೊಡಬೇಕು, ದುಡ್ಡಿಲ್ಲದ ಕಾರಣ ಸರ್ಕಾರಿ ಆಸ್ಪತ್ರೆಗೆ ಹೋದರೆ ಪ್ರಾಣವನ್ನೇ ತ್ಯಾಗ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜನ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.
A pregnant mother and her baby have died after doctors at a hospital carried out a Caesarian delivery using a cellphone torch. And, if the incident wasn't shocking enough, this has happened in the country's financial capital in a hospital run by India's richest civic body - the Brihanmumbai Municipal Corporation, whose budget is over Rs 52,000 crore.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am