ಬ್ರೇಕಿಂಗ್ ನ್ಯೂಸ್
04-05-24 03:27 pm HK News Desk ದೇಶ - ವಿದೇಶ
ನವದೆಹಲಿ, ಮೇ.4: ಸೂರತ್ ಮತ್ತು ಇಂದೋರ್ ನಂತರ ಒಡಿಶಾದ ಪುರಿ ಲೋಕಸಭೆ ಕ್ಷೇತ್ರದಲ್ಲಿಯೂ ಕಾಂಗ್ರೆಸಿಗೆ ಭಾರಿ ಶಾಕ್ ಉಂಟಾಗಿದೆ. ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಚರಿತ ಮೊಹಾಂತಿ ಅವರು ಪಕ್ಷ ಹಣ ನೀಡಿಲ್ಲ ಎಂದು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.
ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಸುಚರಿತ ಮೊಹಾಂತಿ ಅವರಿಗೆ ಟಿಕೆಟ್ ನೀಡಿತ್ತು. ಆದರೆ ಸುಚರಿತ ಅವರು ಟಿಕೆಟ್ ವಾಪಸ್ ನೀಡಿದ್ದು ಸ್ಪರ್ಧೆ ಮಾಡಲ್ಲ ಎಂದಿದ್ದಾರೆ. ಇಲ್ಲಿ ಬಿಜೆಪಿಯ ಹಿರಿಯ ನಾಯಕ ಸಂಭಿತ್ ಪಾತ್ರಾ ಸ್ಪರ್ಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದರಿಂದ ಬಿಜೆಪಿ ಹಾದಿ ಸುಲಭವಾಗಿದೆ.
ಇದಕ್ಕೂ ಮೊದಲು ಗುಜರಾತಿನ ಸೂರತ್ ಮತ್ತು ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ತಮ್ಮ ನಾಮಪತ್ರ ಹಿಂಪಡೆದು ಪಕ್ಷದ ನಾಯಕರಿಗೆ ಶಾಕ್ ನೀಡಿದ್ದರು. ಇಂದೋರ್ ಕಾಂಗ್ರೆಸ್ ಅಭ್ಯರ್ಥಿ ನಂತರ ಬಿಜೆಪಿ ಸೇರಿದ್ದರೆ, ಅತ್ತ ಸೂರತ್‌ನಲ್ಲಿ ಬೇರಾವುದೇ ಅಭ್ಯರ್ಥಿ ಇಲ್ಲದೇ ಇದ್ದುದರಿಂದ ಬಿಜೆಪಿ ಅಭ್ಯರ್ಥಿ ಜಯಶಾಲಿ ಎಂದು ಘೋಷಿಸಲಾಗಿತ್ತು.
ಸುಚರಿತ ಮೊಹಾಂತಿ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಪತ್ರ ಬರೆದು, ಚುನಾವಣೆಗೆ ಸ್ಪರ್ಧಿಸಲು ಪಕ್ಷ ನೀಡಿರುವ ಮೊತ್ತವನ್ನು ತಮಗೆ ನೀಡಿಲ್ಲ ಎಂದಿದ್ದಾರೆ. ಹಣದ ಕೊರತೆಯಿಂದ ಪ್ರಚಾರಕ್ಕೆ ಬರಲು ಸಾಧ್ಯವಾಗುತ್ತಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಮೇ 25ರಂದು ಪುರಿ ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯಲಿದ್ದು, ಅದಕ್ಕೂ ಮುನ್ನವೇ ಕಾಂಗ್ರೆಸ್‌ಗೆ ಹೊಡೆತ ಬಿದ್ದಿದೆ.
In a setback for Congress, its Puri Lok Sabha candidate Sucharita Mohanty has declined to contest, citing little financial support from the cash-strapped party.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 11:12 am
HK News Staffer
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm