ಬ್ರೇಕಿಂಗ್ ನ್ಯೂಸ್
09-05-24 11:56 am HK News Desk ದೇಶ - ವಿದೇಶ
ನವದೆಹಲಿ, ಮೇ.9: ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಯಾನ ಸಂಸ್ಥೆಯ ಕ್ಯಾಬಿನ್ ಸಿಬಂದಿ ಅನಾರೋಗ್ಯ ನೆಪವೊಡ್ಡಿ ದಿಢೀರ್ ಆಗಿ ಸಾಮೂಹಿಕ ರಜೆ ಹಾಕಿದ್ದರಿಂದ ಬುಧವಾರ ಒಂದೇ ದಿನ 90ಕ್ಕೂ ಹೆಚ್ಚು ಏರ್ ಇಂಡಿಯಾ ವಿಮಾನಗಳ ಹಾರಾಟ ಸ್ಥಗಿತಗೊಂಡು ಪ್ರಯಾಣಿಕರು ತೀವ್ರ ಪರದಾಟ ಅನುಭವಿಸುವಂತಾಯಿತು.
ಬೆಂಗಳೂರು, ಕೊಚ್ಚಿ ಸೇರಿದಂತೆ ಹಲವು ವಿಮಾನ ನಿಲ್ದಾಣಗಳಲ್ಲಿ ಕೊನೆ ಕ್ಷಣದಲ್ಲಿ ದೇಶೀಯ ಮತ್ತು ಅಂತಾರಾಷ್ಟ್ರೀಯ ಮಾರ್ಗದ ವಿಮಾನಗಳ ಹಾರಾಟ ರದ್ದುಗೊಂಡಿದ್ದರಿಂದ ವಿಷಯ ತಿಳಿಯದೆ ಏರ್ಪೋರ್ಟ್ ತೆರಳಿದ್ದ ಪ್ರಯಾಣಿಕರು ಪೇಚಿಗೆ ಸಿಲುಕಿದ್ದು ಸಂಸ್ಥೆಯ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು. ಟಾಟಾ ಗ್ರೂಪ್ ಸಂಸ್ಥೆಯ ಏರ್ ಇಂಡಿಯಾ ಎಕ್ಸ್ ಪ್ರೆಸ್ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆಯ ಭಾಗವಾಗಿ ಸಿಬಂದಿ ಸಾಮೂಹಿಕ ರಜೆ ಹಾಕಿದ್ದಾರೆ ಎನ್ನಲಾಗಿದೆ. ಬುಧವಾರ ಹಠಾತ್ತಾಗಿ ಉದ್ಯೋಗಿಗಳು ರಜೆ ಹಾಕಿದ್ದರಿಂದ ವಿಮಾನ ಯಾನಕ್ಕೆ ತೊಡಕಾಗಿದ್ದು ದೇಶಾದ್ಯಂತ ಸಾವಿರಾರು ಪ್ರಯಾಣಿಕರು ಪರದಾಟ ಅನುಭವಿಸಿದ್ದಾರೆ.
ಸೋಮವಾರ ರಾತ್ರಿ ವೇಳೆ ನೂರಕ್ಕೂ ಹೆಚ್ಚು ಕ್ಯಾಬಿನ್ ಸಿಬಂದಿ ತಮಗೆ ಹುಷಾರಿಲ್ಲ ಎಂದು ಕರ್ತವ್ಯಕ್ಕೆ ರಜೆ ಹಾಕಿದ್ದರು. ಇದಕ್ಕೆ ಪ್ರತಿಯಾಗಿ ಏರ್ ಇಂಡಿಯಾ, 25ರಷ್ಟು ಹಿರಿಯ ಸಿಬಂದಿಯನ್ನು ಕೆಲಸದಿಂದ ತೆಗೆದು ಹಾಕಲು ನಿರ್ಧರಿಸಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಟಾಟಾ ಗ್ರೂಪ್ ಸಂಸ್ಥೆ, ಪ್ರಯಾಣಿಕರಿಗೆ ಆಗಿರುವ ಅನಾನುಕೂಲವನ್ನು ನಿವಾರಿಸಲು ಶಕ್ತಿಮೀರಿ ಪ್ರಯತ್ನಿಸುತ್ತೇವೆ. ಪ್ರಯಾಣಿಕರಿಗಾದ ತೊಂದರೆಗೆ ಕ್ಷಮೆ ಯಾಚಿಸುತ್ತೇವೆ. ಟಿಕೆಟ್ ಖರೀದಿಸಿದವರಿಗೆ ಪೂರ್ತಿ ಹಣ ಮರುಪಾವತಿ ಮಾಡುತ್ತೇವೆ. ಇಲ್ಲವೇ ಪ್ರಯಾಣದ ಸಮಯವನ್ನು ಮರು ನಿಗದಿ ಮಾಡುತ್ತೇವೆ ಎಂದು ಹೇಳಿದೆ.
ಉದ್ಯೋಗಿಗಳ ಗೈರು ಹಾಜರಿಯಿಂದ ಆಗಿರುವ ತೊಂದರೆಯಿಂದಾಗಿ ಕೆಲವು ವಿಮಾನಗಳನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗುವುದು ಎಂದು ವಿಮಾನ ಸಂಸ್ಥೆಯ ಸಿಇವೆ ಅಲೋಕ್ ಸಿಂಗ್ ತಿಳಿಸಿದ್ದಾರೆ. ನೂರಕ್ಕೂ ಹೆಚ್ಚು ಕ್ಯಾಬಿನ್ ಸಿಬಂದಿ ರಜೆ ಹಾಕಿದ್ದಾರೆ. ಇವರು ನಮ್ಮ ಸಂಸ್ಥೆಯ 2 ಸಾವಿರಕ್ಕೂ ಹೆಚ್ಚು ಕ್ಯಾಬಿನ್ ಸಿಬಂದಿಯನ್ನು ಪ್ರತಿನಿಧಿಸುವುದಿಲ್ಲ ಎಂದು ಹೇಳಿದ್ದಾರೆ.
Air India Express has sacked at least 30 cabin crew, a day after nearly 300 employees of the airline called in sick and switched off their phones, leading to large-scale flight disruptions. The number of job terminations is likely to increase. The management, sources said, has given an ultimatum to the employees to join work by 4 pm today or face action.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am